< 歴代誌Ⅱ 33 >

1 マナセは十二歳で王となり、五十五年の間エルサレムで世を治めた。
ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.
2 彼は主がイスラエルの人々の前から追い払われた国々の民の憎むべき行いに見ならって、主の目の前に悪を行った。
ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
3 すなわち、その父ヒゼキヤがこわした高き所を再び築き、またもろもろのバアルのために祭壇を設け、アシラ像を造り、天の万象を拝んで、これに仕え、
ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
4 また主が「わが名は永遠にエルサレムにある」と言われた主の宮のうちに数個の祭壇を築き、
ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,
5 主の宮の二つの庭に天の万象のために祭壇を築いた。
ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
6 彼はまたベンヒンノムの谷でその子供を火に焼いて供え物とし、占いをし、魔法をつかい、まじないを行い、口寄せと、占い師を任用するなど、主の前に多くの悪を行って、その怒りをひき起した。
ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
7 彼はまた刻んだ偶像を造って神の宮に安置した。神はこの宮についてダビデとその子ソロモンに言われたことがある、「わたしはこの宮と、わたしがイスラエルのすべての部族のうちから選んだエルサレムとに、わたしの名を永遠に置く。
ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.
8 彼らがもし、わたしがすべて命じた事、すなわち、モーセが伝えたすべての律法と定めとおきてとを慎んで行うならば、わたしがあなたがたの先祖のために定めた地から、重ねてイスラエルの足を移すことをしない」と。
ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
9 マナセはこのようにユダとエルサレムの住民を迷わせ、主がイスラエルの人々の前に滅ぼされた国々の民にもまさって悪を行わせた。
ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
10 主はマナセおよびその民に告げられたが、彼らは心に留めなかった。
೧೦ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.
11 それゆえ、主はアッスリヤの王の軍勢の諸将をこれに攻めこさせられたので、彼らはマナセをかぎで捕え、青銅のかせにつないで、バビロンに引いて行った。
೧೧ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
12 彼は悩みにあうに及んで、その神、主に願い求め、その先祖の神の前に大いに身を低くして、
೧೨ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
13 神に祈ったので、神はその祈を受けいれ、その願いを聞き、彼をエルサレムに連れ帰って、再び国に臨ませられた。これによってマナセは主こそ、まことに神にいますことを知った。
೧೩ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.
14 この後、彼はダビデの町の外の石がきをギホンの西の方の谷のうちに築き、魚の門の入口にまで及ぼし、またオペルに石がきをめぐらして、非常に高くこれを築き上げ、ユダのすべての堅固な町に軍長を置き、
೧೪ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.
15 また主の宮から、異邦の神々および偶像を取り除き、主の宮の山とエルサレムに自分で築いたすべての祭壇を取り除いて、町の外に投げ捨て、
೧೫ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.
16 主の祭壇を築き直して、酬恩祭および感謝の犠牲を、その上にささげ、ユダに命じてイスラエルの神、主に仕えさせた。
೧೬ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.
17 しかし民は、なお高き所で犠牲をささげた。ただしその神、主にのみささげた。
೧೭ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
18 マナセのそのほかの行為、その神にささげた祈、およびイスラエルの神、主の名をもって彼に告げた先見者たちの言葉は、イスラエルの列王の記録のうちにしるされている。
೧೮ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.
19 またその祈と、祈の聞かれた事、そのもろもろの罪と、とが、その身を低くする前に高き所を築いて、アシラ像および刻んだ像を立てた場所などは、先見者の記録のうちにしるされている。
೧೯ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
20 マナセはその先祖たちと共に眠ったので、その家に葬られた。その子アモンが彼に代って王となった。
೨೦ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.
21 アモンは王となった時二十二歳で、二年の間エルサレムで世を治めた。
೨೧ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.
22 彼はその父マナセのしたように主の前に悪を行った。すなわちアモンはその父マナセが造ったもろもろの刻んだ像に犠牲をささげて、これに仕え、
೨೨ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
23 その父マナセが身を低くしたように主の前に身を低くしなかった。かえってこのアモンは、いよいよそのとがを増した。
೨೩ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
24 その家来たちは党を結んで彼にそむき、彼をその家で殺した。
೨೪ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.
25 しかし国の民は、党を結んでアモン王にそむいた者どもをことごとく撃ち殺した。そして国の民はその子ヨシヤを王となして、そのあとを継がせた。
೨೫ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.

< 歴代誌Ⅱ 33 >