< サムエル記Ⅱ 19 >
1 時にヨアブに告げる者があって、「見よ、王はアブサロムのために泣き悲しんでいる」と言った。
೧ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.
2 こうしてその日の勝利はすべての民の悲しみとなった。それはその日、民が、「王はその子のために悲しんでいる」と人の言うのを聞いたからである。
೨ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
3 そして民はその日、戦いに逃げて恥じている民がひそかに、はいるように、ひそかに町にはいった。
೩ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.
4 王は顔をおおった。そして王は大声に叫んで、「わが子アブサロムよ。アブサロム、わが子よ、わが子よ」と言った。
೪ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.
5 時にヨアブは家にはいり、王のもとにきて言った、「あなたは、きょう、あなたの命と、あなたのむすこ娘たちの命、およびあなたの妻たちの命と、めかけたちの命を救ったすべての家来の顔をはずかしめられました。
೫ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.
6 それはあなたが自分を憎む者を愛し、自分を愛する者を憎まれるからです。あなたは、きょう、軍の長たちをも、しもべたちをも顧みないことを示されました。きょう、わたしは知りました。もし、アブサロムが生きていて、われわれが皆きょう死んでいたら、あなたの目にかなったでしょう。
೬ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.
7 今立って出て行って、しもべたちにねんごろに語ってください。わたしは主をさして誓います。もしあなたが出られないならば、今夜あなたと共にとどまる者はひとりもないでしょう。これはあなたが若い時から今までにこうむられたすべての災よりも、あなたにとって悪いでしょう」。
೭ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
8 そこで王は立って門のうちの座についた。人々はすべての民に、「見よ、王は門に座している」と告げたので、民はみな王の前にきた。さてイスラエルはおのおのその天幕に逃げ帰った。
೮ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
9 そしてイスラエルのもろもろの部族の中で民はみな争って言った、「王はわれわれを敵の手から救い出し、またわれわれをペリシテびとの手から助け出された。しかし今はアブサロムのために国のそとに逃げておられる。
೯ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
10 またわれわれが油を注いで、われわれの上に立てたアブサロムは戦いで死んだ。それであるのに、どうしてあなたがたは王を導きかえることについて、何をも言わないのか」。
೧೦ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
11 ダビデ王は祭司たちザドクとアビヤタルとに人をつかわして言った、「ユダの長老たちに言いなさい、『全イスラエルの言葉が王に達したのに、どうしてあなたがたは王をその家に導きかえる最後の者となるのですか。
೧೧ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
12 あなたがたはわたしの兄弟、わたしの骨肉です。それにどうして王を導きかえる最後の者となるのですか』。
೧೨ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.
13 またアマサに言いなさい、『あなたはわたしの骨肉ではありませんか。これから後あなたをヨアブに代えて、わたしの軍の長とします。もしそうしないときは、神が幾重にもわたしを罰してくださるように』」。
೧೩ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
14 こうしてダビデはユダのすべての人の心を、ひとりのように自分に傾けさせたので、彼らは王に、「どうぞあなたも、すべての家来たちも帰ってきてください」と言いおくった。
೧೪ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
15 そこで王は帰ってきてヨルダンまで来ると、ユダの人人は王を迎えるためギルガルにきて、王にヨルダンを渡らせた。
೧೫ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
16 バホリムのベニヤミンびと、ゲラの子シメイは、急いでユダの人々と共に下ってきて、ダビデ王を迎えた。
೧೬ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.
17 一千人のベニヤミンびとが彼と共にいた。またサウルの家のしもべヂバもその十五人のむすこと、二十人のしもべを従えて、王の前にヨルダンに駆け下った。
೧೭ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
18 そして王の家族を渡し、王の心にかなうことをしようと渡し場を渡った。ゲラの子シメイはヨルダンを渡ろうとする時、王の前にひれ伏し、
೧೮ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,
19 王に言った、「どうぞわが君が、罪をわたしに帰しられないように。またわが君、王のエルサレムを出られた日に、しもべがおこなった悪い事を思い出されないように。どうぞ王がそれを心に留められないように。
೧೯“ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
20 しもべは自分が罪を犯したことを知っています。それゆえ、見よ、わたしはきょう、ヨセフの全家のまっ先に下ってきて、わが主、王を迎えるのです」。
೨೦ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
21 ゼルヤの子アビシャイは答えて言った、「シメイは主が油を注がれた者をのろったので、そのために殺されるべきではありませんか」。
೨೧ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
22 ダビデは言った、「あなたがたゼルヤの子たちよ、あなたがたとなにのかかわりがあって、あなたがたはきょうわたしに敵対するのか。きょう、イスラエルのうちで人を殺して良かろうか。わたしが、きょうイスラエルの王となったことを、どうして自分で知らないことがあろうか」。
೨೨ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು.
23 こうして王はシメイに、「あなたを殺さない」と言って、王は彼に誓った。
೨೩ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
24 サウルの子メピボセテは下ってきて王を迎えた。彼は王が去った日から安らかに帰る日まで、その足を飾らず、そのひげを整えず、またその着物を洗わなかった。
೨೪ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
25 彼がエルサレムからきて王を迎えた時、王は彼に言った、「メピボセテよ、あなたはどうしてわたしと共に行かなかったのか」。
೨೫ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
26 彼は答えた、「わが主、王よ、わたしの家来がわたしを欺いたのです。しもべは彼に、『わたしのために、ろばにくらを置け。わたしはそれに乗って王と共に行く』と言ったのです。しもべは足なえだからです。
೨೬ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
27 ところが彼はしもべのことをわが主、王の前に、あしざまに言ったのです。しかし、わが主、王は神の使のようでいらせられます。それで、あなたの良いと思われることをしてください。
೨೭ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.
28 わたしの父の全家はわが主、王の前にはみな死んだ人にすぎないのに、あなたはしもべを、あなたの食卓で食事をする人々のうちに置かれました。わたしになんの権利があって、重ねて王に訴えることができましょう」。
೨೮ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
29 王は彼に言った、「あなたはどうしてなおも自分のことを言うのですか。わたしは決めました。あなたとヂバとはその土地を分けなさい」。
೨೯ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
30 メピボセテは王に言った、「わが主、王が安らかに家に帰られたのですから、彼にそれをみな取らせてください」。
೩೦ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.
31 さてギレアデびとバルジライはロゲリムから下ってきて、ヨルダンで王を見送るため、王と共にヨルダンに進んだ。
೩೧ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
32 バルジライは、ひじょうに年老いた人で八十歳であった。彼はまた、ひじょうに裕福な人であったので、王がマハナイムにとどまっている間、王を養った。
೩೨ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
33 王はバルジライに言った、「わたしと一緒に渡って行きなさい。わたしはエルサレムであなたをわたしと共におらせて養いましょう」。
೩೩ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.
34 バルジライは王に言った、「わたしは、なお何年いきながらえるので、王と共にエルサレムに上るのですか。
೩೪ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
35 わたしは今日八十歳です。わたしに、良いこと悪いことがわきまえられるでしょうか。しもべは食べるもの、飲むものを味わうことができましょうか。わたしは歌う男や歌う女の声をまだ聞くことができましょうか。それであるのに、しもべはどうしてなおわが主、王の重荷となってよろしいでしょうか。
೩೫ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?
36 しもべは王と共にヨルダンを渡って、ただ少し行きましょう。どうして王はこのような報いをわたしに報いられなければならないのでしょうか。
೩೬ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
37 どうぞしもべを帰らせてください。わたしは自分の町で、父母の墓の近くで死にます。ただし、あなたのしもべキムハムがここにおります。わが主、王と共に彼を渡って行かせてください。またあなたが良いと思われる事を彼にしてください」。
೩೭ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
38 王は答えた、「キムハムはわたしと共に渡って行かせます。わたしは、あなたが良いと思われる事を彼にしましょう。またあなたが望まれることはみな、あなたのためにいたします」。
೩೮ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
39 こうして民はみなヨルダンを渡った。王は渡った時、バルジライに口づけして、祝福したので、彼は自分の家に帰っていった。
೩೯ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.
40 王はギルガルに進んだ。キムハムも彼と共に進んだ。ユダの民はみな王を送り、イスラエルの民の半ばもまたそうした。
೪೦ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
41 さてイスラエルの人々はみな王の所にきて、王に言った、「われわれの兄弟であるユダの人々は、何ゆえにあなたを盗み去って、王とその家族、およびダビデに伴っているすべての従者にヨルダンを渡らせたのですか」。
೪೧ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
42 ユダの人々はみなイスラエルの人々に答えた、「王はわれわれの近親だからです。あなたがたはどうしてこの事で怒られるのですか。われわれが少しでも王の物を食べたことがありますか。王が何か賜物をわれわれに与えたことがありますか」。
೪೨ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
43 イスラエルの人々はユダの人々に答えた、「われわれは王のうちに十の分を持っています。またダビデのうちにもわれわれはあなたがたよりも多くを持っています。それであるのに、どうしてあなたがたはわれわれを軽んじたのですか。われらの王を導き帰ろうと最初に言ったのはわれわれではないのですか」。しかしユダの人々の言葉はイスラエルの人々の言葉よりも激しかった。
೪೩ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.