< エゼキエル書 10 >
1 茲に我見しにケルビムの首の上なる穹蒼に靑玉のごとき者ありて寶位の形に見ゆ彼そのケルビムの上にあらはれたまひて
೧ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.
2 かの布の衣を着たる人に告て言たまひけるはケルビムの下なる輪の間に入りて汝の手にケルビムの間の炭火を盈し之を邑に散すべしとすなはち吾目の前にて其處に入しが
೨ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.
3 其人の入る時ケルビムは家の右に立をり雲その内庭に盈り
೩ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.
4 茲にヱホバの榮光ケルブの上より昇りて家の閾にいたる又家には雲滿ちその庭にはヱホバの榮光の輝光盈てり
೪ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.
5 時にケルビムの羽音外庭に聞ゆ全能の神の言語たまふ聲のごとし
೫ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.
6 彼布の衣を着たる人に命じて輪の間ケルビムの間より火を取れと言たまひければ即ち入りて輪の傍に立ちけるに
೬ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ” ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.
7 一のケルブその手をケルビムの間より伸てケルビムの間の火を取り之をかの布の衣を着たる人の手に置れたれば彼これを取りて出づ
೭ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.
೮ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.
9 我見しにケルビムの側に四箇の輪あり此ケルブにも一箇の輪あり彼ケルブにも一箇の輪あり輪の式は黄金色の玉のごとくに見ゆ
೯ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.
10 その式は四箇みな同じ形にして輪の中に輪のあるがごとし
೧೦ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.
11 その行ときは四方に行く行にまはることなし首の向ふところに從ひ行く行にまはることなし
೧೧ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.
12 その全身その脊その手その翼および輪には四周に徧く目ありその四箇みな輪あり
೧೨ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತು ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.
೧೩ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ.
14 其は各々四の面あり第一の面はケルブの面第二の面は人の面第三のは獅子の面第四のは鷲の面なり
೧೪ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು.
15 ケルビムすなはち昇れり是わがケバル河の邊にて見たるところの生物なり
೧೫ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.
16 ケルビムの行く時は輪もその傍に行きケルビム翼をあげて地より飛上る時は輪またその傍を離れず
೧೬ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು.
17 その立つときは立ちその上る時は俱に上れりその生物の靈は其等の中にあり
೧೭ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.
18 時にヱホバの榮光家の閾より出ゆきてケルビムの上に立ちければ
೧೮ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.
19 ケルビムすなはちその翼をあげ出ゆきてわが目の前にて地より飛のぼれり輪はその傍にあり而して遂にヱホバの家の東の門の入口にいたりて止るイスラエルの神の榮光その上にあり
೧೯ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು.
20 是すなはち吾がケバル河の邊にてイスラエルの神の下に見たるところの生物なり吾そのケルビムなるを知れり
೨೦ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.
21 是等には各々四宛の面あり各箇四の翼あり又人の手のごとき物その翼の下にあり
೨೧ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.
22 その面の形は吾がケバル河の邊にて見たるところの面なりその姿も身も然り各箇その面にしたがひて行けり
೨೨ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.