< Ndị Hibru 5 >

1 A na-esite nʼetiti ndị mmadụ họrọ onyeisi nchụaja ọbụla, ka ọ nnọchite anya ndị mmadụ nʼihe banyere ife Chineke, ka ọ na-eche onyinye na-achụkwa aja maka mmehie dị iche iche.
ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.
2 Ebe ọ bụ na ya onwe ya bụ onye na-adịghị ike, ọ pụrụ iji nwayọọ na-emeso ndị na-amaghị ihe na ndị na-ejehie ụzọ omume.
ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.
3 Nʼihi nke a, ọ ghaghị ịchụ aja maka mmehie nke onwe ya na nke ndị mmadụ.
ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.
4 O nweghị onye na-ewere ugwu a nʼonwe ya, kama ọ bụ Chineke na-akpọ dịka o si kpọọ Erọn.
ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
5 Nʼotu aka ahụ kwa, Kraịst enyeghị onwe ya ebube nke ịbụ onyeisi nchụaja, kama Chineke sịrị ya, “Ị bụ Ọkpara m. Taa abụrụla m Nna gị.”
ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.
6 Nʼebe ọzọ, o kwuru, “Dị ka usoro Melkizedek si dị, ị bụ onye nchụaja ruo mgbe ebighị ebi.” (aiōn g165)
ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. (aiōn g165)
7 Mgbe ọ ka dị ndụ nʼanụ ahụ, o ji oke olu na anya mmiri kpee ekpere rịọkwa arịrịọ nye onye ahụ pụrụ ịzọpụta ya site nʼọnwụ. A nụkwara olu ya nʼihi ndụ nrube isi na mweda nʼala ya.
ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
8 Ọ bụ ezie na ọ bụ Ọkpara ma ọ mụtara irube isi site nʼahụhụ ọ tara.
ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
9 Ma mgbe e mere ka o zuo oke, ọ ghọrọ isi nke nzọpụta ebighị ebi nye ndị niile na-erubere ya isi. (aiōnios g166)
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. (aiōnios g166)
10 Ebe Chineke mere ya onyeisi nchụaja nʼusoro Melkizedek.
೧೦ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.
11 Ọ dị ọtụtụ ihe ọzọ anyị nwere ikwu banyere ya, ma o siri ike ịkọwa ya nʼihi na unu adịghị amụta ihe ọsịịsọ.
೧೧ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.
12 Nʼezie, ugbu a, unu kwesiri ịbụ ndị ozizi nye ndị ọzọ, ma unu ka nọ na-achọ onye ga-ezikwa unu ụkpụrụ mbụ nke okwu Chineke. Unu na-achọ mmiri ara kama nri siri ike.
೧೨ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
13 Onye ọbụla nke na-aṅụ ara, ka bụ nwantakịrị, ọ matabeghị ozizi banyere ezi omume.
೧೩ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.
14 Nri dị ike dịrị ndị tozuru oke, ndị siterela nʼihe ha na-eme zụọ onwe ha ịchọpụta ihe dị iche nʼetiti ezi ihe na ajọ ihe.
೧೪ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.

< Ndị Hibru 5 >