< 列王記Ⅱ 6 >
1 さて預言者のともがらはエリシャに言った、「わたしたちがあなたと共に住んでいる所は狭くなりましたので、
೧ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.
2 わたしたちをヨルダンに行かせ、そこからめいめい一本ずつ材木を取ってきて、わたしたちの住む場所を造らせてください」。エリシャは言った、「行きなさい」。
೨ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು.
3 時にそのひとりが、「どうぞあなたも、しもべらと一緒に行ってください」と言ったので、エリシャは「行きましょう」と答えた。
೩ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು.
4 そしてエリシャは彼らと一緒に行った。彼らはヨルダンへ行って木を切り倒したが、
೪ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ,
5 ひとりが材木を切り倒しているとき、おのの頭が水の中に落ちたので、彼は叫んで言った。「ああ、わが主よ。これは借りたものです」。
೫ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.
6 神の人は言った、「それはどこに落ちたのか」。彼がその場所を知らせると、エリシャは一本の枝を切り落し、そこに投げ入れて、そのおのの頭を浮ばせ、
೬ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.
7 「それを取りあげよ」と言ったので、その人は手を伸べてそれを取った。
೭ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.
8 かつてスリヤの王がイスラエルと戦っていたとき、家来たちと評議して「しかじかの所にわたしの陣を張ろう」と言うと、
೮ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು.
9 神の人はイスラエルの王に「あなたは用心して、この所をとおってはなりません。スリヤびとがそこに下ってきますから」と言い送った。
೯ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು.
10 それでイスラエルの王は神の人が自分に告げてくれた所に人をつかわし、警戒したので、その所でみずからを防ぎえたことは一、二回にとどまらなかった。
೧೦ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.
11 スリヤの王はこの事のために心を悩まし、家来たちを召して言った、「われわれのうち、だれがイスラエルの王と通じているのか、わたしに告げる者はないか」。
೧೧ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು.
12 ひとりの家来が言った、「王、わが主よ、だれも通じている者はいません。ただイスラエルの預言者エリシャが、あなたが寝室で語られる言葉でもイスラエルの王に告げるのです」。
೧೨ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.
13 王は言った、「彼がどこにいるか行って捜しなさい。わたしは人をやって彼を捕えよう」。時に「彼はドタンにいる」と王に告げる者があったので、
೧೩ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು.
14 王はそこに馬と戦車および大軍をつかわした。彼らは夜のうちに来て、その町を囲んだ。
೧೪ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.
15 神の人の召使が朝早く起きて出て見ると、軍勢が馬と戦車をもって町を囲んでいたので、その若者はエリシャに言った、「ああ、わが主よ、わたしたちはどうしましょうか」。
೧೫ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
16 エリシャは言った、「恐れることはない。われわれと共にいる者は彼らと共にいる者よりも多いのだから」。
೧೬ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,
17 そしてエリシャが祈って「主よ、どうぞ、彼の目を開いて見させてください」と言うと、主はその若者の目を開かれたので、彼が見ると、火の馬と火の戦車が山に満ちてエリシャのまわりにあった。
೧೭“ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.
18 スリヤびとがエリシャの所に下ってきた時、エリシャは主に祈って言った、「どうぞ、この人々の目をくらましてください」。するとエリシャの言葉のとおりに彼らの目をくらまされた。
೧೮ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.
19 そこでエリシャは彼らに「これはその道ではない。これはその町でもない。わたしについてきなさい。わたしはあなたがたを、あなたがたの尋ねる人の所へ連れて行きましょう」と言って、彼らをサマリヤへ連れて行った。
೧೯ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.
20 彼らがサマリヤにはいったとき、エリシャは言った、「主よ、この人々の目を開いて見させてください」。主は彼らの目を開かれたので、彼らが見ると、見よ、彼らはサマリヤのうちに来ていた。
೨೦ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.
21 イスラエルの王は彼らを見て、エリシャに言った、「わが父よ、彼らを撃ち殺しましょうか。彼らを撃ち殺しましょうか」。
೨೧ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, “ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?” ಎಂದು ಕೇಳಿದನು.
22 エリシャは答えた、「撃ち殺してはならない。あなたはつるぎと弓をもって、捕虜にした者どもを撃ち殺すでしょうか。パンと水を彼らの前に供えて食い飲みさせ、その主君のもとへ行かせなさい」。
೨೨ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.
23 そこで王は彼らのために盛んなふるまいを設けた。彼らが食い飲みを終ると彼らを去らせたので、その主君の所へ帰った。スリヤの略奪隊は再びイスラエルの地にこなかった。
೨೩ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.
24 この後スリヤの王ベネハダデはその全軍を集め、上ってきてサマリヤを攻め囲んだので、
೨೪ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
25 サマリヤに激しいききんが起った。すなわち彼らがこれを攻め囲んだので、ついに、ろばの頭一つが銀八十シケルで売られ、はとのふん一カブの四分の一が銀五シケルで売られるようになった。
೨೫ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
26 イスラエルの王が城壁の上をとおっていた時、ひとりの女が彼に呼ばわって、「わが主、王よ、助けてください」と言ったので、
೨೬ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.
27 彼は言った、「もし主があなたを助けられないならば、何をもってわたしがあなたを助けることができよう。打ち場の物をもってか、酒ぶねの物をもってか」。
೨೭ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,
28 そして王は女に尋ねた、「何事なのですか」。彼女は答えた、「この女はわたしにむかって『あなたの子をください。わたしたちは、きょうそれを食べ、あす、わたしの子を食べましょう』と言いました。
೨೮“ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,
29 それでわたしたちは、まずわたしの子を煮て食べましたが、次の日わたしが彼女にむかって『あなたの子をください。わたしたちはそれを食べましょう』と言いますと、彼女はその子を隠しました」。
೨೯ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.
30 王はその女の言葉を聞いて、衣を裂き、王は城壁の上をとおっていたが、民が見ると、その身に荒布を着けていた
೩೦ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.
31 そして王は言った「きょう、シャパテの子エリシャの首がその肩の上にすわっているならば、神がどんなにでもわたしを罰してくださるように」。
೩೧ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.
32 さてエリシャはその家に座していたが、長老たちもきて彼と共に座した。王は自分の所から人をつかわしたが、エリシャはその使者がまだ着かないうちに長老たちに言った、「あなたがたは、この人を殺す者がわたしの首を取るために、人をつかわすのを見ますか。その使者がきたならば、戸を閉じて、内に入れてはなりません。彼のうしろに、その主君の足音がするではありませんか」。
೩೨ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.
33 彼がなお彼らと語っているうちに、王は彼のもとに下ってきて言った、「この災は主から出たのです。わたしはどうしてこの上、主を待たなければならないでしょうか」。
೩೩ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.