< イザヤ書 4 >

1 その日七人のをんな一人の男にすがりていはん 我儕おのれの糧をくらひ己のころもを着るべし ただ我儕になんぢの名をとなふることを許してわれらの恥をとりのぞけと
ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.
2 その日ヱホバの枝はさかえて輝かん 地よりなりいづるものの實はすぐれ並うるはしくして逃れのこれるイスラエルの益となるべし
ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.
3 而してシオンに遣れるもの ヱルサレムにとどまれる者 すべて此等のヱルサレムに存ふる者のなかに録されたるものは聖ととなへられん
ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
4 そは主さばきするみたまと燒つくす靈とをもてシオンのむすめらの汚をあらひ ヱルサレムの血をその中よりのぞきたまふ期きたるべければなり
ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.
5 爰にヱホバはシオンの山のすべての住所と もろもろの聚會とのうへに 晝は雲と煙とをつくり夜はほのほの光をつくり給はん あまねく榮のうへに覆庇あるべし
ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.
6 また一つの假廬ありて 晝はあつさをふせぐ陰となり 暴風と雨とをさけてかくるる所となるべし
ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.

< イザヤ書 4 >