< Ezechiele 48 >
1 Questi sono i nomi delle tribù: dal confine settentrionale, lungo la via di Chetlòn che conduce ad Amat, fino a Cazer-Enòn, con a settentrione la frontiera di Damasco e lungo il confine di Amat, dal lato d'oriente fino al mare, sarà assegnata a Dan una parte.
೧ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು.
2 Sulla frontiera di Dan, dal limite orientale al limite occidentale: Aser, una parte.
೨ದಾನಿನ ದಕ್ಷಿಣ ದಿಕ್ಕಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಆಶೇರಿಗೆ ಒಂದು ಪಾಲು.
3 Sulla frontiera di Aser, dal limite orientale fino al limite occidentale: Nèftali, una parte.
೩ಆಶೇರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನಫ್ತಾಲಿಗೆ ಒಂದು ಪಾಲು.
4 Sulla frontiera di Nèftali, dal limite orientale fino al limite occidentale: Manàsse, una parte.
೪ನಫ್ತಾಲಿಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.
5 Sulla frontiera di Manàsse, dal limite orientale fino al limite occidentale: Efraim, una parte.
೫ಮನಸ್ಸೆಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಾಯೀಮಿಗೆ ಒಂದು ಪಾಲು.
6 Sulla frontiera di Efraim, dal limite orientale fino al limite occidentale: Ruben, una parte.
೬ಎಫ್ರಾಯೀಮಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.
7 Sulla frontiera di Ruben, dal limite orientale fino al limite occidentale: Giuda, una parte.
೭ರೂಬೇನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.
8 Sulla frontiera di Giuda, dal limite orientale fino al limite occidentale, starà la porzione che preleverete, larga venticinquemila cubiti e lunga come una delle parti dal limite orientale fino al limite occidentale: in mezzo sorgerà il santuario.
೮ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.
9 La parte che voi preleverete per il Signore avrà venticinquemila cubiti di lunghezza per ventimila di larghezza.
೯ನೀವು ಮೀಸಲು ಭೂಮಿಯಲ್ಲಿ ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳವು ಮತ್ತು ಅಗಲವು ಹತ್ತು ಸಾವಿರ ಮೊಳವಾಗಿದೆ.
10 Ai sacerdoti apparterrà la parte sacra del territorio, venticinquemila cubiti a settentrione e diecimila di larghezza a ponente, diecimila cubiti di larghezza a oriente e venticinquemila cubiti di lunghezza a mezzogiorno. In mezzo sorgerà il santuario del Signore.
೧೦ಮೀಸಲಾದ ಆ ಪವಿತ್ರ ಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರಕ್ಕೆ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳವು, ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವು, ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿದೆ. ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವುದು.
11 Essa apparterrà ai sacerdoti consacrati, ai figli di Zadòk, che furono fedeli alla mia osservanza e non si traviarono nel traviamento degli Israeliti come traviarono i leviti.
೧೧ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.
12 Sarà per loro come una parte sacra prelevata sulla parte consacrata del paese, cosa santissima, a fianco del territorio assegnato ai leviti.
೧೨ಲೇವಿಯರ ಪಾಲಿನ ಮೇರೆಯ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿ ಪವಿತ್ರವೂ ದೇಶದೊಳಗೆ ಮೀಸಲೂ ಆಗಿ ಯಾಜಕರಿಗೆ ಸೇರತಕ್ಕದ್ದಾಗಿದೆ.
13 I leviti, lungo il territorio dei sacerdoti, avranno venticinquemila cubiti di lunghezza per diecimila di larghezza: tutta la lunghezza sarà di venticinquemila cubiti e tutta la larghezza di diecimila.
೧೩ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.
14 Essi non ne potranno vendere né permutare, né potrà essere alienata questa parte migliore del paese, perché è sacra al Signore.
೧೪ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.
15 I cinquemila cubiti di lunghezza che restano sui venticinquemila, saranno terreno profano per la città, per abitazioni e dintorni; in mezzo sorgerà la città.
೧೫ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ.
16 Le sue misure saranno le seguenti: il lato settentrionale avrà quattromilacinquecento cubiti; il lato meridionale, quattromilacinquecento cubiti; il lato orientale quattromilacinquecento cubiti e il lato occidentale quattromilacinquecento cubiti.
೧೬ಪಟ್ಟಣದ ಅಳತೆಯು ಹೀಗಿರಬೇಕು: ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು, ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು; ಪೂರ್ವದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು ಮತ್ತು ಪಶ್ಚಿಮಕ್ಕೆ ನಾಲ್ಕು ಸಾವಿರದ ಐನೂರು ಮೊಳವು ಇರಬೇಕು.
17 I dintorni della città saranno duecentocinquanta cubiti a settentrione, duecentocinquanta a mezzogiorno, duecentocinquanta a oriente e duecentocinquanta a ponente.
೧೭ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು.
18 Rimarrà accanto alla parte sacra un terreno lungo diecimila cubiti a oriente e diecimila a occidente, i cui prodotti saranno il cibo per coloro che prestan servizio nella città,
೧೮ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಆ ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಆ ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು.
19 i quali saranno presi da tutte le tribù d'Israele.
೧೯ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ, ಪಟ್ಟಣದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಬಿತ್ತುವರು.
20 Tutta la zona sarà di venticinquemila cubiti per venticinquemila. Preleverete, come possesso della città, un quarto della zona sacra.
೨೦ಮೀಸಲಾದ ಪೂರ್ಣ ಕ್ಷೇತ್ರದ ಉದ್ದ ಇಪ್ಪತ್ತೈದು ಸಾವಿರ ಮೊಳವು, ಅಗಲ ಇಪ್ಪತ್ತೈದು ಸಾವಿರ ಮೊಳ ಮತ್ತು ನೀವು ಮೀಸಲಾಗಿ ಅರ್ಪಿಸುವ ಪವಿತ್ರ ಕ್ಷೇತ್ರವು ಪಟ್ಟಣಕ್ಕೆ ಒಳಪಟ್ಟು, ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು.
21 Il resto, da una parte e dall'altra della zona sacra e del possesso della città, su un fronte di venticinquemila cubiti della zona sacra a oriente, verso il confine orientale, e a ponente, su un fronte di venticinquemila cubiti verso il confine occidentale, parallelamente alle parti, sarà per il principe. La zona sacra e il santuario del tempio rimarranno in mezzo,
೨೧ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.
22 fra il possesso dei leviti e il possesso della città, e fra ciò che spetta al principe; quel che si trova tra la frontiera di Giuda e quella di Beniamino sarà del principe.
೨೨ಅರಸನ ಪಾಲಿನ ಎರಡು ಭಾಗಗಳ ಮಧ್ಯದಲ್ಲಿ ಲೇವಿಯರ ಪಾಲಿನ (ಬಡಗಣ) ಮೇರೆಯಿಂದ ಪಟ್ಟಣಕ್ಕೆ ಒಳಪಟ್ಟ ಭೂಮಿಯ (ತೆಂಕಣ) ಮೇರೆಯ ತನಕ ಅಂದರೆ ಯೆಹೂದದ (ತೆಂಕಣ) ಮೇರೆಯಿಂದ ಬೆನ್ಯಾಮೀನಿನ (ಬಡಗಣ) ಮೇರೆಯವರೆಗೆ ಅರಸನ ಪಾಲು ಹರಡಿರುವುದು.
23 Per le altre tribù, dalla frontiera orientale a quella occidentale: Beniamino, una parte.
೨೩ಉಳಿದ ಕುಲಗಳ ಪಾಲಿನ ಕ್ರಮವೇನೆಂದರೆ, ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು.
24 Al lato del territorio di Beniamino, dalla frontiera orientale a quella occidentale: Simeone, una parte.
೨೪ಬೆನ್ಯಾಮೀನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು.
25 Al lato del territorio di Simeone, dalla frontiera orientale a quella occidentale: Issacar, una parte.
೨೫ಸಿಮೆಯೋನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಇಸ್ಸಾಕಾರಿಗೆ ಒಂದು ಪಾಲು.
26 Al lato del territorio di Issacar, dalla frontiera orientale a quella occidentale: Zàbulon, una parte.
೨೬ಇಸ್ಸಾಕಾರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಜೆಬುಲೂನಿಗೆ ಒಂದು ಪಾಲು.
27 Al lato del territorio di Zàbulon, dalla frontiera orientale a quella occidentale: Gad, una parte.
೨೭ಜೆಬುಲೂನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಗಾದಿಗೆ ಒಂದು ಪಾಲು.
28 Al lato del territorio di Gad, dalla frontiera meridionale verso mezzogiorno, la frontiera andrà da Tamàr alle acque di Meriba-Kadès e al torrente che va al Mar Mediterraneo.
೨೮ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.
29 Questo è il territorio che voi dividerete a sorte in eredità alle tribù d'Israele e queste le loro parti, dice il Signore Dio.
೨೯ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ. ಕುಲಗಳ ಪಾಲುಗಳು ಇವೇ. ಇದು ಕರ್ತನಾದ ಯೆಹೋವನ ನುಡಿ.
30 Queste saranno le uscite della città: sul lato settentrionale: quattromilacinquecento cubiti.
೩೦ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ.
31 Le porte della città porteranno i nomi delle tribù d'Israele. Tre porte a settentrione: la porta di Ruben, una; la porta di Giuda, una; la porta di Levi, una.
೩೧ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು.
32 Sul lato orientale: quattromilacinquecento cubiti e tre porte: la porta di Giuseppe, una; la porta di Beniamino, una; la porta di Dan, una.
೩೨ಪೂರ್ವದ ಕಡೆಯ ಉದ್ದವು ನಾಲ್ಕು ಸಾವಿರದ ಇನ್ನೂರು ಮೊಳವಾಗಿದೆ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫನ ಬಾಗಿಲು; ಇನ್ನೊಂದು ಬೆನ್ಯಾಮೀನನ ಬಾಗಿಲು, ಮತ್ತೊಂದು ದಾನಿನ ಬಾಗಿಲು.
33 Sul lato meridionale: quattromilacinquecento cubiti e tre porte: la porta di Simeone, una; la porta di Issacar, una; la porta di Zàbulon, una.
೩೩ದಕ್ಷಿಣದ ಕಡೆಯಲ್ಲಿ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನನ ಬಾಗಿಲು, ಇನ್ನೊಂದು ಇಸ್ಸಾಕಾರನ ಬಾಗಿಲು, ಮತ್ತೊಂದು ಜೆಬುಲೂನಿನ ಬಾಗಿಲು.
34 Sul lato occidentale: quattromilacinquecento cubiti e tre porte: la porta di Gad, una; la porta di Aser, una; la porta di Nèftali, una.
೩೪ಪಶ್ಚಿಮದ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದಿನ ಬಾಗಿಲು, ಇನ್ನೊಂದು ಆಶೇರಿನ ಬಾಗಿಲು, ಮತ್ತೊಂದು ನಫ್ತಾಲಿನ ಬಾಗಿಲು.
35 Perimetro totale: diciottomila cubiti. La città si chiamerà da quel giorno in poi: Là è il Signore.
೩೫ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.