< 歴代誌Ⅱ 29 >

1 ヒゼキヤは二十五歳の時位に即きヱルサレムにて二十九年の間世を治めたりその母はゼカリヤの女にして名をアビヤといふ
ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
2 ヒゼキヤはその父ダビデの凡てなしたる如くヱホバの目に善と視たまふ事をなせり
ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
3 即ち彼その治世の第一年一月にヱホバの室の戸を開きかつ之を修繕ひ
ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
4 祭司およびレビ人を携さへいりて東の廣場にこれを集め
ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
5 而して之にいひけるはレビ人よ我に聽け汝等いま身を潔めて汝等の先祖の神ヱホバの室を潔め汚穢を聖所より除きされ
ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
6 夫我らの先祖は罪を犯し我らの神ヱホバの目に惡しと見たまふことを行ひてヱホバを棄てヱホバの住所に面を背けて後をこれに向け
ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
7 また廊の戸を閉ぢ燈火を消し聖所にてイスラエルの神に香を焚ず燔祭を献けざりし
ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
8 是をもてヱホバの忿怒ユダとヱルサレムに臨みヱホバ彼等をして打ただよはされしめ詑異とならしめ胡盧とならしめたまへり汝らが目に覩るごとし
ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
9 即ち我儕の父は劍に斃れ我らの男子女子及び妻等はこれがために俘擄となれり
ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
10 今我イスラエルの神ヱホバと契約を結ばんとする意志ありその烈しき怒我らを離るることあらん
೧೦ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
11 我子等よ今は怠たる勿れヱホバ汝らを擇びて己の前に立て事へしめ己に事ふる者となし香を焚く者となしたまひたればなりと
೧೧ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.
12 是においてレビ人起り即ちコハテの子孫の中にてはアマサイの子マハテおよびアザリヤの子ヨエル、メラリの子孫の中にてはアブデの子キシおよびヱハレレルの子アザリヤ、ゲルシヨン人の中にてはジンマの子ヨアおよびヨアの子エデン
೧೨ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
13 エリザパンの子孫の中にてはシムリおよびヱイエル、アサフの子孫の中にてはゼカリヤおよびマツタニヤ
೧೩ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,
14 ヘマンの子孫の中にてはヱヒエルおよびシメイ、ヱドトンの子孫の中にてはシマヤおよびウジエル
೧೪ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,
15 かれらその兄弟を集へて身を潔めヱホバの言に依りて王の傳へし命令にしたがひてヱホバの室を潔めんとて入きたり
೧೫ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
16 祭司等ヱホバの室の奧に入りてこれを潔めヱホバの殿にありし汚穢をことごとくヱホバの室の庭に携へいだせばレビ人それを受て外にいだしキデロン河に持いたる
೧೬ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
17 彼ら正月の元日に潔むることを始めてその月の八日にヱホバの廊におよびまたヱホバの家を潔むるに八日を費し正月の十六日にいたりて之を終れり
೧೭ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
18 かくて彼らヒゼキヤ王の處に入て言ふ我らヱホバの室をことごとく潔めまた燔祭の壇とその一切の器具および供前のパンの案とその一切の器皿とを潔めたり
೧೮ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
19 またアハズ王がその治世に罪を犯して棄たりし一切の器皿をも整へてこれを潔めヱホバの壇の前にこれを据置りと
೧೯ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.
20 是においてヒゼキヤ王蚤に起いで邑の牧伯等をあつめてヱホバの家にのぼり往き
೨೦ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
21 牡牛七匹牡羊七匹羔羊七匹牡山羊七匹を牽きたらしめ國と聖所とユダのためにこれを罪祭となしアロンの子孫たる祭司等に命じてこれをヱホバの壇の上に献げしむ
೨೧ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
22 即ち牡牛を宰れば祭司等その血を受て壇に灑ぎまた牡羊を宰ればその血を壇に灑ぎまた羔羊を宰ればその血を壇に灑げり
೨೨ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
23 かくて人々罪祭の牡山羊を王と會衆の前に牽きたりければ彼らその上に手を按り
೨೩ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
24 而して祭司これを宰りその血を罪祭として壇の上に献げてイスラエル全國のために贖罪をなせり是は王イスラエル全國の爲に燔祭および罪祭を献ぐることを命じたるに因る
೨೪ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
25 王レビ人をヱホバの室に置きダビデおよび王の先見者ガデと預言者ナタンの命令にしたがひて之に鐃鈸瑟および琴を執しむ是はヱホバがその預言者によりて命じたまひし所なり
೨೫ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
26 是においてレビ人はダビデの樂器をとり祭司は喇叭をとりて立つ
೨೬ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.
27 時にヒゼキヤ燔祭を壇の上に献ぐることを命ぜり燔祭をささげ始むるときヱホバの歌をうたひ喇叭を吹きイスラエルの王ダビデの樂器をならしはじめたり
೨೭ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
28 しかして會衆みな禮拝をなし謳歌者歌をうたひ喇叭手喇叭を吹ならし燔祭の終るまで凡て斯ありしが
೨೮ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
29 献ぐる事の終るにおよびて王および之と偕に在る者皆身をかがめて禮拝をなせり
೨೯ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.
30 かくて又ヒゼキヤ王および牧伯等レビ人に命じダビデと先見者アサフの詞をもてヱホバを讃美せしむ彼等喜樂をもて讃美し首をさげて禮拝す
೩೦ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
31 時にヒゼキヤこたへて言けるは汝らすでにヱホバに事へんために身を潔めたれば進みよりてヱホバの室に犠牲および感謝祭を携へきたれと會衆すなはち犠牲および感謝祭を携へきたる又志ある者はみな燔祭を携ふ
೩೧ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
32 會衆の携へきたりし燔祭の數は牡牛七十牡羊一百羔羊二百是みなヱホバに燔祭として奉つる者なり
೩೨ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
33 また奉納物は牛六百羊三千なりき
೩೩ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.
34 然るに祭司寡くしてその燔祭の物の皮を剥つくすこと能はざりければその兄弟たるレビ人これを助けてその工を終ふ斯る間に他の祭司等も身を潔むレビ人は祭司よりも心正しくして身を潔めたり
೩೪ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.
35 燔祭夥多しくあり酬恩祭の脂及びすべての燔祭の酒も然り斯ヱホバの室の奉事備はれり
೩೫ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
36 この事俄なりしかども神かく民の爲に備をなしたまひしに因てヒゼキヤおよび一切の民喜べり
೩೬ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.

< 歴代誌Ⅱ 29 >