+ Matius 1 >
1 Kitab ini mencatat tentang kisah Yesus sang Mesias, keturunan dari Daud, dan Daud adalah keturunan dari Abraham. Inilah permulaan garis keturunan-Nya.
೧ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
೨ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು.
3 Yehuda, Peres (dan Zerah, ibu mereka adalah Tamar), Hezron,
೩ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.
4 Ram, Aminadab, Nahason,
೪ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು.
5 Salmon, Boaz (ibunya bernama Rahab), Obed (ibunya adalah Rut), Isai,
೫ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.
6 Raja Daud, Salomo (ibunya adalah mantan istri Uria),
೬ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.
೭ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.
೮ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.
೯ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.
೧೦ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.
11 dan Yosia ayah Yoyakhin dan saudara-saudaranya, pada waktu pembuangan ke Babel.
೧೧ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.
12 Sesudah bangsa Israel kembali pulang dari penawanan di Babel sampai Yesus dilahirkan, inilah daftar nenek moyang-Nya, yaitu Sealtiel, Zerubabel,
೧೨ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು
೧೩ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು.
೧೪ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.
15 Eleazar, Matan, Yakub.
೧೫ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು.
16 Dan Yusuf yang adalah suami Maria, ibu Yesus, yang disebut Mesias.
೧೬ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.
17 Jadi mulai dari Abraham sampai Daud ada 14 generasi, dari Daud sampai bangsa Israel diangkut ke Babel sebagai tawanan ada 14 generasi, dan sesudah kembali dari penawanan sampai lahirnya Mesias, ada 14 generasi.
೧೭ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.
18 Inilah kisah kelahiran Yesus sang Mesias. Ibu-Nya, Maria bertunangan dengan Yusuf, tetapi sebelum mereka sah menjadi suami dan istri, Maria sudah hamil oleh karena kuasa Roh Kudus.
೧೮ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
19 Yusuf, tunangan Maria, adalah seorang pria yang baik dan tidak ingin mempermalukan Maria di depan umum, maka dia bermaksud untuk memutuskan pertunangan mereka dengan diam-diam.
೧೯ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
20 Sementara Yusuf sedang memikirkan hal ini, malaikat Tuhan datang kepadanya dalam mimpinya dan berkata, “Yusuf, keturunan Daud, janganlah takut untuk menikahi Maria sebab dia hamil oleh kuasa Roh Kudus.
೨೦ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
21 Dia akan melahirkan seorang anak laki-laki dan kamu akan memberi nama Yesus kepada anak itu, sebab anak itu akan menyelamatkan orang-orang dari dosa-dosa mereka.”
೨೧ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
22 (Semua ini terjadi untuk menepati janji-janji yang Tuhan berikan melalui nabinya:
೨೨ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
23 “Seorang perawan akan mengandung, dan akan melahirkan seorang anak laki-laki. Dan mereka akan menyebut anak itu Imanuel,” yang artinya “Allah ada bersama kita.”)
೨೩“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
24 Ketika Yusuf bangun dari tidurnya, dia melakukan apa yang dikatakan oleh malaikat Tuhan itu.
೨೪ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
25 Yusuf menikahi Maria, tapi tidak bersetubuh dengannya sampai sesudah Maria melahirkan seorang anak laki-laki, dan memberi-Nya nama Yesus.
೨೫ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.