< Deuteronomio 2 >
1 Poi noi ci rivolgemmo indietro, e andammo verso il deserto, traendo al mar rosso, come il Signore mi avea detto; e circuimmo il monte di Seir, per un lungo tempo.
೧ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
2 Poi il Signore mi disse: Voi avete assai circuito questo monte;
೨ಆ ಮೇಲೆ ಯೆಹೋವನು ನನಗೆ,
3 rivolgetevi verso il Settentrione.
೩“ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.
4 E comanda al popolo, e digli: Voi siete ora per passar per li confini de' figliuoli di Esaù, vostri fratelli, i quali dimorano in Seir; ed essi avranno paura di voi; ma però prendetevi gran guardia.
೪ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.
5 Non movete lor guerra; perciocchè io non vi darò [nulla] del lor paese, non pure un piè di terra; perciocchè io ho dato il monte di Seir per eredità a Esaù.
೫ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.
6 Comperate da loro con danari la vittuaglia che mangerete; comperate eziandio da loro con danari l'acqua che berrete.
೬ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು.
7 Conciossiachè il Signore Iddio tuo ti abbia benedetto in tutta l'opera delle tue mani; egli ha avuta cura di te, mentre sei camminato per questo gran deserto; il Signore Iddio tuo [è stato] teco questi quarant'anni, [e] tu non hai avuto mancamento di nulla.
೭ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.
8 Così noi passammo oltre, lasciati i figliuoli di Esaù, nostri fratelli, i quali abitano nel monte di Seir, fin dalla via della pianura, da Elat, e da Esion-gaber, e ci rivolgemmo, e passammo oltre, traendo verso il deserto di Moab.
೮ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.
9 E il Signore mi disse: Non nimicare i Moabiti, e non mover loro guerra; perciocchè io non ti darò [nulla] del lor paese a possedere; conciossiachè io abbia dato Ar per eredità a' figliuoli di Lot.
೯ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
10 (Già abitavano quel [paese] gli Emei, gente grande, possente, e d'alta statura, come gli Anachiti.
೧೦ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.
11 Ed erano anch'essi riputati giganti, come gli Anachiti; e i Moabiti li chiamavano Emei.
೧೧ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.
12 E in Seir già abitavano gli Horei; ma i figliuoli di Esaù li cacciarono, e li distrussero d'innanzi a loro, e abitarono in luogo loro; come ha fatto Israele nel paese della sua eredità, che il Signore gli ha dato).
೧೨ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.
13 Ora levatevi, passate il torrente di Zered. E noi passammo il torrente di Zered.
೧೩ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.
14 Or il tempo, nel quale noi siamo camminati da Cades-barnea, finchè siamo passati il torrente di Zered, [è stato] trentotto anni; finchè sia stata consumata, d'infra il campo, tutta quella generazione, [cioè] gli uomini di guerra; come il Signore avea loro giurato.
೧೪ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.
15 La mano del Signore è stata altresì contro a loro, per distruggerli d'infra il campo, finchè sieno stati consumati.
೧೫ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.
16 E, dopo che tutti quegli uomini di guerra d'infra il popolo furono finiti di morire,
೧೬ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.
17 il Signore mi parlò, dicendo:
೧೭ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ,
18 Oggi tu sei per passare i confini di Moab, [cioè] Ar;
೧೮“ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.
19 e tu ti appresserai dirincontro a' figliuoli di Ammon; non usar contr'a loro alcuna ostilità, e non mover loro guerra; perciocchè io non ti darò [nulla] del lor paese a possedere; conciossiachè io l'abbia dato a' figliuoli di Lot, per eredità.
೧೯ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
20 (Quel [paese] fu anch'esso [già] riputato paese di giganti; già vi abitavano i giganti; e gli Ammoniti li chiamavano Zamzummei;
೨೦ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.
21 gente grande, e possente, e d'alta statura, come gli Anachiti; e il Signore li distrusse d'innanzi agli Ammoniti, onde essi li cacciarono, e abitarono nel luogo loro;
೨೧ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.
22 come egli avea fatto a' figliuoli di Esaù, che abitano in Seir, d'innanzi ai quali distrusse gli Horei; onde essi li cacciarono, e sono abitati nel luogo loro sino a questo giorno.
೨೨ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
23 I Caftorei anch'essi, usciti di Caftor, distrussero gli Avvei, che dimoravano in Haserim, fino a Gaza, e abitarono nel luogo loro).
೨೩ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.
24 Levatevi, dipartitevi, e passate il torrente di Arnon; vedi, io ti do nelle mani Sihon, re di Hesbon, Amorreo, e il suo paese; comincia a prender possessione, e movigli guerra.
೨೪“ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.
25 Oggi comincerò a mettere spavento e paura di te sopra i popoli, sotto tutto il cielo, talchè udendo il grido di te, tremeranno, e saranno in angoscia per tema di te.
೨೫ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.
26 Allora io mandai ambasciadori dal deserto di Chedemot, a Sihon, re di Hesbon, per portargli parole di pace, dicendo:
೨೬ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
27 [Lascia] che io passi per lo tuo paese; io camminerò per la strada maestra, senza rivolgermi nè a destra nè a sinistra.
೨೭“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.
28 Tu mi venderai la vittuaglia ch'io mangerò a prezzo, e a prezzo altresì mi darai l'acqua ch'io berrò; concedimi solo di passare col mio seguito;
೨೮ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.
29 come mi han fatto i figliuoli di Esaù, che abitano in Seir; e i Moabiti, che abitano in Ar; finchè io sia passato il Giordano, [per entrar] nel paese che il Signore Iddio nostro ci dà.
೨೯ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.
30 Ma Sihon, re di Hesbon, non volle lasciarci passar per lo suo paese; perciocchè il Signore Iddio tuo gli avea indurato lo spirito, e ostinato il cuore, per dartelo nelle mani, come oggi [appare].
೩೦ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
31 E il Signore mi disse: Vedi, io ho cominciato a darti in tuo potere Sihon, e il suo paese; comincia a prender possessione, conquistando il suo paese.
೩೧ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.
32 Sihon adunque uscì, con tutta la sua gente, in battaglia contro a noi, in Iaas.
೩೨ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.
33 E il Signore Iddio nostro lo mise in nostro potere, e noi percotemmo lui, e i suoi figliuoli, e tutta la sua gente.
೩೩ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.
34 E in quel tempo noi prendemmo tutte le sue città, e distruggemmo alla maniera dell'interdetto, in tutte le città, gli uomini, le donne, e i piccoli fanciulli; noi non vi lasciammo alcuno in vita.
೩೪ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.
35 Sol predammo per noi il bestiame, e le spoglie delle città che avevamo prese.
೩೫ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.
36 Da Aroer, che [è] in su la riva del torrente di Arnon, e la città che [è] nel torrente, fino a Galaad, e' non vi fu città alcuna così forte, che noi non l'occupassimo; il Signore Iddio nostro le mise tutte in nostro potere.
೩೬ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.
37 Sol tu non ti appressasti al paese de' figliuoli di Ammon; [cioè] a parte alcuna delle contrade [che son] lungo il torrente di Iabboc, [nè] alle città del monte, [nè] ad alcuno [di quei luoghi] che il Signore Iddio nostro avea vietati.
೩೭ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.