< ヨハネの黙示録 15 >

1 我また天に他の大なる怪しむべき徴を見たり。即ち七人の御使ありて最後の七つの苦難を持てり、神の憤恚は之にて全うせらるるなり。
ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.
2 我また火の混りたる玻璃の海を見しに、獸とその像とその名の數字とに勝ちたる者ども、神の立琴を持ちて玻璃の海の邊に立てり。
ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.
3 彼ら神の僕モーセの歌と羔羊の歌とを歌ひて言ふ『主なる全能の神よ、なんぢの御業は大なるかな、妙なるかな、萬國の王よ、なんぢの道は義なるかな、眞なるかな。
ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
4 主よ、たれか汝を畏れざる、誰か御名を尊ばざる、汝のみ聖なり、諸種の國人きたりて御前に拜せん。なんぢの審判は既に現れたればなり』
ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”
5 この後われ見しに、天にある證の幕屋の聖所ひらけて、
ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.
6 かの七つの苦難を持てる七人の御使、きよき輝ける亞麻 布を著、金の帶を胸に束ねて聖所より出づ。
ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
7 四つの活物の一つ、その七人の御使に、世々 限りなく生きたまふ神の憤恚の滿ちたる七つの金の鉢を與へしかば、 (aiōn g165)
ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. (aiōn g165)
8 聖所は神の榮光とその權力とより出づる煙にて滿ち、七人の御使の七つの苦難の終るまでは、誰も聖所に入ること能はざりき。
ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.

< ヨハネの黙示録 15 >