< Deuteronomio 5 >
1 Mosè convocò tutto Israele e disse loro: «Ascolta, Israele, le leggi e le norme che oggi io proclamo dinanzi a voi: imparatele e custoditele e mettetele in pratica.
೧ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
2 Il Signore nostro Dio ha stabilito con noi un'alleanza sull'Oreb.
೨ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.
3 Il Signore non ha stabilito questa alleanza con i nostri padri, ma con noi che siamo qui oggi tutti in vita.
೩ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.
4 Il Signore vi ha parlato faccia a faccia sul monte dal fuoco,
೪ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.
5 mentre io stavo tra il Signore e voi, per riferirvi la parola del Signore, perché voi avevate paura di quel fuoco e non eravate saliti sul monte. Egli disse:
೫ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ,
6 Io sono il Signore, tuo Dio, che ti ho fatto uscire dal paese di Egitto, dalla condizione servile.
೬“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.
7 Non avere altri dei di fronte a me.
೭ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
8 Non ti farai idolo né immagine alcuna di ciò che è lassù in cielo, né di ciò che è quaggiù sulla terra, né di ciò che è nelle acque sotto la terra.
೮“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
9 Non ti prostrerai davanti a quelle cose e non le servirai. Perché io il Signore tuo Dio sono un Dio geloso, che punisce la colpa dei padri nei figli fino alla terza e alla quarta generazione per quanti mi odiano,
೯ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.
10 ma usa misericordia fino a mille generazioni verso coloro che mi amano e osservano i miei comandamenti.
೧೦ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.
11 Non pronunciare invano il nome del Signore tuo Dio perché il Signore non ritiene innocente chi pronuncia il suo nome invano.
೧೧“ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
12 Osserva il giorno di sabato per santificarlo, come il Signore Dio tuo ti ha comandato.
೧೨“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.
13 Sei giorni faticherai e farai ogni lavoro,
೧೩ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
14 ma il settimo giorno è il sabato per il Signore tuo Dio: non fare lavoro alcuno né tu, né tuo figlio, né tua figlia, né il tuo schiavo, né la tua schiava, né il tuo bue, né il tuo asino, né alcuna delle tue bestie, né il forestiero, che sta entro le tue porte, perché il tuo schiavo e la tua schiava si riposino come te.
೧೪ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
15 Ricordati che sei stato schiavo nel paese d'Egitto e che il Signore tuo Dio ti ha fatto uscire di là con mano potente e braccio teso; perciò il Signore tuo Dio ti ordina di osservare il giorno di sabato.
೧೫ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.
16 Onora tuo padre e tua madre, come il Signore Dio tuo ti ha comandato, perché la tua vita sia lunga e tu sii felice nel paese che il Signore tuo Dio ti dà.
೧೬“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
18 Non commettere adulterio.
೧೮“ವ್ಯಭಿಚಾರ ಮಾಡಬಾರದು.
20 Non pronunciare falsa testimonianza contro il tuo prossimo.
೨೦“ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು.
21 Non desiderare la moglie del tuo prossimo. Non desiderare la casa del tuo prossimo, né il suo campo, né il suo schiavo, né la sua schiava, né il suo bue, né il suo asino, né alcuna delle cose che sono del tuo prossimo.
೨೧“ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
22 Queste parole pronunciò il Signore, parlando a tutta la vostra assemblea, sul monte, dal fuoco, dalla nube e dall'oscurità, con voce poderosa, e non aggiunse altro. Le scrisse su due tavole di pietra e me le diede.
೨೨ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.
23 All'udire la voce in mezzo alle tenebre, mentre il monte era tutto in fiamme, i vostri capitribù e i vostri anziani si avvicinarono tutti a me
೨೩ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,
24 e dissero: Ecco il Signore nostro Dio ci ha mostrato la sua gloria e la sua grandezza e noi abbiamo udito la sua voce dal fuoco; oggi abbiamo visto che Dio può parlare con l'uomo e l'uomo restare vivo.
೨೪“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.
25 Ma ora, perché dovremmo morire? Questo grande fuoco infatti ci consumerà; se continuiamo a udire ancora la voce del Signore nostro Dio moriremo.
೨೫ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.
26 Poiché chi tra tutti i mortali ha udito come noi la voce del Dio vivente parlare dal fuoco ed è rimasto vivo?
೨೬ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?
27 Avvicinati tu e ascolta quanto il Signore nostro Dio dirà; ci riferirai quanto il Signore nostro Dio ti avrà detto e noi lo ascolteremo e lo faremo.
೨೭ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.
28 Il Signore udì le vostre parole, mentre mi parlavate, e mi disse: Ho udito le parole che questo popolo ti ha rivolte; quanto hanno detto va bene.
೨೮ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.
29 Oh, se avessero sempre un tal cuore, da temermi e da osservare tutti i miei comandi, per essere felici loro e i loro figli per sempre!
೨೯ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”
30 Và e dì loro: Tornate alle vostre tende; ma tu resta qui con me
೩೦“‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ’ ಎಂದು ಅವರಿಗೆ ಆಜ್ಞಾಪಿಸು.
31 e io ti detterò tutti i comandi, tutte le leggi e le norme che dovrai insegnare loro, perché le mettano in pratica nel paese che io sto per dare in loro possesso.
೩೧ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
32 Badate dunque di fare come il Signore vostro Dio vi ha comandato; non ve ne discostate né a destra né a sinistra;
೩೨ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
33 camminate in tutto e per tutto per la via che il Signore vostro Dio vi ha prescritta, perché viviate e siate felici e rimaniate a lungo nel paese di cui avrete il possesso.
೩೩ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.