< 詩篇 72 >
1 神よねがはくは汝のもろもろの審判を王にあたへ なんぢの義をわうの子にあたへたまへ
೧ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
2 かれは義をもてなんぢの民をさばき公平をもて苦しむものを鞫かん
೨ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
೩ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
4 かれは民のくるしむ者のために審判をなし乏しきものの子輩をすくひ虐ぐるものを壞きたまはん
೪ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
5 かれらは日と月とのあらんかぎり世々おしなべて汝をおそるべし
೫ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವರು ನಿನಗೆ ಭಯಪಡಲಿ.
6 かれは苅とれる牧にふる雨のごとく地をうるほす白雨のごとくのぞまん
೬ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
7 かれの世にただしき者はさかえ平和は月のうするまで豊かならん
೭ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
8 またその政治は海より海にいたり河より地のはてにおよぶべし
೮ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
9 野にをる者はそのまへに屈み そり仇は塵をなめん
೯ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.
10 タルシシおよび島々の王たちは貢ををさめ シバとセバの王たちは禮物をささげん
೧೦ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
11 もろもろの王はそのまへに俯伏し もろもろの國はかれにつかへん
೧೧ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
12 かれは乏しき者をその叫ぶときにすくひ 助けなき苦しむ者をたすけ
೧೨ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
13 弱きものと乏しき者とをあはれみ乏しきものの霊魂をすくひ
೧೩ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
14 かれらのたましひを暴虐と強暴とよりあがなひたまふ その血はみまへに貴かるべし
೧೪ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
15 かれらは存ふべし 人はシバの黄金をささげてかれのために恒にいのり終日かれをいははん
೧೫ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
16 國のうち五穀ゆたかにしてその實はレバノンのごとく山のいただきにそよぎ 邑の人々は地の草のごとく榮ゆべし
೧೬ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
17 かれの名はつねにたえず かれの名は日の久しきごとくに絶ることなし 人はかれによりて福祉をえん もろもろの國はかれをさいはひなる者ととなへん
೧೭ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
18 ただイスラエルの神のみ奇しき事跡をなしたまへり 神ヱホバはほむべきかな
೧೮ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.
19 その榮光の名はよよにほむべきかな全地はその榮光にて滿べしアーメン アーメン
೧೯ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
೨೦ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.