< サムエル記Ⅱ 23 >
1 これはダビデの最後の言葉である。エッサイの子ダビデの託宣、すなわち高く挙げられた人、ヤコブの神に油を注がれた人、イスラエルの良き歌びとの託宣。
೧ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:
2 「主の霊はわたしによって語る、その言葉はわたしの舌の上にある。
೨“ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.
3 イスラエルの神は語られた、イスラエルの岩はわたしに言われた、『人を正しく治める者、神を恐れて、治める者は、
೩ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,
4 朝の光のように、雲のない朝に、輝きでる太陽のように、地に若草を芽ばえさせる雨のように人に臨む』。
೪ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.
5 まことに、わが家はそのように、神と共にあるではないか。それは、神が、よろず備わって確かなとこしえの契約をわたしと結ばれたからだ。どうして彼はわたしの救と願いを、皆なしとげられぬことがあろうか。
೫ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
6 しかし、よこしまな人は、いばらのようで、手をもって取ることができないゆえ、みな共に捨てられるであろう。
೬ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,
7 これに触れようとする人は鉄や、やりの柄をもって武装する、彼らはことごとく火で焼かれるであろう」。
೭ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”
8 ダビデの勇士たちの名は次のとおりである。タクモンびとヨセブ・バッセベテはかの三人のうちの長であったが、彼はいちじに八百人に向かって、やりをふるい、それを殺した。
೮ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
9 彼の次はアホアびとドドの子エレアザルであって、三勇士のひとりである。彼は、戦おうとしてそこに集まったペリシテびとに向かって戦いをいどみ、イスラエルの人々が退いた時、ダビデと共にいたが、
೯ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
10 立ってペリシテびとを撃ち、ついに手が疲れ、手がつるぎに着いて離れないほどになった。その日、主は大いなる勝利を与えられた。民は彼のあとに帰ってきて、ただ殺された者をはぎ取るばかりであった。
೧೦ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.
11 彼の次はハラルびとアゲの子シャンマであった。ある時、ペリシテびとはレヒに集まった。そこに一面にレンズ豆を作った地所があった。民はペリシテびとの前から逃げたが、
೧೧ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.
12 彼はその地所の中に立って、これを防ぎ、ペリシテびとを殺した。そして主は大いなる救を与えられた。
೧೨ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.
13 三十人の長たちのうちの三人は下って行って刈入れのころに、アドラムのほら穴にいるダビデのもとにきた。時にペリシテびとの一隊はレパイムの谷に陣を取っていた。
೧೩ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,
14 その時ダビデは要害におり、ペリシテびとの先陣はベツレヘムにあったが、
೧೪ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.
15 ダビデは、せつに望んで、「だれかベツレヘムの門のかたわらにある井戸の水をわたしに飲ませてくれるとよいのだが」と言った。
೧೫ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.
16 そこでその三人の勇士たちはペリシテびとの陣を突き通って、ベツレヘムの門のかたわらにある井戸の水を汲み取って、ダビデのもとに携えてきた。しかしダビデはそれを飲もうとはせず、主の前にそれを注いで、
೧೬ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
17 言った、「主よ、わたしは断じて飲むことをいたしません。いのちをかけて行った人々の血を、どうしてわたしは飲むことができましょう」。こうして彼はそれを飲もうとはしなかった。三勇士はこれらのことを行った。
೧೭ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.
18 ゼルヤの子ヨアブの兄弟アビシャイは三十人の長であった。彼は三百人に向かって、やりをふるい、それを殺した。そして、彼は三人と共に名を得た。
೧೮ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.
19 彼は三十人のうち最も尊ばれた者で、彼らの長となった。しかし、かの三人には及ばなかった。
೧೯ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?
20 エホヤダの子ベナヤはカブジエル出身の勇士であって、多くのてがらを立てた。彼はモアブのアリエルのふたりの子を撃ち殺した。彼はまた雪の日に下っていって、穴の中でししを撃ち殺した。
೨೦ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
21 彼はまた姿のうるわしいエジプトびとを撃ち殺した。そのエジプトびとは手にやりを持っていたが、ベナヤはつえをとってその所に下っていき、エジプトびとの手からやりをもぎとって、そのやりをもって殺した。
೨೧ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
22 エホヤダの子ベナヤはこれらの事をして三勇士と共に名を得た。
೨೨ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
23 彼は三十人のうちに有名であったが、かの三人には及ばなかった。ダビデは彼を侍衛の長とした。
೨೩ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
24 三十人のうちにあったのは、ヨアブの兄弟アサヘル。ベツレヘム出身のドドの子エルハナン。
೨೪ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,
೨೫ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.
26 パルテびとヘレヅ。テコア出身のイッケシの子イラ。
೨೬ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,
27 アナトテ出身のアビエゼル。ホシャびとメブンナイ。
೨೭ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,
೨೮ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,
29 ネトパ出身のバアナの子ヘレブ。ベニヤミンびとのギベアから出たリバイの子イッタイ。
೨೯ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,
೩೦ಪಿರಾತೋನ್ಯನಾದ ಬೆನಾಯ, ನಹಲೇ ಗಾಷಿನವನಾದ ಹಿದ್ದೈ.
31 アルバテびとアビアルボン。バホリム出身のアズマウテ。
೩೧ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,
32 シャルボン出身のエリヤバ。ヤセンの子たち。ヨナタン。
೩೨ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,
33 ハラルびとシャンマ。ハラルびとシャラルの子アヒアム。
೩೩ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,
34 マアカ出身のアハスバイの子エリペレテ。ギロ出身のアヒトペルの子エリアム。
೩೪ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,
೩೫ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,
೩೬ಚೋಬ ಊರಿನ ನಾತಾನ ಎಂಬುವನ ಮಗನಾದ ಇಗಾಲ್, ಗಾದ್ಯನಾದ ಬಾನೀ,
37 アンモンびとゼレク。ゼルヤの子ヨアブの武器を執る者、ベエロテ出身のナハライ。
೩೭ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ
೩೮ಇತ್ರೀಯರಾದ ಈರಾ ಮತ್ತು ಗಾರೇಬರು,
೩೯ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.