< Ezechiele 14 >
1 Vennero a trovarmi alcuni anziani d'Israele e sedettero dinanzi a me.
೧ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,
2 Mi fu rivolta allora questa parola del Signore:
೨ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,
3 «Figlio dell'uomo, questi uomini hanno posto idoli nel loro cuore e tengono fisso lo sguardo all'occasione della loro iniquità appena si mostri. Mi lascerò interrogare da loro?
೩“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
4 Parla quindi e dì loro: Dice il Signore Dio: Qualunque Israelita avrà innalzato i suoi idoli nel proprio cuore e avrà rivolto lo sguardo all'occasione della propria iniquità e verrà dal profeta, gli risponderò io, il Signore, riguardo alla moltitudine dei suoi idoli,
೪ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.
5 per raggiungere al cuore gli Israeliti, che si sono allontanati da me a causa di tutti i loro idoli.
೫ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
6 Riferisci pertanto al popolo d'Israele: Dice il Signore Dio: Convertitevi, abbandonate i vostri idoli e distogliete la faccia da tutte le vostre immondezze,
೬ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
7 poiché a qualunque Israelita e a qualunque straniero abitante in Israele, che si allontana da me e innalza nel suo cuore i suoi idoli e rivolge lo sguardo all'occasione della propria iniquità e poi viene dal profeta a consultarmi, risponderò io, il Signore, da me stesso.
೭“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
8 Distoglierò la faccia da costui e ne farò un esempio e un proverbio, e lo sterminerò dal mio popolo: saprete così che io sono il Signore.
೮ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
9 Se un profeta si lascia sedurre e fa una profezia, io, il Signore, ho sedotto quel profeta: stenderò la mano contro di lui e lo cancellerò dal mio popolo Israele.
೯“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
10 Ambedue porteranno la pena della loro iniquità. La pena di chi consulta sarà uguale a quella del profeta,
೧೦ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
11 perché gli Israeliti non vadano più errando lontano da me, né più si contaminino con tutte le loro prevaricazioni: essi saranno il mio popolo e io sarò il loro Dio. Parola del Signore».
೧೧ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.
12 Mi fu rivolta questa parola del Signore:
೧೨ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
13 «Figlio dell'uomo, se un paese pecca contro di me e si rende infedele, io stendo la mano sopra di lui e gli tolgo la riserva del pane e gli mando contro la fame e stèrmino uomini e bestie;
೧೩“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.
14 anche se nel paese vivessero questi tre uomini: Noè, Daniele e Giobbe, essi con la loro giustizia salverebbero solo se stessi, dice il Signore Dio.
೧೪ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.
15 Oppure se io infestassi quel paese di bestie feroci, che lo privassero dei suoi figli e ne facessero un deserto che nessuno potesse attraversare a causa delle bestie feroci,
೧೫“ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
16 anche se in mezzo a quella terra ci fossero questi tre uomini, giuro com'è vero ch'io vivo, dice il Signore Dio: non salverebbero né figli né figlie, soltanto loro si salverebbero, ma la terra sarebbe un deserto.
೧೬ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.
17 Oppure, se io mandassi la spada contro quel paese e dicessi: Spada, percorri quel paese; e sterminassi uomini e bestie,
೧೭“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
18 anche se in mezzo a quel paese ci fossero questi tre uomini, giuro com'è vero ch'io vivo, dice il Signore: non salverebbero né figli né figlie, soltanto loro si salverebbero.
೧೮ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
19 Oppure, se io mandassi la peste contro quella terra e sfogassi nella strage lo sdegno e sterminassi uomini e bestie,
೧೯“ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
20 anche se in mezzo a quella terra ci fossero Noè, Daniele e Giobbe, giuro com'è vero ch'io vivo, dice il Signore Dio: non salverebbero né figli né figlie, soltanto essi si salverebbero per la loro giustizia.
೨೦ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
21 Dice infatti il Signore Dio: Quando manderò contro Gerusalemme i miei quattro tremendi castighi: la spada, la fame, le bestie feroci e la peste, per estirpare da essa uomini e bestie,
೨೧ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
22 ecco vi sarà in mezzo un residuo che si metterà in salvo con i figli e le figlie. Essi verranno da voi perché vediate la loro condotta e le loro opere e vi consoliate del male che ho mandato contro Gerusalemme, di quanto ho mandato contro di lei.
೨೨ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
23 Essi vi consoleranno quando vedrete la loro condotta e le loro opere e saprete che non invano ho fatto quello che ho fatto in mezzo a lei». Parola del Signore Dio.
೨೩ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.