< Ezechiele 39 >

1 «E tu, figlio dell'uomo, profetizza contro Gog e annunzia: Così dice il Signore Dio: Eccomi contro di te, Gog, principe capo di Mesech e di Tubal.
ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.
2 Io ti sospingerò e ti condurrò e dagli estremi confini del settentrione ti farò salire e ti condurrò sui monti d'Israele.
ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,
3 Spezzerò l'arco nella tua mano sinistra e farò cadere le frecce dalla tua mano destra.
ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.
4 Tu cadrai sui monti d'Israele con tutte le tue schiere e i popoli che sono con te: ti ho destinato in pasto agli uccelli rapaci d'ogni specie e alle bestie selvatiche.
ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.
5 Tu sarai abbattuto in aperta campagna, perché io l'ho detto. Oracolo del Signore Dio.
ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.
6 Manderò un fuoco su Magòg e sopra quelli che abitano tranquilli le isole: sapranno che io sono il Signore.
ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.
7 Farò conoscere il mio nome santo in mezzo al mio popolo Israele, e non permetterò che il mio santo nome sia profanato; le genti sapranno che io sono il Signore, santo in Israele.
“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”
8 Ecco, questo avviene e si compie - parola del Signore Dio -: è questo il giorno di cui ho parlato.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.
9 Gli abitanti delle città d'Israele usciranno e per accendere il fuoco bruceranno armi, scudi grandi e piccoli e archi e frecce e mazze e giavellotti e con quelle alimenteranno il fuoco per sette anni.
“ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
10 Non andranno a prendere la legna nei campi e neppure a tagliarla nei boschi perché faranno il fuoco con le armi: spoglieranno coloro che li avevano spogliati e deprederanno coloro che li avevano saccheggiati. Parola del Signore Dio.
೧೦ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.
11 In quel giorno assegnerò a Gog come sepolcro un luogo famoso in Israele, la valle di Abarìm, a oriente del mare: essa chiude il passo ai viandanti. Lì sarà sepolto Gog e tutta la sua moltitudine e quel luogo si chiamerà Valle della moltitudine di Gog.
೧೧“ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.
12 La casa di Israele darà loro sepoltura per sette mesi per purificare il paese.
೧೨ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.
13 Lì seppellirà tutto il popolo del paese e sarà per loro glorioso il giorno in cui manifesterò la mia gloria. Parola del Signore Dio.
೧೩ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.
14 Saranno scelti uomini che percorreranno di continuo il paese per seppellire con l'aiuto dei viandanti quelli che son rimasti a fior di terra, per renderla pura; cominceranno le ricerche alla fine del settimo mese.
೧೪ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.
15 Quando percorrendo il paese vedranno ossa umane, vi porranno un segnale, finché i becchini non le seppelliscano nella valle della moltitudine di Gog:
೧೫ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.
16 Hamonà sarà chiamata la città. Così purificheranno il paese.
೧೬ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.
17 A te, figlio dell'uomo, dice il Signore Dio: Annunzia agli uccelli d'ogni specie e a tutte le bestie selvatiche: Radunatevi, venite; raccoglietevi da ogni parte sul sacrificio che offro a voi, sacrificio grande, sui monti d'Israele. Mangerete carne e berrete sangue;
೧೭ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
18 mangerete carne d'eroi, berrete sangue di prìncipi del paese: montoni, agnelli, capri e tori grassi di Basàn, tutti.
೧೮ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.
19 Mangerete grasso a sazietà e berrete fino all'ebbrezza il sangue del sacrificio che preparo per voi.
೧೯ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ.
20 Alla mia tavola vi sazierete di cavalli e cavalieri, di eroi e di guerrieri d'ogni razza. Parola del Signore Dio.
೨೦ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.
21 Fra le genti manifesterò la mia gloria e tutte le genti vedranno la giustizia che avrò fatta e la mano che avrò posta su di voi.
೨೧“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.
22 La casa d'Israele da quel giorno in poi saprà che io, il Signore, sono il loro Dio.
೨೨ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.
23 Le genti sapranno che la casa d'Israele per la sua iniquità era stata condotta in schiavitù, perché si era ribellata a me e io avevo nascosto loro il mio volto e li avevo dati in mano ai loro nemici, perché tutti cadessero di spada.
೨೩“ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.
24 Secondo le loro nefandezze e i loro peccati io li trattai e nascosi loro la faccia.
೨೪ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”
25 Perciò così dice il Signore Dio: Ora io ristabilirò la sorte di Giacobbe, avrò compassione di tutta la casa d'Israele e sarò geloso del mio santo nome.
೨೫ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
26 Quando essi abiteranno nella loro terra tranquilli, senza che alcuno li spaventi, si vergogneranno di tutte le ribellioni che hanno commesse contro di me.
೨೬ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
27 Quando io li avrò ricondotti dalle genti e li avrò radunati dalle terre dei loro nemici e avrò mostrato in loro la mia santità, davanti a numerosi popoli,
೨೭ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.
28 allora sapranno che io, il Signore, sono il loro Dio, poiché dopo averli condotti in schiavitù fra le genti, li ho radunati nel loro paese e non ne ho lasciato fuori neppure uno.
೨೮“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
29 Allora non nasconderò più loro il mio volto, perché diffonderò il mio spirito sulla casa d'Israele». Parola del Signore Dio.
೨೯ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.

< Ezechiele 39 >