< Giudici 10 >
1 Or dopo Abimelec sorse, per liberare Israele, Thola, figliuolo di Puah, figliuolo di Dodo, uomo d’Issacar. Dimorava a Samir, nella contrada montuosa di Efraim;
೧ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.
2 fu giudice d’Israele per ventitre anni; poi morì e fu sepolto a Samir.
೨ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.
3 Dopo di lui sorse Jair, il Galaadita, che fu giudice d’Israele per ventidue anni;
೩ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.
4 ebbe trenta figliuoli che cavalcavano trenta asinelli e aveano trenta città, che si chiamano anche oggi i borghi di Jair, e sono nel paese di Galaad.
೪ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.
5 Poi Jair morì e fu sepolto a Kamon.
೫ಯಾಯೀರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.
6 E i figliuoli d’Israele continuarono a fare ciò ch’è male agli occhi dell’Eterno e servirono agl’idoli di Baal e di Astarte, agli dèi della Siria, agli dèi di Sidon, agli dèi di Moab, agli dèi de’ figliuoli di Ammon e agli dèi de’ Filistei; abbandonaron l’Eterno e non gli serviron più.
೬ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.
7 L’ira dell’Eterno s’accese contro Israele, ed egli li diede nelle mani de’ Filistei e nelle mani de’ figliuoli di Ammon.
೭ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
8 E in quell’anno, questi angariarono ed oppressero i figliuoli d’Israele; per diciotto anni oppressero tutti i figliuoli d’Israele ch’erano di là dal Giordano, nel paese degli Amorei in Galaad.
೮ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.
9 E i figliuoli di Ammon passarono il Giordano per combattere anche contro Giuda, contro Beniamino e contro la casa d’Efraim; e Israele fu in grande angustia.
೯ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.
10 Allora i figliuoli d’Israele gridarono all’Eterno, dicendo: “Abbiam peccato contro di te, perché abbiamo abbandonato il nostro Dio, e abbiam servito agl’idoli Baal”.
೧೦ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.
11 E l’Eterno disse ai figliuoli d’Israele: “Non vi ho io liberati dagli Egiziani, dagli Amorei, dai figliuoli di Ammon e dai Filistei?
೧೧ಆತನು ಅವರಿಗೆ, “ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ ಇವೇ
12 Quando i Sidonii, gli Amalekiti e i Maoniti vi opprimevano e voi gridaste a me, non vi liberai io dalle loro mani?
೧೨ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ
13 Eppure, m’avete abbandonato e avete servito ad altri dèi; perciò io non vi libererò più.
೧೩ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
14 Andate a gridare agli dèi che avete scelto; vi salvino essi nel tempo della vostra angoscia!”
೧೪ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.
15 E i figliuoli d’Israele dissero all’Eterno: “Abbiamo peccato; facci tutto quello che a te piace; soltanto, te ne preghiamo, liberaci oggi!”
೧೫ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
16 Allora tolsero di mezzo a loro gli dèi stranieri e servirono all’Eterno, che si accorò per l’afflizione d’Israele.
೧೬ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.
17 I figliuoli di Ammon s’adunarono e si accamparono in Galaad, e i figliuoli d’Israele s’adunaron pure, e si accamparono a Mitspa.
೧೭ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.
18 Il popolo, i principi di Galaad, si dissero l’uno all’altro: “Chi sarà l’uomo che comincerà l’attacco contro i figliuoli di Ammon? Quegli sarà il capo di tutti gli abitanti di Galaad”.
೧೮ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.