< サムエル記Ⅰ 28 >

1 其頃ペリシテ人イスラエルと戰はんとて軍のために軍勢を集めたればアキシ、ダビデにいひけるは爾明かにこれをしれ爾と爾の從者我とともに出て軍にくははるべし
ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು,
2 ダビデ、アキシにいひけるはされば爾僕のなさんところをしるべしとアキシ、ダビデにさらば我爾を永く我身をまもる者となさんといへり
“ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು.
3 サムエルすでに死たればイスラエルみなこれをかなしみてこれをそのまちラマにはうむれりまたサウルは口寄者と卜筮師を其地よりおひいだせり
ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.
4 ペリシテ人あつまりきたりてシユネムに陣をとりければサウル、イスラエルを悉くあつめてギルボアに陣をとれり
ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.
5 サウル、ペリシテ人の軍を見しときおそれて其心大にふるへたり
ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.
6 サウル、ヱホバに問ひけるにヱホバ對たまはず夢に因てもウリムによりても預言者によりてもこたへたまはず
ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
7 サウル僕等にいひけるは口寄の婦を求めよわれそのところにゆきてこれに尋ねんと僕等かれにいひけるは視よエンドルに口寄の婦あり
ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.
8 サウル形を變へて他の衣服を著二人の人をともなひてゆき彼等夜の間に其婦の所にいたるサウルいひけるは請ふわがために口寄の術をおこなひてわが爾に言ふ人をわれに呼おこせ
ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು
9 婦かれにいひけるはなんぢサウルのなしたる事すなはち如何にかれが口寄者と卜筮師を國より斷さりたるを知る爾なんぞ我を死しめんとてわが生命を亡す謀計をなすや
ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.
10 サウル、ヱホバを指てかれに誓ひいひけるはヱホバは生く此事のためになんぢ罪にあふことあらじ
೧೦ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.
11 婦いひけるは誰を我なんぢに呼起すべきかサウルいふサムエルをよびおこせ
೧೧ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.
12 婦サムエルを見て大なる聲にてさけびいだせりしかして婦サウルにいひけるは爾なにゆゑに我を欺きしや爾はすなはちサウルなり
೧೨ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.
13 王かれにいひけるは恐るるなかれ爾なにを見しや婦サウルにいひけるは我神の地よりのぼるを見たり
೧೩ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಲು, “ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ” ಎಂದು ಉತ್ತರ ಕೊಟ್ಟಳು.
14 サウルかれにいひけるは其形容は如何彼いひけるは一人の老翁のぼる其人明衣を衣たりサウル其人のサムエルなるをしりて地にふして拝せり
೧೪ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.
15 サムエル、サウルにいひけるは爾なんぞ我をよびおこして我をわづらはすやサウルこたへけるは我いたく惱むペリシテ人我にむかひて軍をおこし又神我をはなれて預言者によりても又夢によりてもふたたび我にこたへたまはずこのゆゑに我なすべき事を爾にまなばんとて爾を呼り
೧೫ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.
16 サムエルいひけるはヱホバ爾をはなれて爾の敵となりたまふに爾なんぞ我にとふや
೧೬ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?
17 ヱホバわれをもて語りたまひしことをみづから行ひてヱホバ國を爾の手より割きはなち爾の隣人ダビデにあたへたまふ
೧೭ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.
18 爾ヱホバの言にしたがはず其烈しき怒をアマレクにもらさざりしによりてヱホバ此事を今日爾になしたまふ
೧೮ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.
19 ヱホバ、イスラエルをも爾とともにペリシテ人の手にわたしたまふべし明日爾と爾の子等我とともなるべしまたイスラエルの陣營をもヱホバ、ペリシテ人の手にわたしたまはんと
೧೯ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.
20 サウル直ちに地に伸びたふれサムエルの言のために痛くおそれ又其力を失へり其はかれ其一日一夜物食ざりければなり
೨೦ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.
21 かの婦サウルにいたり其痛く慄くを見てこれにいひけるは視よ仕女爾の言をききわが生命をかけて爾が我にいひし言にしたがへり
೨೧ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.
22 されば請ふ爾も仕女の言を聽て我をして一口のパンを爾のまへにそなへしめよしかして爾くらひて途に就く時に力を得よ
೨೨ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.
23 されどサウル否みて我は食はじといひしを其僕および婦強ければ其言をききいれて地より立あがり床のうへに坐せり
೨೩ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.
24 婦の家に肥たる犢ありしかば急ぎて之を殺しまた粉をとり摶て酵いれぬパンを炊き
೨೪ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.
25 サウルのまへと其僕等のまへに持ちきたりければ彼等くらひて立ちあがり其夜のうちにされり
೨೫ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.

< サムエル記Ⅰ 28 >