< ローマ人への手紙 2 >

1 されば凡て人を審く者よ、なんぢ言ひ遁るる術なし、他の人を審くは、正しく己を罪するなり。人をさばく汝もみづから同じ事を行へばなり。
ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
2 かかる事をおこなふ者を罪する神の審判は眞理に合へりと我らは知る。
ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.
3 かかる事をおこなふ者を審きて自己これを行ふ人よ、なんぢ神の審判を遁れんと思ふか。
ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
4 神の仁慈なんぢを悔改に導くを知らずして、その仁慈と忍耐と寛容との豐なるを輕んずるか。
ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
5 なんぢ頑固と悔改めぬ心とにより、己のために神の怒を積みて、その正しき審判の顯るる怒の日に及ぶなり。
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
6 神はおのおのの所作に隨ひて報い、
ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,
7 耐へ忍びて善をおこない光榮と尊貴と朽ちざる事とを求むる者には、永遠の生命をもて報い、 (aiōnios g166)
ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. (aiōnios g166)
8 徒黨により眞理に從はずして不義にしたがう者には、怒と憤恚とをもて報い給はん。
ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
9 すべて惡をおこなふ人には、ユダヤ人を始めギリシヤ人にも患難と苦難とあり。
ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
10 凡て善をおこなふ人には、ユダヤ人を始めギリシヤ人にも光榮と尊貴と平安とあらん。
೧೦ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.
11 そは神には偏り視 給ふこと無ければなり。
೧೧ದೇವರಲ್ಲಿ ಪಕ್ಷಪಾತವಿಲ್ಲ.
12 凡そ律法なくして罪を犯したる者は律法なくして滅び、律法ありて罪を犯したる者は律法によりて審かるべし。
೧೨ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
13 律法を聞くもの神の前に義たるにあらず、律法をおこなふ者のみ義とせらるべし。――
೧೩ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
14 律法を有たぬ異邦人、もし本性のまま律法に載せたる所をおこなふ時は、律法を有たずともおのづから己が律法たるなり。
೧೪ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.
15 即ち律法の命ずる所のその心に録されたるを顯し、おのが良心もこれを證をなして、その念、たがひに或は訴へ或は辯明す。――
೧೫ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
16 是わが福音に云へる如く、神のキリスト・イエスによりて人々の隱れたる事を審きたまふ日に成るべし。
೧೬ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
17 汝ユダヤ人と稱へられ、律法に安んじ、神を誇り、
೧೭ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
18 その御意を知り、律法に教へられて善惡を辨へ、
೧೮ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.
19 また律法のうちに知識と眞理との式を有てりとして、盲人の手引、暗黒にをる者の光明、
೧೯ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,
20 愚なる者の守役、幼兒の教師なりと自ら信ずる者よ、
೨೦ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,
21 何ゆゑ人に教へて己を教へぬか、竊む勿れと宣べて自ら竊むか、
೨೧ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
22 姦淫する勿れと言ひて姦淫するか、偶像を惡みて宮の物を奪ふか、
೨೨ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?
23 律法に誇りて律法を破り神を輕んずるか。
೨೩ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?
24 録して『神の名は汝らの故によりて異邦人の中に涜さる』とあるが如し。
೨೪“ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.
25 なんぢ律法を守らば割禮は益あり、律法を破らば汝の割禮は無 割禮となるなり。
೨೫ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
26 割禮なき者も律法の義を守らば、その無 割禮は割禮とせらるるにあらずや。
೨೬ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?
27 本性のまま割禮なくして律法を全うする者は、儀文と割禮とありてなほ律法をやぶる汝を審かん。
೨೭ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.
28 それ表面のユダヤ人はユダヤ人たるにあらず、肉に在る表面の割禮は割禮たるにあらず。
೨೮ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
29 隱なるユダヤ人はユダヤ人なり、儀文によらず、靈による心の割禮は割禮なり、その譽は人よりにあらず、神より來るなり。
೨೯ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.

< ローマ人への手紙 2 >