< 歴代誌Ⅱ 32 >

1 ヒゼキヤがこれらの事を忠実に行った後、アッスリヤの王セナケリブが来てユダに侵入し、堅固な町々に向かって陣を張り、これを攻め取ろうとした。
ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
2 ヒゼキヤはセナケリブが来て、エルサレムを攻めようとするのを見たので、
ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
3 そのつかさたちおよび勇士たちと相談して、町の外にある泉の水を、ふさごうとした。彼らはこれを助けた。
ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
4 多くの民は集まって、すべての泉および国の中を流れる谷川をふさいで言った、「アッスリヤの王たちがきて、多くの水を得られるようなことをしておいていいだろうか」。
ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
5 ヒゼキヤはまた勇気を出して、破れた城壁をことごとく築き直して、その上にやぐらを建て、その外にまた城壁を巡らし、ダビデの町のミロを堅固にし、武器および盾を多く造り、
ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
6 軍長を民の上に置き、町の門の広場に民を集めて、これを励まして言った、
ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
7 「心を強くし、勇みたちなさい。アッスリヤの王をも、彼と共にいるすべての群衆をも恐れてはならない。おののいてはならない。われわれと共におる者は彼らと共におる者よりも大いなる者だからである。
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
8 彼と共におる者は肉の腕である。しかしわれわれと共におる者はわれわれの神、主であって、われわれを助け、われわれに代って戦われる」。民はユダの王ヒゼキヤの言葉に安心した。
ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
9 この後アッスリヤの王セナケリブはその全軍をもってラキシを囲んでいたが、その家来をエルサレムにつかわして、ユダの王ヒゼキヤおよびエルサレムにいるすべてのユダの人に告げさせて言った、
ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
10 「アッスリヤの王セナケリブはこう言います、『あなたがたは何を頼んでエルサレムにこもっているのか。
೧೦“ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
11 ヒゼキヤは「われわれの神、主がアッスリヤの王の手から、われわれを救ってくださる」と言って、あなたがたをそそのかし、飢えと、かわきをもって、あなたがたを死なせようとしているのではないか。
೧೧ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
12 このヒゼキヤは主のもろもろの高き所と祭壇を取り除き、ユダとエルサレムに命じて、「あなたがたはただ一つの祭壇の前で礼拝し、その上に犠牲をささげなければならない」と言った者ではないか。
೧೨ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
13 あなたがたは、わたしおよびわたしの先祖たちが、他の国々のすべての民にしたことを知らないのか。それらの国々の民の神々は、少しでもその国を、わたしの手から救い出すことができたか。
೧೩ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
14 わたしの先祖たちが滅ぼし尽したそれらの国民のもろもろの神のうち、だれか自分の民をわたしの手から救い出すことのできたものがあるか。それで、どうしてあなたがたの神が、あなたがたをわたしの手から救い出すことができよう。
೧೪ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
15 それゆえ、あなたがたはヒゼキヤに欺かれてはならない。そそのかされてはならない。また彼を信じてはならない。いずれの民、いずれの国の神もその民をわたしの手、または、わたしの先祖の手から救いだすことができなかったのだから、ましてあなたがたの神が、どうしてわたしの手からあなたがたを救いだすことができようか』」。
೧೫ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
16 セナケリブの家来は、このほかにも多く主なる神、およびそのしもべヒゼキヤをそしった。
೧೬ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
17 セナケリブはまた手紙を書き送って、イスラエルの神、主をあざけり、かつそしって言った、「諸国の民の神々が、その民をわたしの手から救い出さなかったように、ヒゼキヤの神も、その民をわたしの手から救い出さないであろう」と。
೧೭ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
18 そして彼らは大声をあげ、ユダヤの言葉をもって、城壁の上にいるエルサレムの民に向かって叫び、これをおどし、かつおびやかした。彼らは町を取るためである。
೧೮ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
19 このように彼らがエルサレムの神について語ること、人の手のわざである地上の民の神々について語るようであった。
೧೯ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
20 そこでヒゼキヤ王およびアモツの子預言者イザヤは共に祈って、天に呼ばわったので、
೨೦ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
21 主はひとりのみ使をつかわして、アッスリヤ王の陣営にいるすべての大勇士と将官、軍長らを滅ぼされた。それで王は赤面して自分の国に帰ったが、その神の家にはいった時、その子のひとりが、つるぎをもって彼をその所で殺した。
೨೧ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
22 このように主は、ヒゼキヤとエルサレムの住民をアッスリヤの王セナケリブの手およびすべての敵の手から救い出し、いたる所で彼らを守られた。
೨೨ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
23 そこで多くの人々はささげ物をエルサレムに携えてきて主にささげ、また宝物をユダの王ヒゼキヤに贈った。この後ヒゼキヤは万国の民に尊ばれた。
೨೩ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
24 そのころ、ヒゼキヤは病んで死ぬばかりであったが、主に祈ったので、主はこれに答えて、しるしを賜わった。
೨೪ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
25 しかしヒゼキヤはその受けた恵みに報いることをせず、その心が高ぶったので、怒りが彼とユダおよびエルサレムに臨もうとしたが、
೨೫ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
26 ヒゼキヤはその心の高ぶりを悔いてへりくだり、またエルサレムの住民も同様にしたので、主の怒りは、ヒゼキヤの世には彼らに臨まなかった。
೨೬ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
27 ヒゼキヤは富と栄誉をきわめ、宝蔵を造って、金、銀、宝石、香料、盾および各種の尊い器物をおさめ、
೨೭ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
28 また倉庫を造って穀物、酒、油などの産物をおさめ、小屋を造って種々の家畜を置き、おりを造って羊の群れを置き、
೨೮ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
29 また多数の町を設け、かつ羊と牛をおびただしく所有した。神が非常に多くの貨財を彼に賜わったからである。
೨೯ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
30 このヒゼキヤはまたギホンの水の上の源をふさいで、これをダビデの町の西の方にまっすぐに引き下した。このようにヒゼキヤはそのすべてのわざをなし遂げた。
೩೦ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
31 しかしバビロンの君たちが使者をつかわして、この国にあった、しるしについて尋ねさせた時には、神は彼を試みて、彼の心にあることを、ことごとく知るために彼を捨て置かれた。
೩೧ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
32 ヒゼキヤのその他の行為およびその徳行は、アモツの子預言者イザヤの黙示とユダとイスラエルの列王の書にしるされている。
೩೨ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
33 ヒゼキヤはその先祖たちと共に眠ったので、ダビデの子孫の墓のうちの高い所に葬られた。ユダの人々およびエルサレムの住民は皆その死に当って彼に敬意を表した。その子マナセが彼に代って王となった。
೩೩ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

< 歴代誌Ⅱ 32 >