< Jọn 5 >
1 Mgbe nke a gasịrị, otu mmemme ndị Juu ruru, Jisọs agaa Jerusalem.
೧ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.
2 Ma otu ọdọ mmiri nta dị nʼime Jerusalem nʼakụkụ Ọnụ ụzọ ama Atụrụ. Aha ọdọ mmiri ahụ nʼasụsụ Hibru bụ Betsaida, nke nwere mgbe ọnụ ụzọ ise.
೨ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.
3 Nʼime ya ka igwe ndị ahụ na-esighị ike na-edina; ndị ìsì, ndị ngwụrọ, na ndị akụkụ ahụ ha kpọnwụrụ akpọnwụ, ha na-eche mgbe mmiri ahụ ga-enugharị.
೩ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)
4 Nʼihi na mmụọ ozi Onyenwe anyị na-agbadata site na mgbe ruo na mgbe gbarụọ mmiri ahụ. Onye ọrịa ọbụla buru ụzọ daba nʼime mmiri ahụ ma a gbarụọ ya, ka a na-agwọ ihe ọbụla bụ ọrịa ya.
೪
5 Otu nwoke nọ nʼebe ahụ bụ onye nọrọla nʼọrịa iri afọ atọ na asatọ.
೫ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.
6 Mgbe Jisọs hụrụ ya, matakwa na ọ nọọla nʼọnọdụ a ogologo oge, ọ jụrụ ya sị, “Ị chọrọ ka a gwọọ gị ọrịa?”
೬ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
7 Onye ọrịa ahụ zara, “Nna m ukwu, enweghị m onye ọbụla ga-enyere m aka kuba m nʼime ọdọ mmiri a ma a gbarụọ ya, mgbe o bụla m chọrọ ka m danye, onye ọzọ na-eburu m ụzọ danye.”
೭ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.
8 Jisọs gwara ya, “Bilie, chilie ute gị jegharịa.”
೮ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು.
9 Nʼotu oge ahụ, ahụ dịrị nwoke ahụ mma, ọ chịlịri ute ya, malite ijegharị. Ihe a mere nʼụbọchị izuike.
೯ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,
10 Ma ndị Juu gwara nwoke ahụ a gwọrọ ọrịa, “Taa bụ ụbọchị izuike, o megidere iwu na ị ga-ebu ute gị.”
೧೦ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,
11 Ma ọ zaghachiri ha, “Nwoke ahụ mere ka ahụ dị m mma sịrị m, ‘Chilie ute gị laa.’”
೧೧ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು.
12 Ha jụrụ ya, “Onye bụ onye ahụ gwara gị ka ị chilie ya laa?”
೧೨ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
13 Ma nwoke ahụ a gwọrọ amataghị onye ọ bụ nʼihi na Jisọs zoro onwe ya banye nʼetiti igwe mmadụ.
೧೩ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.
14 Emesịa, Jisọs hụrụ ya nʼime ụlọnsọ ukwu sị ya, “Lee, e mela ka ahụ dị gị mma, emehiekwala ọzọ ka nke dị njọ karịa nke a hapụ ịbịakwasị gị.”
೧೪ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
15 Nwoke a siri nʼebe ahụ pụọ gaa gwa ndị Juu na ọ bụ Jisọs gwọrọ ya.
೧೫ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.
16 Ya mere, nʼihi na Jisọs na-eme ihe ndị a nʼụbọchị izuike, ndị Juu malitere isogbu ya.
೧೬ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
17 Jisọs sịrị ha, “Nna m na-arụ ọrụ mgbe niile ruo ugbu a, mụ onwe m kwa, ana m arụ ọrụ.”
೧೭ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.
18 Nʼihi nke a, ndị Juu chọsịrị ike igbu ya. Ọ bụghị naanị na o mebiri ụbọchị izuike, kama ọ na-akpọkwa Chineke Nna ya, sitekwa otu a na-eme ka ya na Chineke hara.
೧೮ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.
19 Jisọs zara ha sị, “Nʼezie, nʼezie agwa m unu, o nweghị ihe ọbụla Ọkpara pụrụ ime nʼonwe ya; naanị ihe o nwere ike ime bụ ihe ọ hụrụ Nna ya na-eme, nʼihi na ihe ọbụla Nna ahụ na-eme ka Ọkpara ya na-emekwa.
೧೯ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.
20 Nʼihi na Nna ahụ hụrụ Ọkpara ya nʼanya ma na-egosikwa ya ihe niile ọ na-eme. Nʼezie ọ ga-agbagwoju unu anya nʼihi na ọ ga-egosi ya ihe karịrị ndị a.
೨೦ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.
21 Nʼihi na dị ka nna ahụ si akpọte ndị nwụrụ anwụ na-enyekwa ha ndụ, otu ahụ ka Ọkpara ya si enye onye ọbụla ọ masịrị ya ndụ.
೨೧ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.
22 Nna anaghị ekpe onye ọbụla ikpe, kama o nyefere ikpe niile nʼaka Ọkpara.
೨೨ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.
23 Ka mmadụ niile nye Ọkpara ahụ nsọpụrụ dị ka ha na-asọpụrụ Nna ahụ. Onye ọbụla nke na-adịghị asọpụrụ Ọkpara ahụ adịghị asọpụrụ Nna nke zitere ya.
೨೩ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.
24 “Nʼezie, nʼezie agwa m unu, onye ọbụla na-anụ okwu m ma kwerekwa nʼonye zitere m nwere ndụ ebighị ebi, a gaghị amakwa ya ikpe, ọ gafeela site nʼọnwụ banye na ndụ. (aiōnios )
೨೪ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. (aiōnios )
25 Nʼezie, nʼezie agwa m unu, oge na-abịa, ọ bịakwala ugbu a mgbe ndị nwụrụ anwụ ga-anụ olu Ọkpara Chineke, ndị ahụ nụrụ ya ga-adịkwa ndụ.
೨೫ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.
26 Dị ka Nna ahụ nwere ndụ nʼime onwe ya, otu a ka o nyekwara Ọkpara ahụ ike inwe ndụ nʼime onwe ya.
೨೬ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.
27 O nyekwala ya ikike ikpe ikpe nʼihi na ọ bụ Nwa nke Mmadụ.
೨೭ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.
28 “Ka nke a hapụ iju unu anya, nʼihi na oge na-abịa, mgbe ndị niile nọ nʼili ha ga-anụ olu ya
೨೮ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,
29 ma pụta, ndị mere ihe dị mma ga-ebili dịrị ndụ. Ma ndị mere ihe ọjọọ ga-ebili bụrụ ndị a ga-ama ikpe.
೨೯ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
30 Enweghị m ike ime ihe ọbụla nʼonwe m, ikpe m na-ekpe bụ naanị dị ka m nụrụ, ikpe m bụkwa nke ziri ezi, nʼihi na anaghị m eme ihe ga-amasị m, kama ọ bụ ihe ga-amasị onye ahụ zitere m.
೩೦“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
31 “Ọ bụrụ na m na-agba ama banyere onwe m, ama m abụghị eziokwu.
೩೧ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
32 Enwere m onye ọzọ na-agbara m ama, amatakwara m na ama ya banyere m bụ eziokwu.
೩೨ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
33 “Unu zigaara Jọn ndị ozi, ọ gbakwaala ama maka eziokwu ahụ.
೩೩ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.
34 Ọ bụghị na m na-anabata ama nke mmadụ, kama a na m ekwu ya ka enwe ike ịzọpụta unu.
೩೪ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.
35 Ọ bụ oriọna nke na-enwu na-amụkekwa, unu họrọkwara ịṅụrị ọṅụ nʼìhè ya nʼoge nta.
೩೫ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
36 “Ma e nwere m ama dị ukwuu karịa nke Jọn, nʼihi na ọrụ ahụ ya bụ Nna nyere m ka m rụchapụ, bụkwa nke m na-arụ, na-agbara m ama na ọ bụ Nna ahụ zitere m.
೩೬ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
37 Ya bụ Nna ahụ zitere m na-agbakwa ama nʼonwe ya banyere m. Unu anụbeghị olu maọbụ hụ ụdịdị ya.
೩೭ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
38 Okwu ya anọkwaghị nʼime unu nʼihi na unu ekweghị nʼonye o zitere.
೩೮ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.
39 Unu na-enyocha akwụkwọ nsọ nʼihi na unu chere na unu ga-esite na ha nwee ndụ ebighị ebi maọbụ ha na-agba ama banyere m. (aiōnios )
೩೯ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. (aiōnios )
40 Ma unu jụrụ ịbịakwute m ka unu nwee ndụ.
೪೦ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.
41 “Anaghị m anabata otuto nke ụmụ mmadụ.
೪೧“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,
42 Ma amatara m na unu enweghị ịhụnanya Chineke nʼobi unu.
೪೨ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.
43 Abịala m nʼaha Nna m ma unu anabataghị m. Ma ọ bụrụ na onye ọzọ abịa nʼaha nke onwe ya, unu ga-anabata ya.
೪೩ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.
44 Olee otu unu ga-esi kwere ebe unu na-anara otuto site nʼaka ibe unu, ma unu adịghị achọ otuto nke si nʼaka onye naanị ya bụ Chineke?
೪೪ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?
45 “Unu echela na m ga-ebo unu ebubo nʼihu Nna ahụ. Onye ga-ebo unu ebubo bụ Mosis, bụ onye unu tụkwasịrị obi na ya.
೪೫ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!
46 Ọ bụrụ na unu kwenyeere Mosis, unu gakwara ekwere na m, nʼihi na o dere banyere m.
೪೬ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.
47 Ma ebe unu na-ekweghị nʼihe o dere, olee otu unu ga-esi kwere nʼihe m kwuru?”
೪೭ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು.