< サムエル記Ⅰ 11 >
1 アンモンびとナハシは上ってきて、ヤベシ・ギレアデを攻め囲んだ。ヤベシの人々はナハシに言った、「われわれと契約を結びなさい。そうすればわれわれはあなたに仕えます」。
೧ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
2 しかしアンモンびとナハシは彼らに言った、「次の条件であなたがたと契約を結ぼう。すなわち、わたしが、あなたがたすべての右の目をえぐり取って、全イスラエルをはずかしめるということだ」。
೨ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
3 ヤベシの長老たちは彼に言った、「われわれに七日の猶予を与え、イスラエルの全領土に使者を送ることを許してください。そしてもしわれわれを救う者がない時は降伏します」。
೩ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
4 こうして使者が、サウルのギベアにきて、この事を民の耳に告げたので、民はみな声をあげて泣いた。
೪ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
5 その時サウルは畑から牛のあとについてきた。そしてサウルは言った、「民が泣いているのは、どうしたのか」。人々は彼にヤベシの人々の事を告げた。
೫ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
6 サウルがこの言葉を聞いた時、神の霊が激しく彼の上に臨んだので、彼の怒りははなはだしく燃えた。
೬ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
7 彼は一くびきの牛をとり、それを切り裂き、使者の手によってイスラエルの全領土に送って言わせた、「だれであってもサウルとサムエルとに従って出ない者は、その牛がこのようにされるであろう」。民は主を恐れて、ひとりのように出てきた。
೭ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
8 サウルはベゼクでそれを数えたが、イスラエルの人々は三十万、ユダの人々は三万であった。
೮ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
9 そして人々は、きた使者たちに言った、「ヤベシ・ギレアデの人にこう言いなさい、『あす、日の暑くなるころ、あなたがたは救を得るであろう』と」。使者が帰って、ヤベシの人々に告げたので、彼らは喜んだ。
೯ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
10 そこでヤベシの人々は言った、「あす、われわれは降伏します。なんでも、あなたがたが良いと思うことを、われわれにしてください」。
೧೦ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
11 明くる日、サウルは民を三つの部隊に分け、あかつきに敵の陣営に攻め入り、日の暑くなるころまで、アンモンびとを殺した。生き残った者はちりぢりになって、ふたり一緒にいるものはなかった。
೧೧ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
12 その時、民はサムエルに言った、「さきに、『サウルがどうしてわれわれを治めることができようか』と言ったものはだれでしょうか。その人々を引き出してください。われわれはその人々を殺します」。
೧೨ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
13 しかしサウルは言った、「主はきょう、イスラエルに救を施されたのですから、きょうは人を殺してはなりません」。
೧೩ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
14 そこでサムエルは民に言った、「さあ、ギルガルへ行って、あそこで王国を一新しよう」。
೧೪ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
15 こうして民はみなギルガルへ行って、その所で主の前にサウルを王とし、酬恩祭を主の前にささげ、サウルとイスラエルの人々は皆、その所で大いに祝った。
೧೫ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.