< アモス書 5 >

1 イスラエルの家よ、わたしが悲しみの歌をもって、あなたがたについて宣べるこの言葉を聞け、
ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:
2 「おとめイスラエルは倒れて、また起き上がらず、彼女はおのれの地に投げ倒されてこれを起す者がない」。
ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.
3 主なる神はこう言われる、「イスラエルの家では、千人出た町は百人残り、百人出た町は十人残る」。
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”
4 主はイスラエルの家にこう言われる、「あなたがたはわたしを求めよ、そして生きよ。
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
5 ベテルを求めるな、ギルガルに行くな。ベエルシバにおもむくな。ギルガルは必ず捕えられて行き、ベテルは無に帰するからである」。
ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.
6 あなたがたは主を求めよ、そして生きよ。さもないと主は火のようにヨセフの家に落ち下られる。火はこれを焼くが、ベテルのためにこれを消す者はひとりもない。
ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
7 あなたがた、公道をにがよもぎに変え、正義を地に投げ捨てる者よ。
ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”
8 プレアデスおよびオリオンを造り、暗黒を朝に変じ、昼を暗くして夜となし、海の水を呼んで、地のおもてに注がれる者、その名は主という。
ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!
9 主は滅びをたちまち強い者に臨ませられるので、滅びはついに城に臨む。
ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.
10 彼らは門にいて戒める者を憎み、真実を語る者を忌みきらう。
೧೦ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.
11 あなたがたは貧しい者を踏みつけ、彼から麦の贈り物をとるゆえ、あなたがたは切り石の家を建てても、その中に住むことはできない。美しいぶどう畑を作っても、その酒を飲むことはできない。
೧೧ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
12 わたしは知る、あなたがたのとがは多く、あなたがたの罪は大きいからである。あなたがたは正しい者をしえたげ、まいないを取り、門で貧しい者を退ける。
೧೨ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
13 それゆえ、このような時には賢い者は沈黙する、これは悪い時だからである。
೧೩ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.
14 善を求めよ、悪を求めるな。そうすればあなたがたは生きることができる。またあなたがたが言うように、万軍の神、主はあなたがたと共におられる。
೧೪ಕೆಟ್ಟದ್ದನಲ್ಲ ಒಳ್ಳೆಯದನ್ನು, ಅನುಸರಿಸಿ ಬಾಳಿರಿ. ನೀವು ಅಂದುಕೊಂಡಂತೆ, ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
15 悪を憎み、善を愛し、門で公義を立てよ。万軍の神、主は、あるいはヨセフの残りの者をあわれまれるであろう。
೧೫ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
16 それゆえ、主なる万軍の神、主はこう言われる、「すべての広場で泣くことがあろう。すべてのちまたで人々は『悲しいかな、悲しいかな』と言う。また彼らは農夫を呼んできて嘆かせ、巧みな泣き女を招いて泣かせ、
೧೬ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
17 またすべてのぶどう畑にも泣くことがあろう。それはわたしがあなたがたの中を通るからである」と主は言われる。
೧೭ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.
18 わざわいなるかな、主の日を望む者よ、あなたがたは何ゆえ主の日を望むのか。これは暗くて光がない。
೧೮ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
19 人がししの前を逃れてもくまに出会い、また家にはいって、手を壁につけると、へびにかまれるようなものである。
೧೯ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
20 主の日は暗くて、光がなく、薄暗くて輝きがないではないか。
೨೦ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
21 わたしはあなたがたの祭を憎み、かつ卑しめる。わたしはまた、あなたがたの聖会を喜ばない。
೨೧“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.
22 たといあなたがたは燔祭や素祭をささげても、わたしはこれを受けいれない。あなたがたの肥えた獣の酬恩祭はわたしはこれを顧みない。
೨೨ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
23 あなたがたの歌の騒がしい音をわたしの前から断て。あなたがたの琴の音は、わたしはこれを聞かない。
೨೩ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ.
24 公道を水のように、正義をつきない川のように流れさせよ。
೨೪ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.
25 「イスラエルの家よ、あなたがたは四十年の間、荒野でわたしに犠牲と供え物をささげたか。
೨೫ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?
26 かえってあなたがたの王シクテをにない、あなたがたが自分で作ったあなたがたの偶像、星の神、キウンをになった。
೨೬ಸಿಕ್ಕೊತ್ ಎಂಬ ನಿಮ್ಮ ಒಡೆಯನನ್ನು, ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನು, ನಿರ್ಮಿಸಿಕೊಂಡಿರುವ ನಿಮ್ಮ ಮೂರ್ತಿಗಳನ್ನು ನೀವು ಹೊತ್ತುಕೊಂಡು ಹೋಗಬೇಕಾಗುವುದು.
27 それゆえわたしはあなたがたをダマスコのかなたに捕え移す」と、その名を万軍の神ととなえられる主は言われる。
೨೭ನಾನು ನಿಮ್ಮನ್ನು ದಮಸ್ಕದ ಆಚೆ ಸೆರೆಗೆ ಕಳುಹಿಸುವೆನು” ಸೇನಾಧೀಶ್ವರ ದೇವರೆಂಬ, ಯೆಹೋವನು ಇದನ್ನು ನುಡಿದಿದ್ದಾನೆ.

< アモス書 5 >