< Levitico 22 >
1 Il Signore disse ancora a Mosè:
ತರುವಾಯ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
2 «Ordina ad Aronne e ai suoi figli che si astengano dalle cose sante a me consacrate dagli Israeliti e non profanino il mio santo nome. Io sono il Signore.
“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡು, ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡದಂತೆ ಇಸ್ರಾಯೇಲರು ನನಗೆ ಸಲ್ಲಿಸುವ ಪರಿಶುದ್ಧವಾದವುಗಳನ್ನು ಗೌರವದಿಂದ ಅವರು ಪ್ರತ್ಯೇಕವಾಗಿರಿಸಬೇಕು. ನಾನೇ ಯೆಹೋವ ದೇವರು.
3 Ordina loro: Qualunque uomo della vostra discendenza che nelle generazioni future si accosterà, in stato d'immondezza, alle cose sante consacrate dagli Israeliti al Signore, sarà eliminato davanti a me. Io sono il Signore.
“ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು.
4 Nessun uomo della stirpe di Aronne, affetto da lebbra o da gonorrea, potrà mangiare le cose sante, finché non sia mondo. Così sarà di chi abbia toccato qualunque persona immonda per contatto con un cadavere o abbia avuto una emissione seminale
“‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
5 o di chi abbia toccato qualsiasi rettile da cui abbia contratto immondezza oppure un uomo che gli abbia comunicato un'immondezza di qualunque specie.
ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು,
6 La persona che abbia avuto tali contatti sarà immonda fino alla sera e non mangerà le cose sante prima di essersi lavato il corpo nell'acqua;
ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು.
7 dopo il tramonto del sole sarà monda e allora potrà mangiare le cose sante, perché esse sono il suo vitto.
ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ.
8 Il sacerdote non mangerà carne di bestia morta naturalmente o sbranata, per non rendersi immondo. Io sono il Signore.
ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.
9 Osserveranno dunque ciò che ho comandato, altrimenti porteranno la pena del loro peccato e moriranno per aver profanato le cose sante. Io sono il Signore che li santifico.
“‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.
10 Nessun estraneo mangerà le cose sante: né l'ospite di un sacerdote o il salariato potrà mangiare le cose sante.
“‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
11 Ma una persona, che il sacerdote avrà comprata con il denaro, ne potrà mangiare: così anche quelli che gli sono nati in casa: questi potranno mangiare il suo pane.
ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು.
12 La figlia di un sacerdote, sposata con un estraneo, non potrà mangiare le cose sante offerte mediante il rito dell'elevazione.
ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
13 Se invece la figlia del sacerdote è rimasta vedova o è stata ripudiata e non ha figli, se torna a stare da suo padre come quando era giovane, potrà mangiare il pane del padre; mentre nessun estraneo al sacerdozio potrà mangiarne.
ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.
14 Se uno mangia per errore una cosa santa, darà al sacerdote il valore della cosa santa, aggiungendovi un quinto.
“‘ಇದಲ್ಲದೆ ಯಾವನಾದರೂ ತಿಳಿಯದೆ ಪರಿಶುದ್ಧವಾದದ್ದನ್ನು ತಿಂದರೆ, ಅವನು ಅದರ ಐದನೆಯ ಪಾಲನ್ನು ಕೂಡಿಸಿ, ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡಬೇಕು.
15 I sacerdoti non profaneranno dunque le cose sante degli Israeliti, che essi offrono al Signore con la rituale elevazione,
ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
16 e non faranno portare loro la pena del peccato di cui si renderebbero colpevoli, mangiando le loro cose sante; poiché io sono il Signore che le santifico».
ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’”
17 Il Signore disse a Mosè:
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
18 «Parla ad Aronne, ai suoi figli, a tutti gli Israeliti e ordina loro: Chiunque della casa d'Israele o dei forestieri dimoranti in Israele presenta in olocausto al Signore un'offerta per qualsiasi voto o dono volontario,
“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
19 per essere gradito, dovrà offrire un maschio, senza difetto, di buoi, di pecore o di capre.
ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು.
20 Non offrirete nulla con qualche difetto, perché non sarebbe gradito.
ಆದರೆ ದೋಷವಿರುವ ಯಾವುದನ್ನೂ ಸಮರ್ಪಿಸಬಾರದು. ಏಕೆಂದರೆ ಅದು ನಿಮಗೋಸ್ಕರ ಅಂಗೀಕಾರವಾಗುವುದಿಲ್ಲ.
21 Se uno offre al Signore, in sacrificio di comunione, un bovino o un ovino, sia per sciogliere un voto, sia come offerta volontaria, la vittima, perché sia gradita, dovrà essere perfetta: senza difetti.
ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು.
22 Non offrirete al Signore nessuna vittima cieca o storpia o mutilata o con ulceri o con la scabbia o con piaghe purulente; non ne farete sull'altare un sacrificio consumato dal fuoco in onore del Signore.
ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.
23 Come offerta volontaria potrai presentare un bue o una pecora che abbia un membro troppo lungo o troppo corto; ma come offerta per qualche voto non sarebbe gradita.
ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.
24 Non offrirete al Signore un animale con i testicoli ammaccati o schiacciati o strappati o tagliati. Tali cose non farete nel vostro paese,
ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವುದನ್ನೂ ಯೆಹೋವ ದೇವರಿಗೆ ಸಮರ್ಪಿಸಬಾರದು. ನಿಮ್ಮ ದೇಶದೊಳಗಿರುವ ಅಂಥ ಯಾವ ಬಲಿಯನ್ನಾದರೂ ನೀವು ಸಮರ್ಪಿಸಬಾರದು.
25 né accetterete dallo straniero alcuna di queste vittime per offrirla come pane in onore del vostro Dio; essendo mutilate, difettose, non sarebbero gradite per il vostro bene».
ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’”
26 Il Signore aggiunse a Mosè:
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
27 «Quando nascerà un vitello o un agnello o un capretto, starà sette giorni sotto la madre; dall'ottavo giorno in poi, sarà gradito come vittima da consumare con il fuoco per il Signore.
“ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು.
28 Non scannerete vacca o pecora lo stesso giorno con il suo piccolo.
ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
29 Quando offrirete al Signore un sacrificio di ringraziamento, offritelo in modo che sia gradito.
“ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.
30 La vittima sarà mangiata il giorno stesso; non ne lascerete nulla fino al mattino. Io sono il Signore.
ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು.
31 Osserverete dunque i miei comandi e li metterete in pratica. Io sono il Signore.
“ಆದ್ದರಿಂದ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಮಾಡಬೇಕು. ನಾನೇ ಯೆಹೋವ ದೇವರು.
32 Non profanerete il mio santo nome, perché io mi manifesti santo in mezzo agli Israeliti. Io sono il Signore che vi santifico,
ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ.
33 che vi ho fatto uscire dal paese d'Egitto per essere vostro Dio. Io sono il Signore».
ನಿಮಗೆ ದೇವರಾಗಿರಲು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದೆನು. ನಾನೇ ಯೆಹೋವ ದೇವರು.”