< 歴代誌Ⅱ 10 >

1 レハベアムはシケムへ行った。すべてのイスラエルびとが彼を王にしようとシケムへ行ったからである。
ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.
2 ネバテの子ヤラベアムは、ソロモンを避けてエジプトにのがれていたが、これを聞いてエジプトから帰ったので、
ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.
3 人々は人をつかわして彼を招いた。そこでヤラベアムとすべてのイスラエルは来て、レハベアムに言った、
ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
4 「あなたの父は、われわれのくびきを重くしましたが、今あなたの父のきびしい使役と、あなたの父が、われわれに負わせた重いくびきを軽くしてください。そうすればわたしたちはあなたに仕えましょう」。
ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು” ಎಂದು ಹೇಳಿದರು.
5 レハベアムは彼らに答えた、「三日の後、またわたしの所に来なさい」。それで民は去った。
ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ಬಳಿಕ ಬನ್ನಿರಿ” ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು.
6 レハベアム王は父ソロモンの存命中ソロモンに仕えた長老たちに相談して言った、「あなたがたはこの民にどう返答すればよいと思いますか」。
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.
7 彼らはレハベアムに言った、「あなたがもしこの民を親切にあつかい、彼らを喜ばせ、ねんごろに語られるならば彼らは長くあなたのしもべとなるでしょう」。
ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು.
8 しかし彼は長老たちが与えた勧めをすてて、自分と一緒に大きくなって自分に仕えている若者たちに相談して、
ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.
9 彼らに言った、「あなたがたは、この民がわたしに向かって、『あなたの父上が、われわれに負わせたくびきを軽くしてください』と言うのに、われわれはなんと返答すればよいと思いますか」。
“ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
10 彼と一緒に大きくなった若者たちは彼に言った、「あなたに向かって、『あなたの父は、われわれのくびきを重くしたが、あなたは、それをわれわれのために軽くしてください』と言ったこの民に、こう言いなさい、『わたしの小指は父の腰よりも太い、
೧೦ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ.
11 父はあなたがたに重いくびきを負わせたが、わたしはさらに、あなたがたのくびきを重くしよう。父はむちであなたがたを懲らしたが、わたしはさそりであなたがたを懲らそう』」。
೧೧ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.
12 さてヤラベアムと民は皆、王が「三日目にわたしのところに来なさい」と言ったとおりに、三日目にレハベアムのところへ行った。
೧೨ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು.
13 王は荒々しく彼らに答えた。すなわちレハベアム王は長老たちの勧めをすて、
೧೩ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.
14 若者たちの勧めに従い、彼らに告げて言った、「父はあなたがたのくびきを重くしたが、わたしは更にこれを重くしよう。父はむちであなたがたを懲らしたが、わたしはさそりであなたがたを懲らそう」。
೧೪ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
15 このように王は民の言うことを聞きいれなかった。これは主が、かつてシロびとアヒヤによって、ネバテの子ヤラベアムに言われた言葉を成就するために、神がなされたのであった。
೧೫ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.
16 イスラエルの人々は皆、王が自分たちの言うことを聞きいれないのを見たので、民は王に答えて言った、「われわれはダビデのうちに何の分があろうか。われわれはエッサイの子のうちに嗣業がない。イスラエルよ、めいめいの天幕に帰れ。ダビデよ、今あなたの家を見よ」。そしてイスラエルは皆彼らの天幕へ去って行った。
೧೬ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
17 しかしレハベアムはユダの町々に住んでいるイスラエルの人々を治めた。
೧೭ಯೆಹೂದ ಪಟ್ಟಣದಲ್ಲಿದ್ದ ಇಸ್ರಾಯೇಲರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.
18 レハベアム王は徴募人の監督であったアドラムをつかわしたが、イスラエルの人々が石で彼を撃ち殺したので、レハベアム王は急いで車に乗り、エルサレムに逃げた。
೧೮ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.
19 こうしてイスラエルはダビデの家にそむいて今日に至った。
೧೯ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.

< 歴代誌Ⅱ 10 >