< マタイの福音書 23 >
೧ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,
2 言った,「律法学者たちとファリサイ人たちはモーセの座に着いている。
೨“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿಕುಳಿತುಕೊಂಡಿದ್ದಾರೆ;
3 だから,彼らがあなた方に守るよう教えることはみな守り行ないなさい。だが,彼らの業には見倣ってはいけない。彼らは言いはするが,行なわないからだ。
೩ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
4 担いきれないほどの重荷を束ねて人々の肩に載せるが,自分では彼らを助けるために指一本も持ち上げようともしない。
೪ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನುಮುಟ್ಟಲೊಲ್ಲರು.
5 自分たちの業すべてを,単に人に見せようとして行なっているのだ。自分たちの聖句入れを広くし,自分たちの衣の房べりを大きくする。
೫ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.
೬ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;
7 市場でのあいさつや人々に『ラビ,ラビ』と呼ばれることなのだ。
೭ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.
8 だが,あなた方は『ラビ』と呼ばれてはいけない。あなた方の教師はただ一人,キリストで,あなた方はみな兄弟だからだ。
೮ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
9 地上のだれをも自分たちの父と呼んではいけない。あなた方の父はただ一人,天におられる方だからだ。
೯ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
10 また,師と呼ばれてはいけない。あなた方の師はただ一人,キリストだからだ。
೧೦ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು
11 だが,あなた方の間で一番偉い者は,あなた方の召使いになるだろう。
೧೧ಆದರೆನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.
12 だれでも自分を高くする者は低くされ,自分を低くする者は高められるだろう。
೧೨ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
13 「あなた方は災いだ,律法学者たちとファリサイ人たち,偽善者たちよ! あなた方はやもめたちの家々を食い物にし,見せかけのために長い祈りをするからだ。だから,あなた方は最も厳しい裁きを受けるだろう。
೧೩“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
14 「だが,あなた方は災いだ,律法学者たちとファリサイ人たち,偽善者たちよ! あなた方は人々の前で天の王国を閉ざすからだ。自分たちが入らないばかりか,入ろうとする者たちにも入らせないのだ。
೧೪ಅಯ್ಯೋ, ಕಪಟಿಗಳಾದಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.
15 あなた方は災いだ,律法学者たちとファリサイ人たち,偽善者たちよ! あなた方は一人の改宗者を作るために海と陸を巡り歩き,それができると,自分に倍するほどのゲヘナの子とするからだ。 (Geenna )
೧೫“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. (Geenna )
16 「あなた方は災いだ,盲目の案内人たち,『だれでも神殿にかけて誓うなら,それは無意味だが,神殿の金にかけて誓うなら,その者には果たす義務がある』と言う者よ。
೧೬“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
17 盲目の愚か者たちよ! 金と,その金を聖別する神殿とでは,どちらが偉大なのか。
೧೭ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?
18 また,『だれでも祭壇にかけて誓うなら,それは無意味だが,その上にある供え物にかけて誓うなら,その者には果たす義務がある』とも言う。
೧೮ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
19 盲目の愚か者たちよ! 供え物と,その供え物を聖別する祭壇とでは,どちらが偉大なのか。
೧೯ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?
20 だから,祭壇にかけて誓う者は,祭壇とその上にあるすべての物にかけて誓っているのだ。
೨೦ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
21 神殿にかけて誓う者は,神殿とそこに住んでおられる方にかけて誓っているのだ。
೨೧ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
22 天にかけて誓う者は,神のみ座とその上に座っておられる方にかけて誓っているのだ。
೨೨ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
23 「あなた方は災いだ,律法学者たちとファリサイ人たち,偽善者たちよ! あなた方はハッカ,イノンド,クミンの十分の一税は納めていながら,律法のもっと重要な事柄,すなわち公正とあわれみと忠実をなおざりにしている。
೨೩ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
24 盲目の案内人よ,ブヨはこして除きながら,ラクダをのみ込む者たちよ!
೨೪ಕುರುಡ ಮಾರ್ಗದರ್ಶಿಗಳೇ, ನೀವುಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.
25 「あなた方は災いだ,律法学者たちとファリサイ人たち,偽善者たちよ! あなた方は杯と皿の外側は清めるが,内側は強奪と不義で満ちているからだ。
೨೫“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
26 盲目のファリサイ人よ,外側も清くするために,まず杯と皿の内側を清めなさい。
೨೬ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.
27 「あなた方は災いだ,律法学者たちとファリサイ人たち,偽善者たちよ! あなた方は白く塗った墓に似ているからだ。外側は美しく見えるが,内側は死んだ者たちの骨とあらゆる汚れでいっぱいだ。
೨೭“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
28 このようにあなた方も,人には外側は義人のように見えるが,内側は偽善と不法でいっぱいだ。
೨೮ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
29 「あなた方は災いだ,律法学者たちとファリサイ人たち,偽善者たちよ! あなた方は預言者たちの墓を建て,義人たちの墓を飾り立てて,
೨೯ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
30 『我々が父祖たちの日々に生きていたなら,彼らと共に預言者たちの血にあずかる者にはならなかっただろうに』と言う。
೩೦‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
31 こうしてあなた方は,預言者たちを殺した者たちの子供であることを自分で証明している。
೩೧ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
32 それなら,あなた方の父祖たちのますを満たしなさい。
೩೨ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.
33 蛇よ,マムシらの子孫よ,あなた方はどうしてゲヘナの裁きを逃れることができようか。 (Geenna )
೩೩ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? (Geenna )
34 それゆえ,見よ,わたしはあなた方に預言者たちと賢人たちと律法学者たちを遣わす。あなた方は,そのうちのある者たちを殺してはりつけにし,ある者たちを自分たちの会堂でむち打ち,町から町へと迫害するだろう。
೩೪ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
35 それは,義なるアベルの血から,あなた方が聖所と祭壇の間で殺したバラキアの子ザカリヤの血に至るまで,地上で流されたすべての義なる血があなた方の上にふりかかるためだ。
೩೫ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
36 本当にはっきりとあなた方に告げる。こうした事柄すべては,この世代の上にふりかかるだろう。
೩೬ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
37 「エルサレム,エルサレム,預言者たちを殺し,自分のところに遣わされた者たちを石打ちにする者よ! めんどりがそのひなを翼の下に集めるように,わたしは幾たびあなたの子らを集めようとしたことか。だが,あなた方は応じなかった!
೩೭“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
38 見よ,あなた方の家は荒れ果てたままに残される。
೩೮ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.
39 あなた方に告げるが,あなた方は,『主の名において来る者は幸いだ!』と言うときまでは,今後決してわたしを見ることはないだろう」 。
೩೯ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.