< ルカの福音書 16 >

1 イエスまた弟子たちに言ひ給ふ『或 富める人に一人の支配人あり、主人の所有を費しをりと訴へられたれば、
ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,
2 主人かれを呼びて言ふ「わが汝につきて聞く所は、これ何事ぞ、務の報告をいだせ、汝こののち支配人たるを得じ」
ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.
3 支配人 心のうちに言ふ「如何にせん、主人わが職を奪ふ。われ土 掘るには力なく、物 乞ふは恥かし。
ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.
4 我なすべき事こそ知りたれ、斯く爲ば職を罷めらるるとき、人々その家に我を迎ふるならん」とて、
ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,
5 主人の負債者を一人 一人 呼びよせて、初の者に言ふ「なんぢ我が主人より負ふところ何 程あるか」
ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,
6 答へて言ふ「油、百 樽」支配人いふ「なんぢの證書をとり、早く坐して五 十と書け」
ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.
7 又ほかの者に言ふ「負ふところ何 程あるか」答へて言ふ「麥、百 石」支配人いふ「なんぢの證書をとりて八 十と書け」
ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
8 ここに主人、不義なる支配人の爲しし事の巧なるによりて、彼を譽めたり。この世の子らは、己が時代の事には光の子らよりも巧なり。 (aiōn g165)
ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. (aiōn g165)
9 われ汝らに告ぐ、不義の富をもて、己がために友をつくれ。さらば富の失する時、その友なんぢらを永遠の住居に迎へん。 (aiōnios g166)
“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. (aiōnios g166)
10 小事に忠なる者は大事にも忠なり。小事に不 忠なる者は大事にも不 忠なり。
೧೦ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.
11 さらば汝 等もし不義の富に忠ならずば、誰か眞の富を汝らに任すべき。
೧೧ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?
12 また汝 等もし人のものに忠ならずば、誰か汝 等のものを汝らに與ふべき。
೧೨ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?
13 僕は二人の主に兼ね事ふること能はず、或は之を憎み彼を愛し、或は之に親しみ彼を輕しむべければなり。汝ら神と富とに兼ね事ふること能はず』
೧೩ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
14 ここに慾 深きパリサイ人ら、この凡ての事を聞きてイエスを嘲笑ふ。
೧೪ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
15 イエス彼らに言ひ給ふ『なんぢらは人のまへに己を義とする者なり。されど神は汝らの心を知りたまふ。人のなかに尊ばるる者は、神のまへに憎まるる者なり。
೧೫ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
16 律法と預言者とはヨハネまでなり、その時より神の國は宣傳へられ、人みな烈しく攻めて之に入る。
೧೬“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.
17 されど律法の一畫の落つるよりも、天 地の過ぎ往くは易し。
೧೭ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
18 凡てその妻を出して、他に娶る者は、姦淫を行ふなり。また夫より出されたる女を娶る者も、姦淫を行ふなり。
೧೮“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
19 或 富める人あり、紫色の衣と細布とを著て、日々 奢り樂しめり。
೧೯“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
20 又ラザロといふ貧しき者あり、腫物にて腫れただれ、富める人の門に置かれ、
೨೦ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.
21 その食卓より落つる物にて飽かんと思ふ。而して犬ども來りて其の腫物を舐れり。
೨೧ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22 遂にこの貧しきもの死に、御使たちに携へられてアブラハムの懷裏に入れり。富める人もまた死にて葬られしが、
೨೨ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
23 黄泉にて苦惱の中より目を擧げて、遙にアブラハムと其の懷裏にをるラザロとを見る。 (Hadēs g86)
೨೩ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, (Hadēs g86)
24 乃ち呼びて言ふ「父アブラハムよ、我を憐みて、ラザロを遣し、その指の先を水に浸して我が舌を冷させ給へ、我はこの焔のなかに悶ゆるなり」
೨೪‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
25 アブラハム言ふ「子よ、憶へ、なんぢは生ける間なんぢの善き物を受け、ラザロは惡しき物を受けたり。今ここにて彼は慰められ、汝は悶ゆるなり。
೨೫ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.
26 然のみならず、此處より汝らに渡り往かんとすとも得ず、其處より我らに來り得ぬために、我らと汝らとの間に大なる淵 定めおかれたり」
೨೬ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.
27 富める人また言ふ「さらば父よ、願はくは我が父の家にラザロを遣したまへ。
೨೭ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
28 我に五 人の兄弟あり、この苦痛のところに來らぬよう、彼らに證せしめ給へ」
೨೮ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.
29 アブラハム言ふ「彼らにはモーセと預言者とあり、之に聽くべし」
೨೯ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,
30 富める人いふ「いな、父アブラハムよ、もし死人の中より彼らに往く者あらば、悔改めん」
೩೦ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.
31 アブラハム言ふ「もしモーセと預言者とに聽かずば、たとひ死人の中より甦へる者ありとも、其の勸を納れざるべし」』
೩೧ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”

< ルカの福音書 16 >