< サムエル記Ⅱ 14 >
1 ゼルヤの子ヨアブは王の心がアブサロムに向かっているのを知った。
೧ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು
2 そこでヨアブはテコアに人をつかわして、そこからひとりの賢い女を連れてこさせ、その女に言った、「あなたは悲しみのうちにある人をよそおって、喪服を着、油を身に塗らず、死んだ人のために長いあいだ悲しんでいる女のように、よそおって、
೨ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
3 王のもとに行き、しかじかと彼に語りなさい」。こうしてヨアブはその言葉を彼女の口に授けた。
೩ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.
4 テコアの女は王のもとに行き、地に伏して拝し、「王よ、お助けください」と言った。
೪ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.
5 王は女に言った、「どうしたのか」。女は言った、「まことにわたしは寡婦でありまして、夫は死にました。
೫ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,
6 つかえめにはふたりの子どもがあり、ふたりは野で争いましたが、だれも彼らを引き分ける者がなかったので、ひとりはついに他の者を撃って殺しました。
೬“ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
7 すると全家族がつかえめに逆らい立って、『兄弟を撃ち殺した者を引き渡たすがよい。われわれは彼が殺したその兄弟の命のために彼を殺そう』と言い、彼らは世継をも殺そうとしました。こうして彼らは残っているわたしの炭火を消して、わたしの夫の名をも、跡継をも、地のおもてにとどめないようにしようとしています」。
೭ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.
8 王は女に言った、「家に帰りなさい。わたしはあなたのことについて命令を下します」。
೮ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.
9 テコアの女は王に言った、「わが主、王よ、わたしとわたしの父の家にその罪を帰してください。どうぞ王と王の位には罪がありませんように」。
೯ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.
10 王は言った、「もしあなたに何か言う者があれば、わたしの所に連れてきなさい。そうすれば、その人は重ねてあなたに触れることはないでしょう」。
೧೦ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು.
11 女は言った、「どうぞ王が、あなたの神、主をおぼえて、血の報復をする者に重ねて滅ぼすことをさせず、わたしの子の殺されることのないようにしてください」。王は言った、「主は生きておられる。あなたの子の髪の毛一筋も地に落ちることはないでしょう」。
೧೧ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.
12 女は言った、「どうぞ、つかえめにひと言、わが主、王に言わせてください」。ダビデは言った、「言いなさい」。
೧೨ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.
13 女は言った、「あなたは、それならばどうして、神の民に向かってこのような事を図られたのですか。王は今この事を言われたことによって自分を罪ある者とされています。それは王が追放された者を帰らせられないからです。
೧೩ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?
14 わたしたちはみな死ななければなりません。地にこぼれた水の再び集めることのできないのと同じです。しかし神は、追放された者が捨てられないように、てだてを設ける人の命を取ることはなさいません。
೧೪ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
15 わたしがこの事を王、わが主に言おうとして来たのは、わたしが民を恐れたからです。つかえめは、こう思ったのです、『王に申し上げよう。王は、はしための願いのようにしてくださるかもしれない。
೧೫ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, ‘ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು.
16 王は聞いてくださる。わたしとわたしの子を共に滅ぼして神の嗣業から離れさせようとする人の手から、はしためを救い出してくださるのだから』。
೧೬ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
17 つかえめはまた、こう思ったのです、『王、わが主の言葉はわたしを安心させるであろう』と。それは王、わが主は神の使のように善と悪を聞きわけられるからです。どうぞあなたの神、主があなたと共におられますように」。
೧೭ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.
18 王は女に答えて言った、「わたしが問うことに隠さず答えてください」。女は言った、「王、わが主よ、どうぞ言ってください」。
೧೮ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.
19 王は言った、「このすべての事において、ヨアブの手があなたと共にありますか」。女は答えた、「あなたはたしかに生きておられます。王、わが主よ、すべて王、わが主の言われた事から人は右にも左にも曲ることはできません。わたしに命じたのは、あなたのしもべヨアブです。彼がつかえめの口に、これらの言葉をことごとく授けたのです。
೧೯ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.
20 事のなりゆきを変えるため、あなたのしもべヨアブがこの事をしたのです。わが君には神の使の知恵のような知恵があって、地の上のすべてのことを知っておられます」。
೨೦ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು.
21 そこで王はヨアブに言った、「この事を許す。行って、若者アブサロムを連れ帰るがよい」。
೨೧ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ” ಅಂದನು.
22 ヨアブは地にひれ伏して拝し、王を祝福した。そしてヨアブは言った、「わが主、王よ、王がしもべの願いを許されたので、きょうしもべは、あなたの前に恵みを得たことを知りました」。
೨೨ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.
23 そこでヨアブは立ってゲシュルに行き、アブサロムをエルサレムに連れてきた。
೨೩ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
24 王は言った、「彼を自分の家に引きこもらせるがよい。わたしの顔を見てはならない」。こうしてアブサロムは自分の家に引きこもり、王の顔を見なかった。
೨೪ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.
25 さて全イスラエルのうちにアブサロムのように、美しさのためほめられた人はなかった。その足の裏から頭の頂まで彼には傷がなかった。
೨೫ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.
26 アブサロムがその頭を刈る時、その髪の毛をはかったが、王のはかりで二百シケルあった。毎年の終りにそれを刈るのを常とした。それが重くなると、彼はそれを刈ったのである。
೨೬ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.
27 アブサロムに三人のむすこと、タマルという名のひとりの娘が生れた。タマルは美しい女であった。
೨೭ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.
28 こうしてアブサロムは満二年の間エルサレムに住んだが、王の顔を見なかった。
೨೮ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.
29 そこでアブサロムはヨアブを王のもとにつかわそうとして、ヨアブの所に人をつかわしたが、ヨアブは彼の所にこようとはしなかった。彼は再び人をつかわしたがヨアブはこようとはしなかった。
೨೯ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
30 そこでアブサロムはその家来に言った、「ヨアブの畑はわたしの畑の隣にあって、そこに大麦がある。行ってそれに火を放ちなさい」。アブサロムの家来たちはその畑に火を放った。
೩೦ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
31 ヨアブは立ってアブサロムの家にきて彼に言った、「どうしてあなたの家来たちはわたしの畑に火を放ったのですか」。
೩೧ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿ ಹಚ್ಚಿದ್ದೇಕೆ?” ಎಂದು ಅವನನ್ನು ಕೇಳಿದನು.
32 アブサロムはヨアブに言った、「わたしはあなたに人をつかわして、ここへ来るようにと言ったのです。あなたを王のもとにつかわし、『なんのためにわたしはゲシュルからきたのですか。なおあそこにいたならば良かったでしょうに』と言わせようとしたのです。それゆえ今わたしに王の顔を見させてください。もしわたしに罪があるなら王にわたしを殺させてください」。
೩೨ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.
33 そこでヨアブは王のもとへ行って告げたので、王はアブサロムを召しよせた。彼は王のもとにきて、王の前に地にひれ伏して拝した。王はアブサロムに口づけした。
೩೩ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.