< Joshua 13 >
1 Nʼoge a, Joshua aghọọla agadi nwoke, Onyenwe anyị kpọrọ ya sị ya, “Ugbu a, ị ghọọla agadi, ụbọchị ọgwụgwụ ndụ gị abịala nso, ma ọtụtụ ala fọdụrụ ndị a ga-emeri.
ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.
2 “Ndị a bụ ala nke fọdụrụ unu ga-enweta: “ala ndị Filistia niile na ala ndị Geshua niile,
“ಅವು ಯಾವುವೆಂದರೆ: “ಫಿಲಿಷ್ಟಿಯರ ಮತ್ತು ಗೆಷೂರ್ಯರ ದೇಶವೆಲ್ಲಾ ಅಂದರೆ,
3 site nʼosimiri Shaịho dị nʼọnụ Ijipt ruo nʼoke ala Ekrọn, nʼakụkụ ugwu ya, nke a gụnyere ndị Kenan, na ndịisi ise ndị Filistia: ndị Gaza, ndị Ashdọd, ndị Ashkelọn, ndị Gat, na ndị Ekrọn; nakwa ala ndị Ava,
ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;
4 site na ndịda ala ahụ niile dị nʼugwu; nʼala ndị Kenan, na Meara, nke bụ ala ndị Saịdọn, ruo nʼAfek, na oke ala ndị Amọrait;
ಸೀದೋನ್ಯರ ಆರಾ ಪ್ರದೇಶದಿಂದ ಅಫೇಕ್ ಮತ್ತು ಅಮೋರಿಯರ ಮೇರೆಯವರೆಗೆ ಕಾನಾನ್ಯರ ಎಲ್ಲಾ ದೇಶವು,
5 na ala ndị Gebal niile; na Lebanọn niile ruo nʼọwụwa anyanwụ, site Baal-Gad nʼokpuru ugwu Hemon ruo na mbata Hamat.
ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ.
6 “Ndị niile bi nʼala ugwu site na Lebanọn ruo Mizrefot Maim, ya bụ, ndị Saịdọn niile, Mụ onwe m ga-achụpụ ha site nʼihu ụmụ Izrel. Ihe dịrị gị bụ ike ala ahụ ka ọ bụrụ ihe nketa nye ndị Izrel, dịka mụ onwe m nyere gị iwu.
“ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಸೀದೋನ್ಯರನ್ನೂ ನಾನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ, ಇಸ್ರಾಯೇಲರಿಗೆ ಸೊತ್ತಾಗಿ ಪಾಲು ಕೊಡಬೇಕು.
7 Ya mere, kere ebo itoolu, na ọkara Manase, ala ndị a niile, ka ọ bụrụ ihe nketa ha.”
ಈಗ ಈ ದೇಶವನ್ನು ಒಂಬತ್ತು ಗೋತ್ರಗಳಿಗೂ ಮನಸ್ಸೆ ಕುಲದ ಅರ್ಧ ಗೋತ್ರಕ್ಕೆ ಸೊತ್ತಾಗಿ ಪಾಲು ಮಾಡಿಕೊಡು,” ಎಂದು ಹೇಳಿದರು.
8 Ọkara ebo Manase, na ebo Ruben, na Gad, enwetala ihe nketa ha nʼofe ọzọ nke Jọdan, nʼakụkụ ọwụwa anyanwụ, dịka Mosis onyeozi Onyenwe anyị nyere ha.
ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ:
9 Ala ha gbatịrị site nʼAroea nke dị na ndagwurugwu Anọn, na site nʼobodo dị nʼetiti ndagwurugwu ahụ, ruo nʼala dị larịị nke gbatịrị site na Medeba ruo Dibọn.
ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ
10 Ọ gbatịkwara ruo nʼoke ala ndị Amọn, tinyere obodo niile nke Saịhọn, eze ndị Amọrait na-achị mgbe o bi na Heshbọn.
ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಮೇರೆಯವರೆಗೂ ಇದ್ದ ಸಕಲ ಪಟ್ಟಣಗಳು.
11 Ọ gụnyekwara Gilead, nʼoke ala ndị Geshua, na ndị Maaka, na ugwu Hemon niile, na Bashan niile, ruokwa Saleka.
ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ.
12 Ya bụ, obodo niile nke Ọg eze ndị Bashan na-achị, mgbe isi alaeze ya dị nʼAshtarọt na Edrei. (Ọ bụ eze ikpeazụ nʼagbụrụ ndị Refaim.) Mosis busoro Saịhọn na Ọg agha, tigbuo ha, napụkwa ha ala ha.
ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
13 Ma ndị Izrel achụpụghị ndị Geshua na ndị Maaka, ya mere, ha nọgidere na-ebi nʼetiti ụmụ Izrel ruo taa.
ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ.
14 O nweghị ala o kenyere ebo Livayị. Nʼihi na Onyenwe anyị kwere ha nkwa na ihe nketa ha ga-abụ ihe aja onyinye niile e si nʼọkụ na-ewetara Onyenwe anyị Chineke Izrel.
ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು.
15 Nke a bụ ala Mosis nyere ebo Ruben dịka agbụrụ ha si dị, ka ọ bụrụ ihe nketa ha.
ಮೋಶೆಯು ರೂಬೇನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:
16 Ala ha gbatịrị site nʼAroea, na ndagwurugwu iyi Anọn, sitekwa nʼobodo dị nʼetiti ndagwurugwu ahụ na ala dị larịị gabiga gafee Medeba,
ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮೊದಲುಗೊಂಡು, ಮೇದೆಬಾದ ಬಳಿಯಲ್ಲಿರುವ ಸಕಲ ಸಮನಾದ ಭೂಮಿಯೂ,
17 ruo Heshbọn, na obodo ndị ọzọ dị nʼala larịị ahụ, tinyere obodo Dibọn, na Bamot Baal, na Bet-Baal-Meon,
ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್,
18 na Jahaz, na Kedemot, na Mefaat,
ಯಹಚ, ಕೆದೇಮೋತ್, ಮೇಫಾತ್,
19 na Kiriatem, na Sibma, na Zeret Shaha, nke dị nʼugwu nta dị na ndagwurugwu ahụ;
ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ ಶಹರ್,
20 na Bet-Peoa, na Bet-Jeshimọt, nke dị nʼebe dị na mgbada ugwu Pisga;
ಬೇತ್ ಪೆಗೋರ್ ಎಂಬ ಪಟ್ಟಣಗಳೂ ಪಿಸ್ಗಾದ ಕೆಳಗಡೆ ಇರುವ ಸೀಮೆ, ಬೇತ್ ಯೆಷೀಮೋತ್,
21 na obodo niile dị nʼala larịị ahụ, na ala Saịhọn niile, onye bụ eze ndị Amọrị nke chịrị na Heshbọn. Mosis lụgburu ya, lụgbukwaa ndịisi Midia bụ Evi, na nke Rekem, na nke Zua, na nke Hua, na nke Reba, ụmụ ndị eze ha na Saịhọn jikọtara aka buo agha.
ಸಮನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗೊಳಗಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಸೆದೆಬಡಿದನು.
22 Tinyere ndị ha gburu nʼọgbọ agha, ụmụ Izrel ji mma agha gbuo Belam nwa Beoa, onye na-agba aja.
ಇದಲ್ಲದೆ ಇಸ್ರಾಯೇಲರು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮನೆಂಬ ಕಣಿ ಹೇಳುವವನನ್ನು ಖಡ್ಗದಿಂದ ಕೊಂದುಹಾಕಿದರು.
23 Ya mere, oke ala ebo Ruben dị nʼọnụ mmiri osimiri Jọdan. Obodo ukwu na obodo nta ndị a bụ ihe ha nwetara dịka ihe nketa ha. Ezinaụlọ ọbụla nwetakwara oke nke ha dịka ikwu ha si dị.
ಯೊರ್ದನ್ ನದಿಯು ರೂಬೇನ್ ಗೋತ್ರಗಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ದೊರಕಿದ ಸೊತ್ತು.
24 Mosis nyekwara ebo Gad ala nke ha site nʼala ahụ ha lụgburu, dịka ikwu ha si dị.
ಮೋಶೆಯು ಗಾದನ ಗೋತ್ರಗಳಿಗೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:
25 Ndị a bụ ala ebo Gad nwetara: ala ahụ niile dị na Jeza, na obodo Gilead niile, na ọkara ala ndị Amọn nke ruru Areoa, nʼakụkụ Raba.
ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು.
26 Na ala sitere Heshbọn ruo Ramat Mizpa, na Betonim, na sitekwa Mahanaim ruo oke ala Debịa.
ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೊನೀಮ್ ಎಂಬ ಊರುಗಳವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯವರೆಗೂ ಇರುವ ದೇಶವು.
27 Nʼime ndagwurugwu ala ha bụ Bet-Haram, na Bet-Nimra, na Sukọt, na Zafọn, na ala fọdụrụ nʼalaeze Saịhọn eze Heshbọn, nke dị nʼakụkụ ọwụwa anyanwụ osimiri Jọdan nʼoke ala ya ruokwa nsọtụ osimiri Galili.
ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.
28 Obodo ndị a na obodo nta ndị ọzọ bụ ihe nketa ụmụ Gad dịka agbụrụ ha si dị.
ಈ ಪಟ್ಟಣಗಳೂ, ಇವುಗಳ ಗ್ರಾಮಗಳೂ ಗಾದ್ಯರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿವೆ.
29 Mosis nyekwara ikwu ọbụla dị nʼọkara ebo Manase ala nke ha, dịka mkpa ha si dị.
ಇದಲ್ಲದೆ ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಕೊಟ್ಟ ಸೊತ್ತು ಇವು:
30 Ala ha ketara gbatịrị ruo Mahanaim. Ọ bụ ha nwekwa ala Bashan niile, na ala niile Ọg, eze Bashan, na-achị, tinyere iri obodo nta isii dị na Bashan, nke Jaịa wuru. Ha nwetakwara
ಮಹನಯಿಮಿನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ, ಬಾಷಾನಿನಲ್ಲಿರುವ ಯಾಯೀರನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
31 ọkara Gilead, na Ashtarọt, na Edrei bụ isi obodo alaeze Ọg nʼime Bashan. Ala ndị a niile ka e nyere ọkara ebo Manase, ya bụ ikwu niile e nwere site nʼụmụ Makia, ọkpara Manase.
ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು.
32 Ndị a bụ otu Mosis si keere ụmụ Izrel ala dị nʼakụkụ ọwụwa anyanwụ osimiri Jọdan, mgbe ụmụ Izrel mara ụlọ ikwu ha nʼobosara ala Moab, na ncherita ihu obodo Jeriko.
ಹೀಗೆಯೇ ಮೋಶೆಯು ಯೊರ್ದನ್ ನದಿಗೆ ಆಚೆ ಯೆರಿಕೋವಿನ ಪೂರ್ವದಿಕ್ಕಿನಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಬಾಧ್ಯತೆಯಾಗಿ ಹಂಚಿದ ದೇಶಗಳು ಇವೆ.
33 Ma Mosis enyeghị ebo Livayị ala ọbụla, nʼihi na ọ gwara ha na Onyenwe anyị, Chineke Izrel bụ ihe nketa ha nwere, dịka o kwere ha na nkwa.
ಆದರೆ ಲೇವಿಯರ ಗೋತ್ರಕ್ಕೆ ಮೋಶೆಯು ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ದೇವರು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲರ ದೇವರಾದ ಯೆಹೋವ ದೇವರೇ ಅವರ ಸೊತ್ತು.