< 列王記Ⅱ 7 >
1 エリシャは言った、「主の言葉を聞きなさい。主はこう仰せられる、『あすの今ごろサマリヤの門で、麦粉一セアを一シケルで売り、大麦二セアを一シケルで売るようになるであろう』」。
೧ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.
2 時にひとりの副官すなわち王がその人の手によりかかっていた者が神の人に答えて言った、「たとい主が天に窓を開かれても、そんな事がありえましょうか」。エリシャは言った、「あなたは自分の目をもってそれを見るであろう。しかしそれを食べることはなかろう」。
೨ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
3 さて町の門の入口に四人のらい病人がいたが、彼らは互に言った、「われわれはどうしてここに座して死を待たねばならないのか。
೩ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
4 われわれがもし町にはいろうといえば、町には食物が尽きているから、われわれはそこで死ぬであろう。しかしここに座していても死ぬのだ。いっその事、われわれはスリヤびとの陣営へ逃げて行こう。もし彼らがわれわれを生かしておいてくれるならば、助かるが、たといわれわれを殺しても死ぬばかりだ」。
೪ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.
5 そこで彼らはスリヤびとの陣営へ行こうと、たそがれに立ちあがったが、スリヤびとの陣営のほとりに行って見ると、そこにはだれもいなかった。
೫ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
6 これは主がスリヤびとの軍勢に戦車の音、馬の音、大軍の音を聞かせられたので、彼らは互に「見よ、イスラエルの王がわれわれを攻めるために、ヘテびとの王たちおよびエジプトの王たちを雇ってきて、われわれを襲うのだ」と言って、
೬ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
7 たそがれに立って逃げ、その天幕と、馬と、ろばを捨て、陣営をそのままにしておいて、命を全うしようと逃げたからである。
೭ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
8 そこでらい病人たちは陣営のほとりに行き、一つの天幕にはいって食い飲みし、そこから金銀、衣服を持ち出してそれを隠し、また来て、他の天幕に入り、そこからも持ち出してそれを隠した。
೮ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
9 そして彼らは互に言った、「われわれのしている事はよくない。きょうは良いおとずれのある日であるのに、黙っていて、夜明けまで待つならば、われわれは罰をこうむるであろう。さあ、われわれは行って王の家族に告げよう」。
೯ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.
10 そこで彼らは来て、町の門を守る者を呼んで言った、「わたしたちがスリヤびとの陣営に行って見ると、そこにはだれの姿も見えず、また人声もなく、ただ、馬とろばがつないであり、天幕はそのままでした」。
೧೦ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.
11 そこで門を守る者は呼ばわって、それを王の家族のうちに知らせた。
೧೧ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.
12 王は夜のうちに起きて、家来たちに言った、「スリヤびとがわれわれに対して図っている事をあなたがたに告げよう。彼らは、われわれの飢えているのを知って、陣営を出て野に隠れ、『イスラエルびとが町を出たら、いけどりにして、町に押し入ろう』と考えているのだ」。
೧೨ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು.
13 家来のひとりが答えて言った、「人々に、ここに残っている馬のうち五頭を連れてこさせてください。ここに残っているこれらの人々は、すでに滅びうせたイスラエルの全群衆と同じ運命にあうのですから。わたしたちは人をやってうかがわせましょう」。
೧೩ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.
14 そこで彼らはふたりの騎兵を選んだ。王はそれをつかわし、「行って見よ」と言って、スリヤびとの軍勢のあとをつけさせたので、
೧೪ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
15 彼らはそのあとを追ってヨルダンまで行ったが、道にはすべて、スリヤびとがあわてて逃げる時に捨てていった衣服と武器が散らばっていた。その使者は帰ってきて、これを王に告げた。
೧೫ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
16 そこで民が出ていって、スリヤびとの陣営をかすめたので、麦粉一セアは一シケルで売られ、大麦二セアは一シケルで売られ、主の言葉のとおりになった。
೧೬ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
17 王は自分がその人の手によりかかっていた、あの副官を立てて門を管理させたが、民は門で彼を踏みつけたので、彼は死んだ。すなわち、王が神の人のところに下ってきた時、神の人が言ったとおりであった。
೧೭ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
18 これは神の人が王にむかって、「あすの今ごろ、サマリヤの門で大麦二セアを一シケルで売り、麦粉一セアを一シケルで売るようになるであろう」と言ったときに、
೧೮ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.
19 その副官が神の人に答えて、「たとい主が天に窓を開かれても、そんな事がありえようか」と言ったからである。そのとき神の人は「あなたは自分の目をもってそれを見るであろう。しかしそれを食べることはなかろう」と言ったが、
೧೯ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.
20 これはそのとおり彼に臨んだ。すなわち民が門で彼を踏みつけたので彼は死んだ。
೨೦ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.