< 1 Re 10 >

1 La regina di Saba, sentita la fama di Salomone, venne per metterlo alla prova con enigmi.
ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.
2 Venne in Gerusalemme con ricchezze molto grandi, con cammelli carichi di aromi, d'oro in grande quantità e di pietre preziose. Si presentò a Salomone e gli disse quanto aveva pensato.
ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
3 Salomone rispose a tutte le sue domande, nessuna ve ne fu che non avesse risposta o che restasse insolubile per Salomone.
ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.
4 La regina di Saba, quando ebbe ammirato tutta la saggezza di Salomone, il palazzo che egli aveva costruito,
ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,
5 i cibi della sua tavola, gli alloggi dei suoi dignitari, l'attività dei suoi ministri, le loro divise, i suoi coppieri e gli olocausti che egli offriva nel tempio del Signore, rimase senza fiato.
ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.
6 Allora disse al re: «Era vero, dunque, quanto avevo sentito nel mio paese sul tuo conto e sulla tua saggezza!
ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
7 Io non avevo voluto credere a quanto si diceva, finché non sono giunta qui e i miei occhi non hanno visto; ebbene non me n'era stata riferita neppure una metà! Quanto alla saggezza e alla prosperità, superi la fama che io ne ho udita.
ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
8 Beati i tuoi uomini, beati questi tuoi ministri che stanno sempre davanti a te e ascoltano la tua saggezza!
ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.
9 Sia benedetto il Signore tuo Dio, che si è compiaciuto di te sì da collocarti sul trono di Israele. Nel suo amore eterno per Israele il Signore ti ha stabilito re perché tu eserciti il diritto e la giustizia».
ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.
10 Essa diede al re centoventi talenti d'oro, aromi in gran quantità e pietre preziose. Non arrivarono mai tanti aromi quanti ne portò la regina di Saba a Salomone.
೧೦ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.
11 Inoltre, la flotta di Chiram, che caricava oro in Ofir, portò da Ofir legname di sandalo in gran quantità e pietre preziose.
೧೧ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.
12 Con il legname di sandalo il re fece ringhiere per il tempio e per la reggia, cetre e arpe per i cantori. Mai più arrivò, né mai più si vide fino ad oggi, tanto legno di sandalo.
೧೨ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.
13 Il re Salomone diede alla regina di Saba quanto essa desiderava e aveva domandato, oltre quanto le aveva dato con mano regale. Quindi essa tornò nel suo paese con i suoi servi.
೧೩ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.
14 La quantità d'oro che affluiva nelle casse di Salomone ogni anno era di seicentosessantasei talenti,
೧೪ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.
15 senza contare quanto ne proveniva dai trafficanti e dai commercianti, da tutti i re dell'Arabia e dai governatori del paese.
೧೫ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.
16 Il re Salomone fece duecento scudi grandi d'oro battuto, per ciascuno dei quali adoperò seicento sicli d'oro,
೧೬ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.
17 e trecento scudi piccoli d'oro battuto, per ciascuno dei quali adoperò tre mine d'oro, e il re li collocò nel palazzo della Foresta del Libano.
೧೭ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
18 Inoltre, il re fece un grande trono d'avorio che rivestì d'oro puro.
೧೮ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು
19 Il trono aveva sei gradini; sullo schienale c'erano teste di vitello; il sedile aveva due bracci laterali, ai cui fianchi si ergevano due leoni.
೧೯ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.
20 Dodici leoni si ergevano di qua e di là, sui sei gradini; non ne esistevano di simili in nessun regno.
೨೦ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
21 Tutti i vasi per le bevande del re Salomone erano d'oro; tutti gli arredi del palazzo della Foresta del Libano erano d'oro fino; al tempo di Salomone l'argento non si stimava nulla.
೨೧ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.
22 Difatti il re aveva in mare la flotta di Tarsis, oltre la flotta di Chiram; ogni tre anni la flotta di Tarsis portava carichi d'oro e d'argento, d'avorio, di scimmie e di babbuini.
೨೨ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.
23 Il re Salomone superò, dunque, per ricchezza e saggezza, tutti i re della terra.
೨೩ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
24 In ogni parte della terra si desiderava di avvicinare Salomone per ascoltare la saggezza che Dio aveva messo nel suo cuore.
೨೪ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.
25 Ognuno gli portava, ogni anno, offerte d'argento e oggetti d'oro, vesti, armi, aromi, cavalli e muli.
೨೫ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
26 Salomone radunò carri e cavalli; aveva millequattrocento carri e dodicimila cavalli, distribuiti nelle città per i carri e presso il re in Gerusalemme.
೨೬ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.
27 Fece sì che in Gerusalemme l'argento abbondasse come le pietre e rese il legname di cedro tanto comune quanto i sicomòri che crescono nella Sefela.
೨೭ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.
28 I cavalli di Salomone provenivano da Muzri e da Kue; i mercanti del re li compravano in Kue.
೨೮ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
29 Un carro, importato da Muzri, costava seicento sicli d'argento, un cavallo centocinquanta. In tal modo tutti i re degli Hittiti e i re di Aram vendevano i loro cavalli.
೨೯ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.

< 1 Re 10 >