< 歴代誌Ⅱ 27 >

1 ヨタムは二十五歳の時位に即きヱルサレムにて十六年の間世を治めたり其母はザドクの女にして名をヱルシヤといふ
ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.
2 ヨタムはその父ウジヤの凡て爲たるごとくヱホバの善と視たまふ事をなせり但しヱホバの殿には入ざりき民は尚惡き事を爲り
ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
3 彼ヱホバの家の上の門を建なほしオペルの石垣を多く築き増し
ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.
4 ユダの山地に數箇の邑を建て林の間に城および戌楼を築けり
ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.
5 彼アンモニ人の王と戰ひこれに勝り其年アンモンの子孫銀百タラント小麥一萬石大麥一萬石を彼におくれりアンモンの子孫は第二年にも第三年にも是のごとく彼に貢をいる
ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.
6 ヨタムその神ヱホバの前においてその行を堅うしたるに因て權能ある者となれり
ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.
7 ヨタムのその餘の行爲その一切の戰闘およびその行などはイスラエルとユダの列王の書に記さる
ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.
8 彼は二十五歳の時位に即きヱルサレムにて十六年の間世を治めたり
ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.
9 ヨタムその先祖等とともに寝りたればダビデの邑にこれを葬れりその子アハズこれに代りて王となる
ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.

< 歴代誌Ⅱ 27 >