< Proverbi 20 >
1 Il vino è rissoso, il liquore è tumultuoso; chiunque se ne inebria non è saggio.
೧ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
2 La collera del re è simile al ruggito del leone; chiunque lo eccita rischia la vita.
೨ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
3 E' una gloria per l'uomo astenersi dalle contese, attaccar briga è proprio degli stolti.
೩ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
4 Il pigro non ara d'autunno, e alla mietitura cerca, ma non trova nulla.
೪ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
5 Come acque profonde sono i consigli nel cuore umano, l'uomo accorto le sa attingere.
೫ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.
6 Molti si proclamano gente per bene, ma una persona fidata chi la trova?
೬ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
7 Il giusto si regola secondo la sua integrità; beati i figli che lascia dietro di sé!
೭ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
8 Il re che siede in tribunale dissipa ogni male con il suo sguardo.
೮ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
9 Chi può dire: «Ho purificato il cuore, sono mondo dal mio peccato?».
೯“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
10 Doppio peso e doppia misura sono due cose in abominio al Signore.
೧೦ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
11 Gia con i suoi giochi il fanciullo dimostra se le sue azioni saranno pure e rette.
೧೧ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
12 L'orecchio che ascolta e l'occhio che vede: l'uno e l'altro ha fatto il Signore.
೧೨ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.
13 Non amare il sonno per non diventare povero, tieni gli occhi aperti e avrai pane a sazietà.
೧೩ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
14 «Robaccia, robaccia» dice chi compra: ma mentre se ne va, allora se ne vanta.
೧೪ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
15 C'è oro e ci sono molte perle, ma la cosa più preziosa sono le labbra istruite.
೧೫ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
16 Prendigli il vestito perché si è fatto garante per un altro e tienilo in pegno per gli estranei.
೧೬ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
17 E' piacevole all'uomo il pane procurato con frode, ma poi la sua bocca sarà piena di granelli di sabbia.
೧೭ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
18 Pondera bene i tuoi disegni, consigliandoti, e fà la guerra con molta riflessione.
೧೮ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
19 Chi va in giro sparlando rivela un segreto, non associarti a chi ha sempre aperte le labbra.
೧೯ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
20 Chi maledice il padre e la madre vedrà spegnersi la sua lucerna nel cuore delle tenebre.
೨೦ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
21 I guadagni accumulati in fretta da principio non saranno benedetti alla fine.
೨೧ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
22 Non dire: «Voglio ricambiare il male», confida nel Signore ed egli ti libererà.
೨೨ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
23 Il doppio peso è in abominio al Signore e le bilance false non sono un bene.
೨೩ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.
24 Dal Signore sono diretti i passi dell'uomo e come può l'uomo comprender la propria via?
೨೪ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
25 E' un laccio per l'uomo esclamare subito: «Sacro!» e riflettere solo dopo aver fatto il voto.
೨೫“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
26 Un re saggio passa al vaglio i malvagi e ritorna su di loro con la ruota.
೨೬ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.
27 Lo spirito dell'uomo è una fiaccola del Signore che scruta tutti i segreti recessi del cuore.
೨೭ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
28 Bontà e fedeltà vegliano sul re, sulla bontà è basato il suo trono.
೨೮ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.
29 Vanto dei giovani è la loro forza, ornamento dei vecchi è la canizie.
೨೯ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.
30 Le ferite sanguinanti spurgano il male, le percosse purificano i recessi del cuore.
೩೦ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.