< Genesi 17 >
1 «Io sono Dio onnipotente: cammina davanti a me e sii integro. Quando Abram ebbe novantanove anni, il Signore gli apparve e gli disse:
೧ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
2 Porrò la mia alleanza tra me e te e ti renderò numeroso molto, molto».
೨ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು.
3 Subito Abram si prostrò con il viso a terra e Dio parlò con lui:
೩ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,
4 «Eccomi: la mia alleanza è con te e sarai padre di una moltitudine di popoli.
೪“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,
5 Non ti chiamerai più Abram ma ti chiamerai Abraham perché padre di una moltitudine di popoli ti renderò.
೫ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.
6 E ti renderò molto, molto fecondo; ti farò diventare nazioni e da te nasceranno dei re.
೬ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.
7 Stabilirò la mia alleanza con te e con la tua discendenza dopo di te di generazione in generazione, come alleanza perenne, per essere il Dio tuo e della tua discendenza dopo di te.
೭ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
8 Darò a te e alla tua discendenza dopo di te il paese dove sei straniero, tutto il paese di Canaan in possesso perenne; sarò il vostro Dio».
೮ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.
9 Disse Dio ad Abramo: «Da parte tua devi osservare la mia alleanza, tu e la tua discendenza dopo di te di generazione in generazione.
೯ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.
10 Questa è la mia alleanza che dovete osservare, alleanza tra me e voi e la tua discendenza dopo di te: sia circonciso tra di voi ogni maschio.
೧೦ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.
11 Vi lascerete circoncidere la carne del vostro membro e ciò sarà il segno dell'alleanza tra me e voi.
೧೧ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.
12 Quando avrà otto giorni, sarà circonciso tra di voi ogni maschio di generazione in generazione, tanto quello nato in casa come quello comperato con denaro da qualunque straniero che non sia della tua stirpe.
೧೨ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;
13 Deve essere circonciso chi è nato in casa e chi viene comperato con denaro; così la mia alleanza sussisterà nella vostra carne come alleanza perenne.
೧೩ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.
14 Il maschio non circonciso, di cui cioè non sarà stata circoncisa la carne del membro, sia eliminato dal suo popolo: ha violato la mia alleanza».
೧೪ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.
15 Dio aggiunse ad Abramo: «Quanto a Sarai tua moglie, non la chiamerai più Sarai, ma Sara.
೧೫ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.
16 Io la benedirò e anche da lei ti darò un figlio; la benedirò e diventerà nazioni e re di popoli nasceranno da lei».
೧೬ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.
17 Allora Abramo si prostrò con la faccia a terra e rise e pensò: «Ad uno di cento anni può nascere un figlio? E Sara all'età di novanta anni potrà partorire?».
೧೭ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.
18 Abramo disse a Dio: «Se almeno Ismaele potesse vivere davanti a te!».
೧೮ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು.
19 E Dio disse: «No, Sara, tua moglie, ti partorirà un figlio e lo chiamerai Isacco. Io stabilirò la mia alleanza con lui come alleanza perenne, per essere il Dio suo e della sua discendenza dopo di lui.
೧೯ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
20 Anche riguardo a Ismaele io ti ho esaudito: ecco, io lo benedico e lo renderò fecondo e molto, molto numeroso: dodici principi egli genererà e di lui farò una grande nazione.
೨೦ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.
21 Ma stabilirò la mia alleanza con Isacco, che Sara ti partorirà a questa data l'anno venturo».
೨೧ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.
22 Dio terminò così di parlare con lui e, salendo in alto, lasciò Abramo.
೨೨ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು.
23 Allora Abramo prese Ismaele suo figlio e tutti i nati nella sua casa e tutti quelli comperati con il suo denaro, tutti i maschi appartenenti al personale della casa di Abramo, e circoncise la carne del loro membro in quello stesso giorno, come Dio gli aveva detto.
೨೩ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.
24 Ora Abramo aveva novantanove anni, quando si fece circoncidere la carne del membro.
೨೪ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು.
25 Ismaele suo figlio aveva tredici anni quando gli fu circoncisa la carne del membro.
೨೫ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.
26 In quello stesso giorno furono circoncisi Abramo e Ismaele suo figlio.
೨೬ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
27 E tutti gli uomini della sua casa, i nati in casa e i comperati con denaro dagli stranieri, furono circoncisi con lui.
೨೭ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.