< 歴代誌Ⅰ 27 >

1 イスラエルの子孫すなはち宗家の長千人の長百人の長およびその有司等は年の惣の月のあひだ月ごとに更り入り更り出で其班列の諸の事をつとめて王に事へたるが其數を按ふるに一班列に二萬四千人ありき
ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.
2 先第一の班列すなはち正月の分はザブデエルの子ヤシヨベアムこれを率ゆ其班列は二萬四千人
ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.
3 彼は正月の軍團の長等の首たる者にしてペレヅの子孫なり
ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
4 二月の班列はアホア人ドダイその班列の者とともにこれを率ゆミクロテといふ宰あり其班列は二萬四千人
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
5 三月の軍團を統る第三の將は祭司の長ヱホヤダの子ベナヤその班列は二萬四千人
ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
6 このベナヤはかの三十人の中の勇士にして三十人の上にたてり彼の子アミザバデその班列にあり
ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.
7 四月の分を統る第四の將はヨアブの弟アサヘルにしてその子ゼバデヤこれに次り其班列は二萬四千人
ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
8 五月の分を統る第五の將はイズラヒ人シヤンモテその班列は二萬四千人
ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
9 六月の分を統る第六の將はテコア人イツケシの子イラその班列は二萬四千人
ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
10 七月の分を統る第七の將はエフライムの子孫たるペロニ人ヘレヅその班列は二萬四千人
೧೦ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
11 八月の分を統る第八の將はゼラの子孫たるホシヤ人シベカイその班列は二萬四千人
೧೧ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
12 九月の分をすぶる第九の將はベニヤミンの子孫たるアナトテ人アビエゼルその班列は二萬四千人
೧೨ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
13 十月の分をすぶる第十の將はゼラの子孫たるネトパ人マハライその班列は二萬四千人
೧೩ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
14 十一月の分をすぶる第十一の將はエフライムの子孫たるピラトン人ベナヤその班列は二萬四千人
೧೪ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
15 十二月の分を統る第十二の將はオテニエルの子孫たるネトパ人ヘルダイその班列は二萬四千人
೧೫ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
16 イスラエルの支派を治むる者は左のごとしルベン人の牧伯はヂクリの子エリエゼル、シメオンの牧伯はマアカの子シバテヤ
೧೬ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;
17 レビ人の牧伯はケムエルの子ハシヤビヤ、アロン人の牧伯はザドク
೧೭ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;
18 ユダの牧伯はダビデの兄弟エリウ、イツサカルの牧伯はミカエルの子オムリ
೧೮ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;
19 ゼブルンの牧伯はオバデヤの子イシマヤ、ナフタリの牧伯はアズリエルの子ヱレモテ
೧೯ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್;
20 エフライムの子孫の牧伯はアザジヤの子ホセア、マナセの半支派の牧伯はペダヤの子ヨエル
೨೦ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;
21 ギレアデなるマナセのご半支派の牧伯はゼカリヤの子イド、ペニヤミンの牧伯はアブネルの子ヤシエル
೨೧ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;
22 ダンの牧伯はヱロハムの子アザリエル、イスラエルの支派の牧伯等は是のごとし
೨೨ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.
23 二十歳以下なる者はダビデこれを數へざりき其はヱホバかつてイスラエルを増て天空の星のごとくにせんと言たまひしことあればなり
೨೩ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.
24 ゼルヤの子ヨアブ數ふることを始めたりしがこれを爲をへざりきそのかぞふることによりて震怒イスラエルにおよべりその數はまたダビデ王の記録の籍に載ざりき
೨೪ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.
25 アデエルの子アズマウテは王の府庫を掌どりウジヤの子ヨナタンは田野邑々村々城などにある府庫を掌どり
೨೫ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,
26 ケルブの子エズリは地を耕す農業の人を掌どり
೨೬ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ,
27 ラマテ人シメイは葡萄園を掌どりシフミ人ザブデはその葡萄園より取る葡萄酒の蔵を掌どり
೨೭ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,
28 ゲデラ人バアルハナンは平野なる橄欖樹と桑樹を掌どりヨアシは油の蔵を掌どり
೨೮ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,
29 シヤロン人シテナイはシヤロンにて牧ふ牛の群を掌どりアデライの子シヤバテは谷々にある牛の群を掌どり
೨೯ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,
30 イシマエル人オビルは駱駝を掌どりメロノテ人ヱデヤは驢馬を掌どり
೩೦ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,
31 ハガリ人ヤジズは羊の群を掌どれり是みなダビデ王の所有を掌どれる者なり
೩೧ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.
32 またダビデの叔父ヨナタンは議官たり彼は智慧あり學識ある者なり又ハクモニの子ヱヒエルは王の子等の補佐たり
೩೨ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.
33 アヒトペルは王の議官たりアルキ人ホシヤイは王の伴侶たり
೩೩ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅವನ ಮಿತ್ರನಾಗಿದ್ದನು.
34 アヒトペルに次ぐ者はベナヤの子ヱホヤダおよびアビヤタル王の軍旅の長はヨアブ
೩೪ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.

< 歴代誌Ⅰ 27 >