< Mazmur 14 >

1 Untuk pemimpin kor. Mazmur Daud. Orang dungu berkata dalam hati, "Tidak ada Allah." Perbuatan mereka jahat dan keji tidak ada yang berbuat baik.
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
2 Dari surga TUHAN memandang umat manusia untuk mencari orang bijak yang menyembah Dia.
ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
3 Tetapi semua orang sudah menyeleweng dan bejat, tak ada seorang pun yang berbuat baik.
ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.
4 Kata TUHAN, "Tak sadarkah orang-orang jahat itu? Mereka hidup dengan merampasi umat-Ku dan tak pernah berdoa kepada-Ku."
ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.
5 Orang jahat akan sangat ketakutan, sebab Allah melindungi orang yang taat kepada-Nya.
ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.
6 Orang jahat mau merintangi orang miskin, tetapi TUHAN menjadi pelindungnya.
ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.
7 Semoga dari Sion datang keselamatan bagi Israel! Maka keturunan Yakub akan bersukacita bila TUHAN memulihkan keadaan umat-Nya.
ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.

< Mazmur 14 >