< Marco 5 >

1 Intanto giunsero all'altra riva del mare, nella regione dei Gerasèni.
ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.
2 Come scese dalla barca, gli venne incontro dai sepolcri un uomo posseduto da uno spirito immondo.
ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.
3 Egli aveva la sua dimora nei sepolcri e nessuno più riusciva a tenerlo legato neanche con catene,
ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.
4 perché più volte era stato legato con ceppi e catene, ma aveva sempre spezzato le catene e infranto i ceppi, e nessuno più riusciva a domarlo.
ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ.
5 Continuamente, notte e giorno, tra i sepolcri e sui monti, gridava e si percuoteva con pietre.
ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
6 Visto Gesù da lontano, accorse, gli si gettò ai piedi,
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,
7 e urlando a gran voce disse: «Che hai tu in comune con me, Gesù, Figlio del Dio altissimo? Ti scongiuro, in nome di Dio, non tormentarmi!».
ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.
8 Gli diceva infatti: «Esci, spirito immondo, da quest'uomo!».
ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.
9 E gli domandò: «Come ti chiami?». «Mi chiamo Legione, gli rispose, perché siamo in molti».
ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.
10 E prese a scongiurarlo con insistenza perché non lo cacciasse fuori da quella regione.
ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
11 Ora c'era là, sul monte, un numeroso branco di porci al pascolo.
ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು.
12 E gli spiriti lo scongiurarono: «Mandaci da quei porci, perché entriamo in essi».
“ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.
13 Glielo permise. E gli spiriti immondi uscirono ed entrarono nei porci e il branco si precipitò dal burrone nel mare; erano circa duemila e affogarono uno dopo l'altro nel mare.
ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
14 I mandriani allora fuggirono, portarono la notizia in città e nella campagna e la gente si mosse a vedere che cosa fosse accaduto.
ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.
15 Giunti che furono da Gesù, videro l'indemoniato seduto, vestito e sano di mente, lui che era stato posseduto dalla Legione, ed ebbero paura.
ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.
16 Quelli che avevano visto tutto, spiegarono loro che cosa era accaduto all'indemoniato e il fatto dei porci.
ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.
17 Ed essi si misero a pregarlo di andarsene dal loro territorio.
ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.
18 Mentre risaliva nella barca, colui che era stato indemoniato lo pregava di permettergli di stare con lui.
ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.
19 Non glielo permise, ma gli disse: «Và nella tua casa, dai tuoi, annunzia loro ciò che il Signore ti ha fatto e la misericordia che ti ha usato».
ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.
20 Egli se ne andò e si mise a proclamare per la Decàpoli ciò che Gesù gli aveva fatto, e tutti ne erano meravigliati.
ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
21 Essendo passato di nuovo Gesù all'altra riva, gli si radunò attorno molta folla, ed egli stava lungo il mare.
ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.
22 Si recò da lui uno dei capi della sinagoga, di nome Giàiro, il quale, vedutolo, gli si gettò ai piedi
ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು,
23 e lo pregava con insistenza: «La mia figlioletta è agli estremi; vieni a imporle le mani perché sia guarita e viva».
“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.
24 Gesù andò con lui. Molta folla lo seguiva e gli si stringeva intorno.
ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.
25 Or una donna, che da dodici anni era affetta da emorragia
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.
26 e aveva molto sofferto per opera di molti medici, spendendo tutti i suoi averi senza nessun vantaggio, anzi peggiorando,
ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.
27 udito parlare di Gesù, venne tra la folla, alle sue spalle, e gli toccò il mantello. Diceva infatti:
ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
28 «Se riuscirò anche solo a toccare il suo mantello, sarò guarita».
ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.
29 E subito le si fermò il flusso di sangue, e sentì nel suo corpo che era stata guarita da quel male.
ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
30 Ma subito Gesù, avvertita la potenza che era uscita da lui, si voltò alla folla dicendo: «Chi mi ha toccato il mantello?».
ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.
31 I discepoli gli dissero: «Tu vedi la folla che ti si stringe attorno e dici: Chi mi ha toccato?».
ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.
32 Egli intanto guardava intorno, per vedere colei che aveva fatto questo.
ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು.
33 E la donna impaurita e tremante, sapendo ciò che le era accaduto, venne, gli si gettò davanti e gli disse tutta la verità.
ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.
34 Gesù rispose: «Figlia, la tua fede ti ha salvata. Và in pace e sii guarita dal tuo male».
ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.
35 Mentre ancora parlava, dalla casa del capo della sinagoga vennero a dirgli: «Tua figlia è morta. Perché disturbi ancora il Maestro?».
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.
36 Ma Gesù, udito quanto dicevano, disse al capo della sinagoga: «Non temere, continua solo ad aver fede!».
ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.
37 E non permise a nessuno di seguirlo fuorchè a Pietro, Giacomo e Giovanni, fratello di Giacomo.
ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.
38 Giunsero alla casa del capo della sinagoga ed egli vide trambusto e gente che piangeva e urlava.
ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.
39 Entrato, disse loro: «Perché fate tanto strepito e piangete? La bambina non è morta, ma dorme».
ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು.
40 Ed essi lo deridevano. Ma egli, cacciati tutti fuori, prese con sé il padre e la madre della fanciulla e quelli che erano con lui, ed entrò dove era la bambina.
ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.
41 Presa la mano della bambina, le disse: «Talità kum», che significa: «Fanciulla, io ti dico, alzati!».
ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.
42 Subito la fanciulla si alzò e si mise a camminare; aveva dodici anni. Essi furono presi da grande stupore.
ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.
43 Gesù raccomandò loro con insistenza che nessuno venisse a saperlo e ordinò di darle da mangiare.
ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.

< Marco 5 >