< 列王記Ⅱ 17 >
1 ユダの王アハズの第十二年にエラの子ホセアが王となり、サマリヤで九年の間、イスラエルを治めた。
೧ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.
2 彼は主の目の前に悪を行ったが、彼以前のイスラエルの王たちのようではなかった。
೨ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
3 アッスリヤの王シャルマネセルが攻め上ったので、ホセアは彼に隷属して、みつぎを納めたが、
೩ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.
4 アッスリヤの王はホセアがついに自分にそむいたのを知った。それはホセアが使者をエジプトの王ソにつかわし、また年々納めていたみつぎを、アッスリヤの王に納めなかったからである。そこでアッスリヤの王は彼を監禁し、獄屋につないだ。
೪ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
5 そしてアッスリヤの王は攻め上って国中を侵し、サマリヤに上ってきて三年の間、これを攻め囲んだ。
೫ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.
6 ホセアの第九年になって、アッスリヤの王はついにサマリヤを取り、イスラエルの人々をアッスリヤに捕えていって、ハラと、ゴザンの川ハボルのほとりと、メデアの町々においた。
೬ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
7 この事が起ったのは、イスラエルの人々が、自分たちをエジプトの地から導き上って、エジプトの王パロの手をのがれさせられたその神、主にむかって罪を犯し、他の神々を敬い、
೭ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
8 主がイスラエルの人々の前から追い払われた異邦人のならわしに従って歩み、またイスラエルの王たちが定めたならわしに従って歩んだからである。
೮ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.
9 イスラエルの人々はその神、主にむかって正らぬ事をひそかに行い、見張台から堅固な町に至るまで、すべての町々に高き所を建て、
೯ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.
10 またすべての高い丘の上、すべての青木の下に石の柱とアシラ像を立て、
೧೦ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.
11 主が彼らの前から捕え移された異邦人がしたように、すべての高き所で香をたき、悪事を行って、主を怒らせた。
೧೧ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.
12 また主が彼らに「あなたがたはこの事をしてはならない」と言われたのに偶像に仕えた。
೧೨“ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.
13 主はすべての預言者、すべての先見者によってイスラエルとユダを戒め、「翻って、あなたがたの悪い道を離れ、わたしがあなたがたの先祖たちに命じ、またわたしのしもべである預言者たちによってあなたがたに伝えたすべての律法のとおりに、わたしの戒めと定めとを守れ」と仰せられたが、
೧೩ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.
14 彼らは聞きいれず、彼らの先祖たちがその神、主を信じないで、強情であったように、彼らは強情であった。
೧೪ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
15 そして彼らは主の定めを捨て、主が彼らの先祖たちと結ばれた契約を破り、また彼らに与えられた警告を軽んじ、かつむなしい偶像に従ってむなしくなり、また周囲の異邦人に従った。これは主が、彼らのようにおこなってはならないと彼らに命じられたものである。
೧೫ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
16 彼らはその神、主のすべての戒めを捨て、自分のために二つの子牛の像を鋳て造り、またアシラ像を造り、天の万象を拝み、かつバアルに仕え、
೧೬ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
17 またそのむすこ、娘を火に焼いてささげ物とし、占いおよびまじないをなし、主の目の前に悪をおこなうことに身をゆだねて、主を怒らせた。
೧೭ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
18 それゆえ、主は大いにイスラエルを怒り、彼らをみ前から除かれたので、ユダの部族のほか残った者はなかった。
೧೮ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
19 ところがユダもまたその神、主の戒めを守らず、イスラエルが定めたならわしに歩んだので、
೧೯ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.
20 主はイスラエルの子孫をことごとく捨て、彼らを苦しめ、彼らを略奪者の手にわたして、ついに彼らをみ前から打ちすてられた。
೨೦ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.
21 主はイスラエルをダビデの家から裂き離されたので、イスラエルはネバテの子ヤラベアムを王としたが、ヤラベアムはイスラエルに、主に従うことをやめさせ、大きな罪を犯させた。
೨೧ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.
22 イスラエルの人々がヤラベアムのおこなったすべての罪をおこない続けて、それを離れなかったので、
೨೨ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.
23 ついに主はそのしもべである預言者たちによって言われたように、イスラエルをみ前から除き去られた。こうしてイスラエルは自分の国からアッスリヤに移されて今日に至っている。
೨೩ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
24 かくてアッスリヤの王はバビロン、クタ、アワ、ハマテおよびセパルワイムから人々をつれてきて、これをイスラエルの人々の代りにサマリヤの町々におらせたので、その人々はサマリヤを領有して、その町々に住んだ。
೨೪ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
25 彼らがそこに住み始めた時、主を敬うことをしなかったので、主は彼らのうちにししを送り、ししは彼らのうちの数人を殺した。
೨೫ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.
26 そこで人々はアッスリヤの王に告げて言った、「あなたが移してサマリヤの町々におらせられたあの国々の民は、その地の神のおきてを知らないゆえに、その神は彼らのうちにししを送り、ししは彼らを殺した。これは彼らが、その地の神のおきてを知らないためです」。
೨೬ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.
27 アッスリヤの王は命じて言った、「あなたがたがあそこから移した祭司のひとりをあそこへ連れて行きなさい。彼をあそこへやって住まわせ、その国の神のおきてをその人々に教えさせなさい」。
೨೭ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು.
28 そこでサマリヤから移された祭司のひとりが来てベテルに住み、どのように主を敬うべきかを彼らに教えた。
೨೮ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.
29 しかしその民はおのおの自分の神々を造って、それをサマリヤびとが造った高き所の家に安置した。民は皆住んでいる町々でそのようにおこなった。
೨೯ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.
30 すなわちバビロンの人々はスコテ・ベノテを造り、クタの人々はネルガルを造り、ハマテの人々はアシマを造り、
೩೦ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.
31 アワの人々はニブハズとタルタクを造り、セパルワイムびとはその子を火に焼いて、セパルワイムの神アデランメレクおよびアナンメレクにささげた。
೩೧ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.
32 彼はまた主を敬い、自分たちのうちから一般の民を立てて高き所の祭司としたので、その人々は高き所の家で勤めをした。
೩೨ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.
33 このように彼らは主を敬ったが、また彼らが出てきた国々のならわしにしたがって、自分たちの神々にも仕えた。
೩೩ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
34 今日に至るまで彼らは先のならわしにしたがっておこなっている。彼らは主を敬わず、また主がイスラエルと名づけられたヤコブの子孫に命じられた定めにも、おきてにも、律法にも、戒めにも従わない。
೩೪ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.
35 主はかつて彼らと契約を結び、彼らに命じて言われた、「あなたがたは他の神々を敬ってはならない。また彼らを拝み、彼らに仕え、彼らに犠牲をささげてはならない。
೩೫ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.
36 ただ大きな力と伸べた腕とをもって、あなたがたをエジプトの地から導き上った主をのみ敬い、これを拝み、これに犠牲をささげなければならない。
೩೬ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.
37 またあなたがたのために書きしるされた定めと、おきてと、律法と、戒めとを、慎んで常に守らなければならない。他の神々を敬ってはならない。
೩೭ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.
38 わたしがあなたがたと結んだ契約を忘れてはならない。また他の神々を敬ってはならない。
೩೮ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.
39 ただあなたがたの神、主を敬わなければならない。主はあなたがたをそのすべての敵の手から救い出されるであろう」。
೩೯ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.
40 しかし彼らは聞きいれず、かえって先のならわしにしたがっておこなった。
೪೦ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.
41 このように、これらの民は主を敬い、またその刻んだ像にも仕えたが、その子たちも、孫たちも同様であって、彼らはその先祖がおこなったように今日までおこなっている。
೪೧ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.