< 列王記Ⅱ 24 >
1 エホヤキムの世にバビロンの王ネブカデネザルが上ってきたので、エホヤキムは彼に隷属して三年を経たが、ついに翻って彼にそむいた。
೧ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.
2 主はカルデヤびとの略奪隊、スリヤびとの略奪隊、モアブびとの略奪隊、アンモンびとの略奪隊をつかわしてエホヤキムを攻められた。すなわちユダを攻め、これを滅ぼすために彼らをつかわされた。主がそのしもべである預言者たちによって語られた言葉のとおりである。
೨ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.
3 これは全く主の命によってユダに臨んだもので、ユダを主の目の前から払い除くためであった。すなわちマナセがすべておこなったその罪のため、
೩ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.
4 また彼が罪なき人の血を流し、罪なき人の血をエルサレムに満たしたためであって、主はその罪をゆるそうとはされなかった。
೪ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
5 エホヤキムのその他の事績と、彼がおこなったすべての事は、ユダの王の歴代志の書にしるされているではないか。
೫ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
6 エホヤキムは先祖たちとともに眠り、その子エホヤキンが代って王となった。
೬ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.
7 エジプトの王は再びその国から出てこなかった。バビロンの王がエジプトの川からユフラテ川まで、すべてエジプトの王に属するものを取ったからである。
೭ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.
8 エホヤキンは王となった時十八歳で、エルサレムで三か月の間、世を治めた。母はエルサレムのエルナタンの娘で、名をネホシタといった。
೮ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.
9 エホヤキンはすべてその父がおこなったように主の目の前に悪を行った。
೯ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
10 そのころ、バビロンの王ネブカデネザルの家来たちはエルサレムに攻め上って、町を囲んだ。
೧೦ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.
11 その家来たちが町を囲んでいたとき、バビロンの王ネブカデネザルもまた町に攻めてきた。
೧೧ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.
12 ユダの王エホヤキンはその母、その家来、そのつかさたち、および侍従たちと共に出て、バビロンの王に降服したので、バビロンの王は彼を捕虜とした。これはネブカデネザルの治世の第八年であった。
೧೨ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.
13 彼はまた主の宮のもろもろの宝物および王の家の宝物をことごとく持ち出し、イスラエルの王ソロモンが造って主の神殿に置いたもろもろの金の器を切りこわした。主が言われたとおりである。
೧೩ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.
14 彼はまたエルサレムのすべての市民、およびすべてのつかさとすべての勇士、ならびにすべての木工と鍛冶一万人を捕えて行った。残った者は国の民の貧しい者のみであった。
೧೪ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.
15 さらに彼はエホヤキンをバビロンに捕えて行き、また王の母、王の妻たち、および侍従と国のうちのおもな人々をも、エルサレムからバビロンへ捕えて行った。
೧೫ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.
16 またバビロンの王はすべて勇敢な者七千人、木工と鍛冶一千人ならびに強くて良く戦う者をみな捕えてバビロンへ連れて行った。
೧೬ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.
17 そしてバビロンの王はエホヤキンの父の兄弟マッタニヤを王としてエホヤキンに代え、名をゼデキヤと改めた。
೧೭ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.
18 ゼデキヤは二十一歳で王となり、エルサレムで十一年の間、世を治めた。母はリブナのエレミヤの娘で、名をハムタルといった。
೧೮ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
19 ゼデキヤはすべてエホヤキムがおこなったように主の目の前に悪を行った。
೧೯ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
20 エルサレムとユダにこのような事の起ったのは主の怒りによるので、主はついに彼らをみ前から払いすてられた。さてゼデキヤはバビロンの王にそむいた。
೨೦ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.