< 2 Cronache 13 >
1 Nell'anno diciottesimo del re Geroboamo divenne re di Giuda Abia.
೧ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,
2 Regnò tre anni in Gerusalemme; sua madre, di Gàbaa, si chiamava Maaca, figlia di Urièl. Ci fu guerra fra Abia e Geroboamo.
೨ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.
3 Abia attaccò battaglia con un esercito di valorosi, quattrocentomila uomini scelti. Geroboamo si schierò in battaglia contro di lui con ottocentomila uomini scelti.
೩ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.
4 Abia si pose sul monte Semaraim, che è sulle montagne di Efraim e gridò: «Ascoltatemi, Geroboamo e tutto Israele!
೪ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.
5 Non sapete forse che il Signore, Dio di Israele, ha concesso il regno a Davide su Israele per sempre, a lui e ai suoi figli con un'alleanza inviolabile?
೫ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?
6 Geroboamo figlio di Nebàt, ministro di Salomone figlio di Davide, è sorto e si è ribellato contro il suo padrone.
೬ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು.
7 Presso di lui si sono radunati uomini sfaccendati e iniqui; essi si fecero forti contro Roboamo figlio di Salomone. Roboamo era giovane, timido di carattere; non fu abbastanza forte di fronte a loro.
೭ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
8 Ora voi pensate di imporvi sul regno del Signore, che è nelle mani dei figli di Davide, perché siete una grande moltitudine e con voi sono i vitelli d'oro, che Geroboamo vi ha fatti come dei.
೮ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
9 Non avete forse voi scacciato i sacerdoti del Signore, figli di Aronne, e i leviti e non vi siete costituiti sacerdoti come i popoli degli altri paesi? Chiunque si è presentato con un giovenco di armento e con sette arieti a farsi consacrare è divenuto sacerdote di chi non è Dio.
೯ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.
10 Quanto a noi, il Signore è nostro Dio; non l'abbiamo abbandonato. I sacerdoti, che prestano servizio al Signore, sono figli di Aronne e leviti sono gli addetti alle funzioni.
೧೦ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.
11 Essi offrono al Signore olocausti ogni mattina e ogni sera, il profumo fragrante, i pani dell'offerta su una tavola monda, dispongono i candelabri d'oro con le lampade da accendersi ogni sera, perché noi osserviamo i comandi del Signore nostro Dio, mentre voi lo avete abbandonato.
೧೧ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
12 Ecco noi abbiamo, alla nostra testa, Dio con noi; i suoi sacerdoti e le trombe squillanti stanno per suonare la carica contro di voi. Israeliti, non combattete contro il Signore, Dio dei vostri padri, perché non avrete successo».
೧೨ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.
13 Geroboamo li aggirò con un agguato per assalirli alle spalle. Le truppe stavano di fronte a Giuda, mentre coloro che erano in agguato si trovavano alle spalle.
೧೩ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.
14 Quelli di Giuda si volsero. Avendo da combattere di fronte e alle spalle, gridarono al Signore e i sacerdoti suonarono le trombe.
೧೪ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.
15 Tutti quelli di Giuda alzarono grida. Mentre quelli di Giuda emettevano grida, Dio sconfisse Geroboamo e tutto Israele di fronte ad Abia e a Giuda.
೧೫ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.
16 Gli Israeliti fuggirono di fronte a Giuda; Dio li aveva messi in potere di costoro.
೧೬ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.
17 Abia e la sua truppa inflissero loro una grave sconfitta; fra gli Israeliti caddero morti cinquecentomila uomini scelti.
೧೭ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
18 In quel tempo furono umiliati gli Israeliti, mentre si rafforzarono quelli di Giuda, perché avevano confidato nel Signore, Dio dei loro padri.
೧೮ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.
19 Abia inseguì Geroboamo; gli prese le seguenti città: Betel con le dipendenze, Iesana con le dipendenze ed Efron con le dipendenze.
೧೯ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
20 Durante la vita di Abia Geroboamo non ebbe più forza alcuna; il Signore lo colpì ed egli morì.
೨೦ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.
21 Abia, invece, si rafforzò; egli prese quattordici mogli e generò ventidue figli e sedici figlie.
೨೧ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
22 Le altre gesta di Abia, le sue azioni e le sue parole, sono descritte nella memoria del profeta Iddo.
೨೨ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.