< 1 Corinzi 9 >
1 Non sono forse libero, io? Non sono un apostolo? Non ho veduto Gesù, Signore nostro? E non siete voi la mia opera nel Signore?
೧ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?
2 Anche se per altri non sono apostolo, per voi almeno lo sono; voi siete il sigillo del mio apostolato nel Signore.
೨ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.
3 Questa è la mia difesa contro quelli che mi accusano.
೩ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,
4 Non abbiamo forse noi il diritto di mangiare e di bere?
೪ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?
5 Non abbiamo il diritto di portare con noi una donna credente, come fanno anche gli altri apostoli e i fratelli del Signore e Cefa?
೫ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?
6 Ovvero solo io e Barnaba non abbiamo il diritto di non lavorare?
೬ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?
7 E chi mai presta servizio militare a proprie spese? Chi pianta una vigna senza mangiarne il frutto? O chi fa pascolare un gregge senza cibarsi del latte del gregge?
೭ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?
8 Io non dico questo da un punto di vista umano; è la Legge che dice così.
೮ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?
9 Sta scritto infatti nella legge di Mosè: Non metterai la museruola al bue che trebbia. Forse Dio si dà pensiero dei buoi?
೯“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?
10 Oppure lo dice proprio per noi? Certamente fu scritto per noi. Poiché colui che ara deve arare nella speranza di avere la sua parte, come il trebbiatore trebbiare nella stessa speranza.
೧೦ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.
11 Se noi abbiamo seminato in voi le cose spirituali, è forse gran cosa se raccoglieremo beni materiali?
೧೧ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?
12 Se gli altri hanno tale diritto su di voi, non l'avremmo noi di più? Noi però non abbiamo voluto servirci di questo diritto, ma tutto sopportiamo per non recare intralcio al vangelo di Cristo.
೧೨ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.
13 Non sapete che coloro che celebrano il culto traggono il vitto dal culto, e coloro che attendono all'altare hanno parte dell'altare?
೧೩ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
14 Così anche il Signore ha disposto che quelli che annunziano il vangelo vivano del vangelo.
೧೪ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.
15 Ma io non mi sono avvalso di nessuno di questi diritti, né ve ne scrivo perché ci si regoli in tal modo con me; preferirei piuttosto morire. Nessuno mi toglierà questo vanto!
೧೫ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.
16 Non è infatti per me un vanto predicare il vangelo; è un dovere per me: guai a me se non predicassi il vangelo!
೧೬ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!
17 Se lo faccio di mia iniziativa, ho diritto alla ricompensa; ma se non lo faccio di mia iniziativa, è un incarico che mi è stato affidato.
೧೭ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
18 Quale è dunque la mia ricompensa? Quella di predicare gratuitamente il vangelo senza usare del diritto conferitomi dal vangelo.
೧೮ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.
19 Infatti, pur essendo libero da tutti, mi sono fatto servo di tutti per guadagnarne il maggior numero:
೧೯ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.
20 mi sono fatto Giudeo con i Giudei, per guadagnare i Giudei; con coloro che sono sotto la legge sono diventato come uno che è sotto la legge, pur non essendo sotto la legge, allo scopo di guadagnare coloro che sono sotto la legge.
೨೦ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.
21 Con coloro che non hanno legge sono diventato come uno che è senza legge, pur non essendo senza la legge di Dio, anzi essendo nella legge di Cristo, per guadagnare coloro che sono senza legge.
೨೧ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.
22 Mi sono fatto debole con i deboli, per guadagnare i deboli; mi sono fatto tutto a tutti, per salvare ad ogni costo qualcuno.
೨೨ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.
23 Tutto io faccio per il vangelo, per diventarne partecipe con loro.
೨೩ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.
24 Non sapete che nelle corse allo stadio tutti corrono, ma uno solo conquista il premio? Correte anche voi in modo da conquistarlo!
೨೪ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.
25 Però ogni atleta è temperante in tutto; essi lo fanno per ottenere una corona corruttibile, noi invece una incorruttibile.
೨೫ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
26 Io dunque corro, ma non come chi è senza mèta; faccio il pugilato, ma non come chi batte l'aria,
೨೬ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.
27 anzi tratto duramente il mio corpo e lo trascino in schiavitù perché non succeda che dopo avere predicato agli altri, venga io stesso squalificato.
೨೭ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.