< 1 Cronache 23 >
1 Davide, ormai vecchio e sazio di giorni, nominò re su Israele suo figlio Salomone.
೧ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.
2 Egli radunò tutti i capi di Israele, i sacerdoti e i leviti.
೨ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.
3 Si contarono i leviti, dai trent'anni in su; censiti, uno per uno, risultarono trentottomila.
೩ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.
4 «Di costoro ventiquattromila dirigano l'attività del tempio, seimila siano magistrati e giudici,
೪ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,
5 quattromila portieri e quattromila lodino il Signore con tutti gli strumenti inventati da me per lodarlo».
೫ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.
6 Davide divise in classi i figli di Levi: Gherson, Keat e Merari.
೬ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.
7 Dei Ghersoniti: Ladan e Simei.
೭ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಮತ್ತು ಶಿಮ್ಮೀ ಎಂಬುವರು.
8 Figli di Ladan: Iechièl, primo, Zetan e Gioele; tre.
೮ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು.
9 Figli di Simei: Selomìt, Cazièl, Aran; tre. Costoro sono i capi dei casati di Ladan.
೯ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.
10 Figli di Simei: Iacat, Ziza, Ieus, Beria; questi sono i quattro figli di Simei.
೧೦ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು.
11 Iacat era il capo e Ziza il secondo. Ieus e Beria non ebbero molti figli; riguardo al censimento furono considerati come unico casato.
೧೧ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು.
12 Figli di Keat: Amram, Isear, Ebron e Uzziel; quattro.
೧೨ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು.
13 Figli di Amram: Aronne e Mosè. Aronne fu scelto per consacrare le cose sacrosante, egli e i suoi figli, per sempre, perché offrisse incenso davanti al Signore, lo servisse e benedicesse in suo nome per sempre.
೧೩ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.
14 Riguardo a Mosè, uomo di Dio, i suoi figli furono contati nella tribù di Levi.
೧೪ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.
15 Figli di Mosè: Gherson ed Eliezèr.
೧೫ಮೋಶೆಯ ಮಕ್ಕಳು ಗೇರ್ಷೋಮ್ ಮತ್ತು ಎಲೀಯೆಜೆರ್ ಎಂಬುವವರು.
16 Figli di Gerson: Sebuèl, il primo.
೧೬ಪ್ರಧಾನನಾದ ಶೆಬೂವೇಲನು ಗೇರ್ಷೋಮನ ಮಗನು.
17 I figli di Eliezèr furono Recabia, il primo. Eliezèr non ebbe altri figli, mentre i figli di Recabia furono moltissimi.
೧೭ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು.
18 Figli di Isear: Selomìt, il primo.
೧೮ಪ್ರಧಾನನಾದ ಶೆಲೋಮೋತನು ಇಚ್ಹಾರನ ಮಗ.
19 Figli di Ebron: Ieria il primo, Amaria secondo, Iacaziel terzo, Iekameàm quarto.
೧೯ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.
20 Figli di Uzziel: Mica il primo, Icasia secondo.
೨೦ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.
21 Figli di Merari: Macli e Musi. Figli di Macli: Eleàzaro e Kis.
೨೧ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.
22 Eleàzaro morì senza figli, avendo soltanto figlie; le sposarono i figli di Kis, loro fratelli.
೨೨ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.
23 Figli di Musi: Macli, Eder e Ieremòt; tre.
೨೩ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು.
24 Questi sono i figli di Levi secondo i loro casati, i capifamiglia secondo il censimento, contati nominalmente, uno per uno, incaricati dei lavori per il servizio del tempio, dai venti anni in su.
೨೪ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.
25 Poiché Davide aveva detto: «Il Signore, Dio di Israele, ha concesso la tranquillità al suo popolo; egli si è stabilito in Gerusalemme per sempre,
೨೫ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,
26 anche i leviti non avranno più da trasportare la Dimora e tutti i suoi oggetti per il suo servizio».
೨೬ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.
27 Secondo le ultime disposizioni di Davide, il censimento dei figli di Levi si fece dai venti anni in su.
೨೭ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.
28 Dipendevano dai figli di Aronne per il servizio del tempio; presiedevano ai cortili, alle stanze, alla purificazione di ogni cosa sacra e all'attività per il servizio del tempio,
೨೮ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,
29 al pane dell'offerta, alla farina, all'offerta, alle focacce non lievitate, alle cose da cuocere sulle graticole e da friggere e a tutte le misure di capacità e di lunghezza.
೨೯ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,
30 Dovevano presentarsi ogni mattina per celebrare e lodare il Signore, così pure alla sera.
೩೦ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ
31 Presiedevano a tutti gli olocausti da offrire al Signore nei sabati, nei noviluni, nelle feste fisse, secondo un numero preciso e secondo le loro regole, sempre davanti al Signore.
೩೧ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.
32 Pensavano anche al servizio della tenda del convegno e al servizio del santuario e stavano agli ordini dei figli di Aronne, loro fratelli, per il servizio del tempio.
೩೨ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.