< アモス書 6 >
1 「わざわいなるかな、安らかにシオンにいる者、また安心してサマリヤの山にいる者、諸国民のかしらのうちの著名な人々で、イスラエルの家がきて従う者よ。
೧ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!
2 カルネに渡って見よ。そこから大ハマテに行き、またペリシテびとのガテに下って見よ。彼らはこれらの国にまさっているか。彼らの土地はあなたがたの土地よりも大きいか。
೨ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”
3 あなたがたは災の日を遠ざけ、強暴の座を近づけている。
೩ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.
4 わざわいなるかな、みずから象牙の寝台に伏し、長いすの上に身を伸ばし、群れのうちから小羊を取り、牛舎のうちから子牛を取って食べ、
೪ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
5 琴の音に合わせて歌い騒ぎ、ダビデのように楽器を造り出し、
೫ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.
6 鉢をもって酒を飲み、いとも尊い油を身にぬり、ヨセフの破滅を悲しまない者たちよ。
೬ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.
7 それゆえ今、彼らは捕われて、捕われ人のまっ先に立って行く。そしてかの身を伸ばした者どもの騒ぎはやむであろう」。
೭ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು.
8 主なる神はおのれによって誓われた、(万軍の神、主は言われる、)「わたしはヤコブの誇を忌みきらい、そのもろもろの宮殿を憎む。わたしはこの町とすべてその中にいる者を渡す」。
೮ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”
9 一つの家に十人の者が残っていても、彼らは死に、
೯ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು.
10 そしてその親戚、すなわちこれを焼く者は、骨を家から運びだすために、これを取り上げ、またその家の奥にいる者に向かって、「まだあなたと共にいる者があるか」と言い、「ない」との答がある時、かの人はまた「声を出すな、主の名をとなえるな」と言うであろう。
೧೦ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”
11 見よ、主は命じて、大きな家を撃って、みじんとなし、小さな家を撃って、切れ切れとされる。
೧೧ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.
12 馬は岩の上を走るだろうか。人は牛で海を耕すだろうか。ところがあなたがたは公道を毒に変じ、正義の実をにがよもぎに変じた。
೧೨ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.
13 あなたがたはロデバルを喜び、「われわれは自分の力でカルナイムを得たではないか」と言う。
೧೩ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.
14 それゆえ、万軍の神、主は言われる、「イスラエルの家よ、見よ、わたしは一つの国民を起して、あなたがたに敵対させる。彼らはハマテの入口からアラバの川まであなたがたを悩ます」。
೧೪ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”