< ヨブ 記 27 >
ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:
2 われに義しき審判を施したまはざる神 わが心魂をなやまし給ふ全能者此神は活く
ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,
3 (わが生命なほ全くわれの衷にあり 神の氣息なほわが鼻にあり)
“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.
ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.
5 我決めて汝等を是とせじ 我に死るまで我が罪なきを言ことを息じ
ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.
6 われ堅くわが正義を持ちて之を棄じ 我は今まで一日も心に責られし事なし
ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ.
7 我に敵する者は惡き者と成り我を攻る者は義からざる者と成るべし
“ನನ್ನ ಶತ್ರು ದುಷ್ಟನ ಹಾಗಿರಲಿ; ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ.
8 邪曲なる者もし神に絶れその魂神を脱とらるるに於ては何の望かあらん
ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?
9 かれ艱難に罹る時に神その呼號を聽いれたまはんや
ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?
ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ?
11 われ神の御手を汝等に敎へん 全能者の道を汝等に隱さじ
“ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು.
12 視よ汝等もみな自らこれを觀たり 然るに何ぞ斯愚蒙をきはむるや
ನೀವೆಲ್ಲರೂ ಇದನ್ನು ನೋಡಿದ್ದರೂ, ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ?
13 惡き人の神に得る分 強暴の人の全能者より受る業は是なり
“ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ:
14 その子等蕃れば劍に殺さる その子孫は食物に飽ず
ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.
15 その遺れる者は疫病に斃れて埋められ その妻等は哀哭をなさず
ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.
16 かれ銀を積こと塵のごとく衣服を備ふること土のごとくなるとも
ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,
17 その備ふる者は義き人これを着ん またその銀は無辜者これを分ち取ん
ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
18 その建る家は蟲の巣のごとく また番人の造る茅家のごとし
ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು.
19 彼は富る身にて寢臥し重ねて興ること無し また目を開けば即ちその身きえ亡す
ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು.
20 懼ろしき事大水のごとく彼に追及き 夜の暴風かれを奪ひ去る
ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.
21 東風かれを颺げて去り 彼をその處より吹はらふ
ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು.
22 神かれを射て恤まず 彼その手より逃れんともがく
ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.
23 人かれに對ひて手を鳴し 嘲りわらひてその處をいでゆかしむ
ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”