< Jenesis 32 >
1 Jekọb nʼonwe ya hapụrụ gawa nʼihu nʼije ya. Ndị mmụọ ozi Chineke zutere ya nʼụzọ.
೧ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.
2 Mgbe Jekọb hụrụ ha, o kwuru sị, “Ebe a bụ ụlọ ikwu Chineke!” Ọ kpọrọ ebe ahụ, Mahanaim.
೨ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.
3 Mgbe ahụ, Jekọb zipụrụ ndị ozi ka ha jee hụ Ịsọ nwanne ya nwoke nʼala Sia, nʼobodo Edọm.
೩ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.
4 O ziri ha ozi sị, “Ihe a bụ ihe unu ga-agwa nna m ukwu Ịsọ, ‘Odibo gị Jekọb kwuru sị, Ọ bụ na nke Leban ka m jere kemgbe, ọ bụkwa ebe ahụ ka m nọ ruo ugbu a.
೪ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು
5 Enwere m ọtụtụ ehi, na ịnyịnya ibu, na igwe atụrụ na ewu, na ndị odibo ndị nwoke na ndị nwanyị. Ana m ezigara onyenwe m ozi a ka m nata ihuọma nʼebe ọ nọ.’”
೫ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.
6 Mgbe ndị ozi ahụ lọghachikwutere Jekọb, ha gwara ya sị ya, “Anyị jekwuru nwanne gị nwoke Ịsọ dị ka i ziri anyị. Ugbu a, ọ na-abịa. Ọ chị narị ndị ikom anọ na-abịa izute gị.”
೬ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,
7 Ụjọ tụrụ Jekọb nke ukwuu, obi ya jupụtakwara na nsogbu. Nʼihi nke a, o kewara ndị niile so ya ụzọ abụọ, tinyere anụ ụlọ ya, na igwe ehi ya na ịnyịnya kamel ya.
೭ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
8 O chere nʼobi ya sị, “Ọ bụrụ na Ịsọ alụso otu nʼime ụzọ abụọ a ọgụ, otu ụzọ fọdụrụ ga-enwe ike gbalaga.”
೮ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.
9 Mgbe ahụ, Jekọb kpere ekpere sị, “Chineke nke nna m Ebraham, Chineke nke nna m Aịzik, Onyenwe anyị, gị onye gwara m sị, ‘Laghachi nʼala gị na nʼebe ụmụnna gị nọ, aga m eme ka ihe gaara gị nke ọma.’
೯ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
10 Ekwesighị m obi ebere na ikwesi ntụkwasị obi nke i gosiri ohu gị. Mgbe m gabigara Jọdan a, enweghị m ihe ọbụla karịa mkpanaka m, ma ugbu a, abụ m ọmụma ụlọ ikwu abụọ.
೧೦ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
11 Zọpụta m, arịọ m gị, site nʼaka nwanne m Ịsọ, nʼihi na egwu na-atụ m na ọ ga-abịa lụso m agha, lụsokwa ndị nne a na ụmụntakịrị ha agha.
೧೧ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,
12 Ọ bụ gị kwuru sị, ‘Aga m eme ka ihe gaara gị nke ọma, meekwa ka ụmụ ụmụ gị dịrị ka aja nke dị nʼọnụ osimiri, nke mmadụ na-apụghị ịgụta ọnụ.’”
೧೨‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.
13 Jekọb rahụrụ nʼebe ahụ nʼabalị ahụ. Site nʼihe niile o nwere, ọ họpụtara onyinye ọ ga-enye nwanne ya Ịsọ.
೧೩ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
14 Ọ kwadoro inye ya: narị nne ewu abụọ, iri mkpi abụọ, narị nne atụrụ abụọ, iri ebule abụọ
೧೪ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ
15 Iri nne ịnyịnya kamel atọ na ụmụ ha, na iri nne ehi anọ, oke ehi iri, iri nne ịnyịnya ibu abụọ, oke ịnyịnya ibu iri.
೧೫ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.
16 O weere onyinye ndị a niile nyefee nʼaka ndị ozi ya nʼusoro dịka ụdị ha si dị. Ọ gwara ndị na-ejere ya ozi sị ha, “Burunu ụzọ na-aga, meenụ ka ohere dị nʼetiti igwe anụ na igwe ibe ya.”
೧೬ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು.
17 O nyere onye mbụ iwu sị ha, “Mgbe Ịsọ nwanne m zutere unu jụọ unu ajụjụ sị, ‘Onye bụ nna unu ukwu? Ebee ka unu na-aga? Onye nwe anụ ụlọ ndị a niile unu chị na-aga?’
೧೭ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ,
18 Unu ga-aza sị ya, ‘Anụ ụlọ ndị a bụ nke ohu gị Jekọb. Ha bụ onyinye e zitere onyenwe m Ịsọ, lee ka ọ na-abịa nʼazụ anyị.’”
೧೮ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.
19 Otu ozi ahụ ka Jekọb ziri onye nke abụọ na onye nke atọ, na ndị ọzọ niile chị igwe anụ ụlọ, sị ha, “Unu ga-agwa Ịsọ otu ihe ahụ mgbe unu zutere ya.
೧೯ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.
20 Hụkwanụ na unu gwara ya sị, ‘Ohu gị Jekọb nọ nʼazụ anyị.’” Echiche ya bụ, “Aga m eji onyinye ndị a niile m na-ezipụrụ ya mee ka obi ya dajụọ, nke ọ ga-abụ mgbe mụ na ya zutere, ma eleghị anya, ọ ga-anabata m.”
೨೦ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.
21 Mgbe o zipụchasịrị onyinye ndị ahụ niile, Jekọb rahụrụ ụra nʼụlọ ikwu ya nʼabalị ahụ.
೨೧ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.
22 Nʼabalị ahụ, Jekọb biliri duru ndị nwunye ya abụọ na ndị odibo nwanyị ya abụọ, na ụmụ ya iri na otu, site nʼebe na-adịghị omimi nke iyi Jabọk kpọfee ha.
೨೨ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.
23 Mgbe ọ kpọfechara ha, o bufekwara ihe niile o nwere.
೨೩ಅವರನ್ನೂ, ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ
24 Emesịa, Jekọb lọghachiri nọdụ naanị ya. Mgbe ahụ, otu nwoke bịara gbaso ya mgba. Ha abụọ gbagidere mgba a tutu chi ebido ịbọ.
೨೪ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
25 Mgbe nwoke ahụ hụrụ na ọ pụghị imeri Jekọb na mgba ahụ, o tiri Jekọb aka nʼọkpụ, mee ka ọkpụ ya hịkwapụ site nʼọnọdụ ya.
೨೫ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.
26 Mgbe nke a mesịrị, nwoke ahụ gwara Jekọb sị ya: “Hapụ m aka ka m laa, nʼihi na chi ebidola ịbọ.” Ma Jekọb zara sị ya, “Ọ bụ naanị mgbe ị gọziri m ka m ga-ahapụ gị ka ị laa.”
೨೬ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.
27 Mgbe ahụ nwoke ahụ jụrụ Jekọb ajụjụ sị ya, “Gịnị bụ aha gị?” Ọ zara sị, “Aha m bụ Jekọb.”
೨೭ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ,
28 Nwoke ahụ zara sị ya, “Aha gị agaghị abụkwa Jekọb, kama ọ ga-abụ Izrel, nʼihi na gị na Chineke na ndị mmadụ gbara mgba, ị mmeri.”
೨೮ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
29 Jekọb sịrị, “Biko gwa m aha gị.” Ma ọ zaghachiri, “Gịnị mere ị ji ajụ aha m?” Mgbe ahụ, ọ gọziri ya nʼebe ahụ.
೨೯ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.
30 Jekọb kpọrọ aha ebe ahụ Peniel, nʼihi na ọ sịrị, “Ahụla m Chineke ihu na ihu, ma e chebere ndụ m.”
೩೦ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,
31 Anyanwụ awaala mgbe Jekọb si Peniel gafee. Ma nʼihi ihe mere ya nʼọkpụ, ọ naghị agazikwa ije.
೩೧ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
32 Ọ bụ ihe a mere ụmụ Izrel adịghị eri akwara anụ jikọtara ukwu anụ na ọkpụ ya ruo taa. Nʼihi na ihe ahụ mere Jekọb metụtara akwara ukwu ya.
೩೨ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.