< ペテロの手紙第一 5 >
1 われ汝らの中なる長老たちに勸む(我は汝らと同じく長老たる者、またキリストの苦難の證人、顯れんとする榮光に與る者なり)
ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.
2 汝らの中にある神の群羊を牧へ。止むを得ずして爲さず、神に從ひて心より爲し、利を貪るために爲さず、悦びてなし、
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.
3 委ねられたる者の主とならず、群羊の模範となれ。
ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.
4 さらば大牧者の現れ給ふとき、萎まざる光榮の冠冕を受けん。
ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
5 若き者よ、なんぢら長老たちに服へ、かつ皆たがひに謙遜をまとへ『神は高ぶる者を拒ぎ、へりくだる者に恩惠を與へ給ふ』
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”
6 この故に神の能力ある御手の下に己を卑うせよ、さらば時に及びて神なんぢらを高うし給はん。
ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.
7 又もろもろの心勞を神に委ねよ、神なんぢらの爲に慮ぱかり給へばなり。
ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.
8 愼みて目を覺しをれ、汝らの仇なる惡魔、ほゆる獅子のごとく歴迴りて呑むべきものを尋ぬ。
ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
9 なんぢら信仰を堅うして彼を禦げ、なんぢらは世にある兄弟たちの同じ苦難に遭ふを知ればなり。
ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.
10 もろもろの恩惠の神、すなはち永遠の榮光を受けしめんとて、キリストによりて汝らを召し給へる神は、汝らが暫く苦難をうくる後、なんぢらを全うし、堅うし、強くして、その基を定め給はん。 (aiōnios )
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು. (aiōnios )
11 願はくは權力 世々 限りなく神にあれ、アァメン。 (aiōn )
ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್. (aiōn )
12 われ忠實なる兄弟なりと思ふシルワノに由りて、簡單に書き贈りて汝らに勸め、かつ此は神の眞の恩惠なることを證す、汝 等この恩惠に立て。
ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
13 汝らと共に選ばれてバビロンに在る教會、なんぢらに安否を問ふ、わが子マルコも安否を問ふ。
ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ.
14 なんぢら愛の接吻をもて互に安否を問へ。願はくはキリストに在る汝ら衆に平安あらんことを。
ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ!