< 詩篇 48 >
1 ヱホバは大なり われらの神の都そのきよき山のうへにて甚くほめたたへられたまふべし
೧ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
2 シオンの山はきたの端たかくしてうるはしく喜悦を地にあまねくあたふ ここは大なる王のみやこなり
೨ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
3 そのもろもろの殿のうちに神はおのれをたかき櫓としてあらはしたまへり
೩ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
೪ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.
5 かれらは都をみてあやしみ且おそれて忽ちのがれされり
೫ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.
6 戰慄はかれらにのぞみ その苦痛は子をうまんとする婦のごとし
೬ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.
7 なんぢは東風をおこしてタルシシの舟をやぶりたまふ
೭ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
8 曩にわれらが聞しごとく今われらは萬軍のヱホバの都われらの神のみやこにて之をみることをえたり 神はこの都をとこしへまで固くしたまはん (セラ)
೮ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. (ಸೆಲಾ)
೯ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
10 神よなんぢの譽はその名のごとく地の極にまでおよべり なんぢの右手はただしきにて充り
೧೦ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
11 なんぢのもろもろの審判によりてシオンの山はよろこびユダの女輩はたのしむべし
೧೧ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
12 シオンの周圍をありき徧くめぐりてその櫓をかぞへよ
೧೨ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.
13 その石垣に目をとめよ そのもろもろの殿をみよ なんぢらこれを後代にかたりつたへんが爲なり
೧೩ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
14 そはこの神はいや遠長にわれらの神にましましてわれらを死るまでみちびきたまはん
೧೪ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.