< エペソ人への手紙 2 >

1 汝ら前には咎と罪とによりて死にたる者にして、
ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.
2 この世の習慣に從ひ、空中の權を執る宰、すなはち不 從順の子らの中に今なほ働く靈の宰にしたがひて歩めり。 (aiōn g165)
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. (aiōn g165)
3 我等もみな前には彼らの中にをり、肉の慾に從ひて日をおくり、肉と心との欲する隨をなし、他の者のごとく生れながら怒の子なりき。
ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
4 されど神は憐憫に富み給ふが故に、我らを愛する大なる愛をもて、
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,
5 咎によりて死にたる我等をすら、キリスト・イエスに由りてキリストと共に活し、(汝らの救はれしは恩惠によれり)
ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.
6 共に甦へらせ、共に天の處に坐せしめ給へり。
ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು
7 これキリスト・イエスに由りて我らに施したまふ仁慈をもて、其の恩惠の極めて大なる富を、來らんとする後の世々に顯さんとてなり。 (aiōn g165)
ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. (aiōn g165)
8 汝らは恩惠により、信仰によりて救はれたり、是おのれに由るにあらず、神の賜物なり。
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
9 行爲に由るにあらず、これ誇る者のなからん爲なり。
ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
10 我らは神に造られたる者にして、神の預じめ備へ給ひし善き業に歩むべく、キリスト・イエスの中に造られたるなり。
೧೦ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
11 されば記憶せよ、肉によりては異邦人にして、手にて肉に行ひたるかの割禮ありと稱ふる者に無 割禮と稱へらるる汝ら、
೧೧ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
12 曩にはキリストなく、イスラエルの民 籍に遠く、約束に屬する諸般の契約に與りなく、世に在りて希望なく、神なき者なりき。
೧೨ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
13 されど前に遠かりし汝ら今キリスト・イエスに在りて、キリストの血によりて近づくことを得たり。
೧೩ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.
14 彼は我らの平和にして、己が肉により、樣々の誡命の規より成る律法を廢して、二つのものを一つとなし、怨なる隔の中籬を毀ち給へり。これは二つのものを己に於て一つの新しき人に造りて平和をなし、
೧೪ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.
15 彼は我らの平和にして、己が肉により、樣々の誡命の規より成る律法を廢して、二つのものを一つとなし、怨なる隔の中籬を毀ち給へり。これは二つのものを己に於て一つの新しき人に造りて平和をなし、
೧೫ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.
16 十字架によりて怨を滅し、また之によりて二つのものを一つの體となして神と和がしめん爲なり。
೧೬ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.
17 かつ來りて、遠かりし汝 等にも平和を宣べ、近きものにも平和を宣べ給へり。
೧೭ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.
18 そはキリストによりて我ら二つのもの一つ御靈にありて父に近づくことを得たればなり。
೧೮ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.
19 されば汝 等はもはや旅人また寄寓人にあらず、聖徒と同じ國人また神の家族なり。
೧೯ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.
20 汝らは使徒と預言者との基の上に建てられたる者にして、キリスト・イエス自らその隅の首石たり。
೨೦ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.
21 おのおのの建造物、かれに在りて建て合せられ、彌増に聖なる宮、主のうちに成るなり。
೨೧ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.
22 汝 等もキリストに在りて共に建てられ、御靈によりて神の御住となるなり。
೨೨ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.

< エペソ人への手紙 2 >