< 歴代誌Ⅰ 24 >

1 アロンの子孫の組は次のとおりである。すなわちアロンの子らはナダブ、アビウ、エレアザル、イタマル。
ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.
2 ナダブとアビウはその父に先だって死に、子がなかったので、エレアザルとイタマルが祭司となった。
ಆದರೆ ನಾದಾಬ್ ಮತ್ತು ಅಬೀಹೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದುದರಿಂದ ಎಲಿಯಾಜರನೂ, ಈತಾಮಾರನೂ ಯಾಜಕ ಸೇವೆ ಮಾಡಿದರು.
3 ダビデはエレアザルの子孫ザドクとイタマルの子孫アヒメレクの助けによって彼らを分けて、それぞれの勤めにつけた。
ಆದ್ದರಿಂದ ದಾವೀದನು ಎಲಿಯಾಜರನ ಮಕ್ಕಳಲ್ಲಿ ಚಾದೋಕನಿಗೂ, ಈತಾಮಾರನ ಮಕ್ಕಳಲ್ಲಿ ಅಹೀಮೆಲೆಕನಿಗೂ ಅವರ ಸೇವೆಯಲ್ಲಿರುವ ಪದ್ದತಿಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
4 エレアザルの子孫のうちにはイタマルの子孫のうちよりも長たる人々が多かった。それでエレアザルの子孫で氏族の長である十六人と、イタマルの子孫で氏族の長である者八人にこれを分けた。
ಈತಾಮಾರನ ಪುತ್ರರಿಗಿಂತ ಎಲಿಯಾಜರನ ಪುತ್ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದುದರಿಂದ, ಅವರು ಸಹ ಹೀಗೆಯೇ ವಿಭಾಗಿಸಿದ್ದರು. ಎಲಿಯಾಜರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟು ಮಂದಿ ಮುಖ್ಯಸ್ಥರು.
5 このように彼らは皆ひとしく、くじによって分けられた。聖所のつかさ、および神のつかさは、ともにエレアザルの子孫とイタマルの子孫から出たからである。
ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.
6 レビびとネタネルの子である書記シマヤは、王とつかさたちと祭司ザドクとアビヤタルの子アヒメレクと祭司およびレビびとの氏族の長たちの前で、これを書きしるした。すなわちエレアザルのために氏族一つを取れば、イタマルのためにも一つを取った。
ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೆಯೇಲ್ ಇವನ ಮಗ ಲೇಖಕನಾದ ಶೆಮಾಯನು ಅರಸನ ಮುಂದೆಯೂ; ಪ್ರಧಾನರು, ಯಾಜಕನಾದ ಚಾದೋಕನು, ಅಬಿಯಾತರನ ಮಗ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಅವರ ಹೆಸರುಗಳನ್ನು ಬರೆದನು. ಎಲಿಯಾಜರನಿಗೋಸ್ಕರ ಒಂದು ಶ್ರೇಷ್ಠ ಮನೆ ತೆಗೆದುಕೊಳ್ಳಲಾಯಿತು. ಅದರಂತೆಯೇ, ಈತಾಮಾರನಿಗೋಸ್ಕರವೂ ಒಂದು ತೆಗೆದುಕೊಳ್ಳಲಾಯಿತು.
7 第一のくじはヨアリブに当り、第二はエダヤに当り、
ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; ಎರಡನೆಯದು ಯೆದಾಯನಿಗೆ,
8 第三はハリムに、第四はセオリムに、
ಮೂರನೆಯದು ಹಾರಿಮನಿಗೆ; ನಾಲ್ಕನೆಯದು ಸೆಯೋರೀಮನಿಗೆ;
9 第五はマルキヤに、第六はミヤミンに、
ಐದನೆಯದು ಮಲ್ಕೀಯನಿಗೆ; ಆರನೆಯದು ಮಿಯಾಮಿನನಿಗೆ;
10 第七はハッコヅに、第八はアビヤに、
ಏಳನೆಯದು ಹಕ್ಕೋಚನಿಗೆ; ಎಂಟನೆಯದು ಅಬೀಯನಿಗೆ;
11 第九はエシュアに、第十はシカニヤに、
ಒಂಬತ್ತನೆಯದು ಯೆಷೂವನಿಗೆ; ಹತ್ತನೆಯದು ಶೇಕನ್ಯನಿಗೆ;
12 第十一はエリアシブに、第十二はヤキムに、
ಹನ್ನೊಂದನೆಯದು ಎಲ್ಯಾಷೀಬನಿಗೆ; ಹನ್ನೆರಡನೆಯದು ಯಾಕೀಮನಿಗೆ,
13 第十三はホッパに、第十四はエシバブに、
ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಯೆಷೆಬಾಬನಿಗೆ;
14 第十五はビルガに、第十六はインメルに、
ಹದಿನೈದನೆಯದು ಬಿಲ್ಗನಿಗೆ; ಹದಿನಾರನೆಯದು ಇಮ್ಮೇರನಿಗೆ;
15 第十七はヘジルに、第十八はハピセツに、
ಹದಿನೇಳನೆಯದು ಹೇಜೀರನಿಗೆ; ಹದಿನೆಂಟನೆಯದು ಹಪಿಚ್ಚೇಚನಿಗೆ;
16 第十九はペタヒヤに、第二十はエゼキエルに、
ಹತ್ತೊಂಬತ್ತನೆಯದು ಪೆತಹ್ಯನಿಗೆ; ಇಪ್ಪತ್ತನೆಯದು ಯೆಹೆಜ್ಕೇಲನಿಗೆ;
17 第二十一はヤキンに、第二十二はガムルに、
ಇಪ್ಪತ್ತೊಂದನೆಯದು ಯಾಕೀನನಿಗೆ; ಇಪ್ಪತ್ತೆರಡನೆಯದು ಗಾಮೂಲನಿಗೆ;
18 第二十三はデラヤに、第二十四はマアジヤに当った。
ಇಪ್ಪತ್ಮೂರನೆಯದು ದೆಲಾಯನಿಗೆ; ಇಪ್ಪತ್ನಾಲ್ಕನೆಯದು ಮಾಜ್ಯನಿಗೆ.
19 これは、彼らの先祖アロンによって設けられた定めにしたがい、主の家にはいって務をなす順序であって、イスラエルの神、主の彼に命じられたとおりである。
ಇವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತಮ್ಮ ತಂದೆ ಆರೋನನಿಗೆ ಆಜ್ಞಾಪಿಸಿದ ಹಾಗೆ, ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ, ಯೆಹೋವ ದೇವರ ಮನೆಯಲ್ಲಿ ಸೇವೆ ಮಾಡುವುದಕ್ಕೆ ಬರಬೇಕಾದ ಅವರ ನಿಯಮಗಳು.
20 このほかのレビの子孫は次のとおりである。すなわちアムラムの子らのうちではシュバエル。シュバエルの子らのうちではエデヤ。
ಲೇವಿಯ ವಂಶಜರಲ್ಲಿ ಉಳಿದವರು ಯಾರೆಂದರೆ: ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾಯೇಲನ ಪುತ್ರರಲ್ಲಿ ಯೆಹ್ದೆಯಾಹನು.
21 レハビヤについては、レハビヤの子らのうちでは長子イシア。
ರೆಹಬ್ಯನನ್ನು ಕುರಿತು: ರೆಹಬ್ಯನ ಪುತ್ರರಲ್ಲಿ ಇಷೀಯನು ಮೊದಲನೆಯವನು.
22 イヅハリびとのうちではシロミテ。シロミテの子らのうちではヤハテ。
ಇಚ್ಹಾರರಲ್ಲಿ ಶೆಲೋಮೋತನು ಮೊದಲನೆಯವನು. ಶೆಲೋಮೋತನ ಪುತ್ರರಲ್ಲಿ ಯಹತನು.
23 ヘブロンの子らは長子はエリヤ、次はアマリヤ、第三はヤハジエル、第四はエカメアム。
ಹೆಬ್ರೋನನ ಪುತ್ರರಲ್ಲಿ ಯೆರೀಯನು ಮೊದಲನೆಯವನು; ಎರಡನೆಯವನು ಅಮರ್ಯ; ಮೂರನೆಯವನು ಯಹಜಿಯೇಲ್; ನಾಲ್ಕನೆಯವನು ಯೆಕಮ್ಮಾಮ್.
24 ウジエルの子らのうちではミカ。ミカの子らのうちではシャミル。
ಉಜ್ಜೀಯೇಲನ ಕುಮಾರರಲ್ಲಿ ಮೀಕನು; ಮೀಕನ ಪುತ್ರರಲ್ಲಿ ಶಾಮೀರನು.
25 ミカの兄弟はイシア。イシアの子らのうちではゼカリヤ。
ಮೀಕನ ಸಹೋದರನು ಇಷೀಯನು; ಇಷೀಯನ ಪುತ್ರರಲ್ಲಿ ಜೆಕರ್ಯ.
26 メラリの子らはマヘリとムシ。ヤジアの子らはベノ。
ಮೆರಾರೀಯ ಪುತ್ರರಲ್ಲಿ ಮಹ್ಲೀ, ಮೂಷೀ; ಯಾಜ್ಯನ ಮಗನು ಬೆನೋನು.
27 メラリの子孫のヤジアから出た者はベノ、ショハム、ザックル、イブリ。
ಮೆರಾರೀಯ ಪುತ್ರರಲ್ಲಿ ಯಾಜ್ಯನಿಗೆ ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಎಂಬ ಪುತ್ರರಿದ್ದರು.
28 マヘリからエレアザルが出た。彼には子がなかった。
ಮಹ್ಲೀಯನಿಗೆ ಎಲಿಯಾಜರನು ಹುಟ್ಟಿದನು; ಎಲಿಯಾಜರನಿಗೆ ಪುತ್ರರಿರಲಿಲ್ಲ.
29 キシについては、キシの子はエラメル。
ಕೀಷನಿಂದ ಯೆರಹ್ಮೇಲನು.
30 ムシの子らはマヘリ、エデル、エリモテ。これらはレビびとの子孫で、その氏族によっていった者である。
ಮೂಷೀಯ ಪುತ್ರರು: ಮಹ್ಲೀ, ಏದೆರ್, ಯೆರೀಮೋತ್. ಇವರು ತಮ್ಮ ಕುಟುಂಬಗಳ ಪ್ರಕಾರ ಲೇವಿಯರ ಪುತ್ರರಾಗಿದ್ದರು.
31 これらの者もまた氏族の兄もその弟も同様に、ダビデ王と、ザドクと、アヒメレクと、祭司およびレビびとの氏族の長たちの前で、アロンの子孫であるその兄弟たちのようにくじを引いた。
ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ, ಚಾದೋಕನು, ಅಹೀಮೆಲೆಕನು, ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ, ಆರೋನನ ಪುತ್ರರಾದ ತಮ್ಮ ಸಹೋದರರಿಗೆ ಎದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಕಿರಿಯ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

< 歴代誌Ⅰ 24 >