< サムエル記Ⅰ 11 >

1 アンモニ人ナハシ、ギレアデのヤベシにのぼりて之を圍むヤベシの人々ナハシにいひけるは我らと約をなせ然らば汝につかへん
ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
2 アンモニ人ナハシこれに答へけるは我かくして汝らと約をなさん即ち我汝らの右の目を抉りてイスラエルの全地に恥辱をあたへん
ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
3 ヤベシの長老これにいひけるは我らに七日の猶予をあたへて使をイスラエルの四方の境におくることを得さしめよ而して若し我らを救ふ者なくば我ら汝にくだらん
ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
4 斯て使サウルのギベアにいたり此事を民の耳に告しかば民皆聲をあげて哭きぬ
ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
5 爰にサウル田より牛にしたがひて來るサウルいひけるは民何によりて哭くやと人々これにヤベシ人の事を告ぐ
ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
6 サウル之を聞るとき神の霊これに臨みてその怒甚だしく燃えたち
ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
7 一軛の牛をころしてこれを切り割き使の手をもてこれをイスラエルの四方の境にあまねくおくりていはしめけるは誰にてもサウルとサムエルにしたがひて出ざる者は其牛かくのごとくせらるべしと民ヱホバを畏み一人のごとく均くいでたり
ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
8 サウル、ベゼクにてこれを數ふるにイスラエルの子孫三十萬ユダの人三萬ありき
ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
9 斯て人々來れる使にいひけるはギレアデのヤベシの人にかくいへ明日日の熱き時汝ら助を得んと使かへりてヤベシ人に告げければ皆よろこびぬ
ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
10 是をもてヤベシの人云けるは明日汝らに降らん汝らの善と思ふところを爲せ
೧೦ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
11 明日サウル民を三隊にわかち暁更に敵の軍の中にいりて日の熱くなる時までアンモニ人をころしければ遺れる者は皆ちりぢりになりて二人倶にあるものなかりき
೧೧ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
12 民サムエルにいひけるはサウル豈我らの王となるべけんやと言しは誰ぞや其人を引き來れ我ら之をころさん
೧೨ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
13 サウルいひけるは今日ヱホバ救をイスラエルに施したまひたれば今日は人をころすべからず
೧೩ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
14 茲にサムエル民にいひけるはいざギルガルに往て彼處にて王國を新にせんと
೧೪ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
15 民みなギルガルにゆきて彼處にてヱホバのまへにサウルを王となし彼處にて酬恩祭をヱホバのまへに献げサウルとイスラエルの人々皆かしこにて大に祝へり
೧೫ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.

< サムエル記Ⅰ 11 >